Homeಕರ್ನಾಟಕ‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಮತ್ತು ರಾಷ್ಟ್ರಗೀತೆಯನ್ನು ನಿಂದಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ, ಅವರಿಗೆ ಜವಬ್ದಾರಿಯುತ ಸ್ಥಾನಗಳನ್ನು ನೀಡಿದ ಸರ್ಕಾರದ ನಡೆಯನ್ನು ಪ್ರತಿಭಟಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಸೋಮವಾರ ರಾಜೀನಾಮೆ ಘೋಷಿಸಿದ್ದಾರೆ.

ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಹಂಪನಾ, “ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ” ಎಂದು ಹೇಳಿದ್ದು, ಮುಖ್ಯಮಂತ್ರಿ ತನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕುವೆಂಪುರವರನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತಿಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ‘ಚಕ್ರತೀರ್ಥ’ದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ: ನಾಡೋಜ ಹಂಪನಾ

ಇದು, ‘ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ’ ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ ಎಂದು ಅವರು ಮುಖ್ಯಮಂತ್ರಿಗೆ ತನ್ನ ಪತ್ರದಲ್ಲಿ ಬರೆದಿದ್ದಾರೆ.

“ಮಹಾಕವಿ ಕುವೆಂಪು ಅವರು ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು” ಎಂದು ಅವರು ತಮ್ಮ ಪತ್ರದಲ್ಲಿ ಸರ್ಕಾರವನ್ನು ನೆನಪಿಸಿದ್ದಾರೆ.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ಅವರು ಮುಖ್ಯಮಂತ್ರಿಗೆ ಬರೆದ ಪತ್ರದ ಪೂರ್ಣ ಪಠ್ಯ ಹೀಗಿದೆ

ಶ್ರೀ. ಬಸವರಾಜ ಬೊಮ್ಮಾಯಿ ಅವರು
ಸನ್ಮಾನ್ಯ ಮುಖ್ಯಮಂತ್ರಿಗಳು,
ವಿಧಾನಸೌಧ, ಬೆಂಗಳೂರು.

ಮಾನ್ಯರೇ,

ವಿಷಯ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು.

ಆದರೆ ಇಂದು ಕುವೆಂಪುರವರನ್ನೂ, ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ.

ಇದರಿಂದ “ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ” ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ಜತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ.

ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಪ್ರಾರ್ಥಿಸುತ್ತೇನೆ.

ತಮ್ಮ ವಿಶ್ವಾಸಿ
ಹಂಪನಾ
ಹಂಪನಾ. ನಾಗರಾಜಯ್ಯ

30.05.2022
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...