Homeಮುಖಪುಟಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

ಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

- Advertisement -
- Advertisement -

ಕೋಲ್ಕತ್ತಾದಲ್ಲಿಲ ಅಮಿತ್ ಷಾ ಅವರ ರ್‍ಯಾಲಿಯಲ್ಲಿ‘ ಗೋಲಿ ’ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಇದು ದೆಹಲಿಯಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ  ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ತಮ್ಮ ಟಿಎಂಸಿ ಪಕ್ಷವು ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿನ ಹಿಂಸಾಚಾರವು “ಯೋಜಿತ ನರಮೇಧ”ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರು ಕೇಂದ್ರದ ಅಡಿಯಲ್ಲಿದ್ದಾರೆ. ದೆಹಲಿ ಪೊಲೀಸರು, ಸಿಆರ್‌ಪಿಎಫ್ ಮತ್ತು ಸಿಐಎಸ್‌ಎಫ್ ಇದ್ದರೂ ಸಹ ಗಲಭೆ ತಡೆಯಲು ಏನೂ ಮಾಡಲಿಲ್ಲ. ಎಷ್ಟು ನಾಚಿಕೆಗೇಡಿನ ಸಂಗತಿಯೆಂದರೆ ಇದಕ್ಕೆ ಬಿಜೆಪಿ ಕ್ಷಮೆ ಕೂಡ ಕೋರಿಲ್ಲ ಎಂದು ಅವರು ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ದೆಹಲಿ ಗಲಭೆ ಪೀಡಿತರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುವಂತೆ ಬ್ಯಾನರ್ಜಿ ತನ್ನ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಗಲಭೆಯಲ್ಲಿ ಕೊಲ್ಲಲ್ಪಟ್ಟವರ ಆತ್ಮಕ್ಕಾಗಿ ಒಂದು ನಿಮಿಷದ ಮೌನಾಚರಣೆ ಮಾಡಿದ ಅವರು, ಬಿಜೆಪಿಯ ಕ್ರಮವನ್ನು ಖಂಡಿಸಿ ಪ್ರತಭಟನೆಗಳನ್ನು ಆಯೋಜಿಸಲು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗೋಲಿಮಾರೋ ಘೋಷಣೆಗಳ ಕುರಿತು ಮಾತನಾಡಿದ ಅವರು ಬೆಂಕಿಯುಗುಳುವ ಪ್ರಚೋದನಕಾರಿ ಘೋಷಣೆಗಳು ಕಾನೂನುಬಾಹಿರವಾಗಿವೆ. ಅದನ್ನು ಕೂಗಿದ ಎಲ್ಲರಿಗೂ ದಂಡ ವಿಧಿಸಲಾಗುತ್ತದೆ. ಇದು ಕೋಲ್ಕತಾ, ದೆಹಲಿಯಲ್ಲ. ಇದು ಬಂಗಾಳ. ನಾವು ಒಬ್ಬ ವ್ಯಕ್ತಿಯನ್ನು ಉಳಿಸಿದರೆ, ಇತರರು ಅವರನ್ನು ಪ್ರೋತ್ಸಾಹಿಸುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವವರು, ದೆಹಲಿ ಘರ್ಷಣೆಗೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡಿದವರನ್ನು ಏಕೆ ಬಂಧಿಸಲಾಗಿಲ್ಲ ಎಂದು ಪ್ರಶ್ನಿಸಿದ ಅವರು, ನಿನ್ನೆ ಘೋಷನೆ ಕೂಗಿದವರನ್ನು ಇಂದು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

“ಯಾರು ದೇಶದ್ರೋಹಿಗಳು ಎಂಬುದನ್ನು ಜನರು ನಿರ್ಧರಿಸುತ್ತಾರೆ. ಅದನ್ನು ನಿರ್ಧರಿಸಲು ನೀವು ಯಾರು? ” ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಈಗಾಗಲೇ ಕೆಲವು ಜನರನ್ನು ಬಂಧಿಸಲಾಗಿದೆ ಮತ್ತು ಇತರರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದ ಅವರು, ಘೋಷಣೆ ಕೂಗಿದವರನ್ನು ಗುರುತಿಸಲು ಸಹಾಯ ಮಾಡುವಂತೆ ಅವರು ಪಕ್ಷದ ಕಾರ್ಯಕರ್ತರನ್ನು ಕೇಳಿದ್ದಾರೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಆದರೆ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಗೋಲಿ ಮಾರೊ ಘೋಷಣೆಗಳನ್ನು ಕೂಗಿದ ಘಟನೆಗೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಸೋಮವಾರ ಬೆಳಿಗ್ಗೆ ಮೂವರು ಬಿಜೆಪಿ ಬೆಂಬಲಿಗರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಅವುಗಳಲ್ಲಿ ಜಾಮೀನು ರಹಿತ ವಿಭಾಗಗಳಿವೆ.

ಅಮಿತ್‌ ಶಾ ಭಾನುವಾರದ ರ್‍ಯಾಲಿಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ನಂತರ  “ಅಮಿತ್‌ ಶಾರವರೆ, ಬಂಗಾಳಕ್ಕೆ ಬಂದು ಉಪದೇಶಿಸುವ ಬದಲು ನಿಮ್ಮ ಮೂಗಿನ ಕೆಳಗಿರುವ ಡೆಲ್ಹಿ ಹಿಂಸಾಚಾರದಲ್ಲಿ 50 ಕ್ಕೂ ಹೆಚ್ಚು ಮುಗ್ಧ ಜೀವಗಳನ್ನು ಉಳಿಸುವಲ್ಲಿ ವಿಫಲರಾದದ್ದಕ್ಕೆ ಕಾರಣ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು. ಬಿಜೆಪಿ ಹರಡಲು ಪ್ರಯತ್ನಿಸುತ್ತಿರುವ ಧರ್ಮಾಂಧತೆ ಮತ್ತು ದ್ವೇಷವಿಲ್ಲದೆ ಬಂಗಾಳ ಉತ್ತಮವಾಗಿದೆ” ಎಂದು ಮುಖ್ಯಮಂತ್ರಿಯ ಸೋದರಳಿಯ ಮತ್ತು ಟಿಎಂಸಿ ಯುವ ವಿಭಾಗದ ಮುಖ್ಯಸ್ಥ ಅಭಿಷೇಕ್ ಬ್ಯಾನರ್ಜಿ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಪರ ಅಭಿಯಾನದ ಭಾಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ರಾಜ್ಯಾದ್ಯಂತ ಸಂಚರಿಸಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಮತ್ತು ಅದರ ಕೋಮು ಸೌಹಾರ್ದತೆಯನ್ನು ಕಾಪಾಡಲು ಮಮತಾ ಬ್ಯಾನರ್ಜಿ ಏಕೆ ಮಹತ್ವ ಎಂಬುದನ್ನು ಜನರಿಗೆ ಅರ್ಥವಾಗುವಂತೆ ಮಾಡುತ್ತಾರೆ ಎಂದು ಪಕ್ಷ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...