Homeಮುಖಪುಟ'ಇದು ಮೋದಿ ಸಮೀಕ್ಷೆ, ಎಕ್ಸಿಟ್ ಪೋಲ್ ಅಲ್ಲ': ರಾಹುಲ್‌ ಗಾಂಧಿ

‘ಇದು ಮೋದಿ ಸಮೀಕ್ಷೆ, ಎಕ್ಸಿಟ್ ಪೋಲ್ ಅಲ್ಲ’: ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸಿಟ್ ಪೋಲ್ ಫಲಿತಾಂಶವನ್ನು ತಿರಸ್ಕರಿಸಿದ್ದು, ಇದು  ಕಲ್ಪನೆಯ  ಸಮೀಕ್ಷೆ ಮತ್ತು ಮೋದಿಯ ಸಮೀಕ್ಷೆ ಎಂದು ಹೇಳಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಮೀಡಿಯಾ ಸಮೀಕ್ಷೆ. ಇದು ಅವರ  ಕಲ್ಪನೆಯ ಸಮೀಕ್ಷೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ ಐತಿಹಾಸಿಕ ಗೆಲುವಿನ ಬಗ್ಗೆ ಅಂಕಿ-ಅಂಶಗಳನ್ನು ಬಹಿರಂಗಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್‌ ಗಾಂಧಿ, ಇಂಡಿಯಾ ಮೈತ್ರಿಕೂಟಕ್ಕೆ ಎಷ್ಟು ಸೀಟುಗಳು ಸಿಗುತ್ತದೆ ಎಂದು ಕೇಳಿದಾಗ, ನೀವು ಸಿಧು ಮೂಸ್ ವಾಲಾ ಅವರ 295 ಹಾಡು ಕೇಳಿದ್ದೀರಾ? 295 ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಶಿವಸೇನಾ (ಉದ್ಧವ್‌ ಬಣ) ಸಂಸದ ಸಂಜಯ್ ರಾವುತ್ ಎಕ್ಸಿಟ್‌ ಪೋಲ್‌ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಕಾರ್ಪೊರೇಟ್ ಆಟ ಮತ್ತು ವಂಚನೆ’ ಎಂದು ಬಣ್ಣಿಸಿದ್ದು, ಸಮೀಕ್ಷೆ ನಡೆಸುವ ಮಾಧ್ಯಮ ಕಂಪನಿಗಳ ಮೇಲೆ ಒತ್ತಡವಿದೆ ಎಂದು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್, ಪ್ರತಿಪಕ್ಷದ ಇಂಡಿಯಾ ಮೈತ್ರಿಕೂಟವು 543 ಸದಸ್ಯ ಬಲದ ಲೋಕಸಭೆಯಲ್ಲಿ 295 ರಿಂದ 310 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ. ಈ ಕಂಪನಿಗಳು ಎಕ್ಸಿಟ್ ಪೋಲ್‌ಗಳನ್ನು ಉಚಿತವಾಗಿ ನಡೆಸುತ್ತವೆಯೇ? ಎಂದು ಸಂಜಯ್‌ ರಾವತ್‌ ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟವು 543 ಸದಸ್ಯ ಬಲದ ಲೋಕಸಭೆಯಲ್ಲಿ 295 ರಿಂದ 310 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ. ಇದು ಎಕ್ಸಿಟ್ ಪೋಲ್ ಅಲ್ಲ ಜನರ ಸಮೀಕ್ಷೆಯ ಮೂಲಕ ಅಂಕಿಅಂಶಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ, ಬಿಹಾರ, ಹರಿಯಾಣ, ಕರ್ನಾಟಕ ರಾಜ್ಯಗಳು ಮಹಾರಾಷ್ಟ್ರದೊಂದಿಗೆ ದೇಶದಲ್ಲಿ ಬದಲಾವಣೆ ತರಲಿವೆ. ನಮಗೆ ಎಕ್ಸಿಟ್ ಪೋಲ್‌ಗಳ ಅಗತ್ಯವಿಲ್ಲ, ನಾವು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ನೆಲದ ವಾಸ್ತವತೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಇಂಡಿಯಾ ಮೈತ್ರಿಕೂಟದ ಯುಪಿಯಲ್ಲಿ 80 ರಲ್ಲಿ 35 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ರಾಷ್ಟ್ರೀಯ ಜನತಾದಳ  ಬಿಹಾರದಲ್ಲಿ 40ರಲ್ಲಿ 16 ಸ್ಥಾನಗಳನ್ನು ಗೆಲ್ಲಲಿದೆ  ಸಂಜಯ್‌ ರಾವತ್‌ ಹೇಳಿದ್ದಾರೆ.

ಎಕ್ಸಿಟ್ ಪೋಲ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು “ಸಂಯೋಜಿತ” ಮಾಡಿದ್ದಾರೆ. ಇವೆಲ್ಲವೂ ಅವರು ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳಾಗಿವೆ, ಆದರೆ ನಿಜವಾದ ಫಲಿತಾಂಶಗಳು ತುಂಬಾ ಭಿನ್ನವಾಗಿರುತ್ತವೆ ಎಂದು ಎಕ್ಸಿಟ್ ಪೋಲ್‌ ಫಲಿತಾಂಶಗಳ ಬಗ್ಗೆ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...