Homeಸಿನಿಮಾಕ್ರೀಡೆಇದು ಧೋನಿ ಭವಿಷ್ಯದ ವಿಷಯ ಮಾತ್ರವಲ್ಲ, ದೇಶದ್ದೂ ಕೂಡ.. : ಗೌತಮ್ ಗಂಭೀರ್‌

ಇದು ಧೋನಿ ಭವಿಷ್ಯದ ವಿಷಯ ಮಾತ್ರವಲ್ಲ, ದೇಶದ್ದೂ ಕೂಡ.. : ಗೌತಮ್ ಗಂಭೀರ್‌

- Advertisement -
- Advertisement -

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಂದ ದೂರವುಳಿದ ವಿಕೆಟ್ ಕೀಪರ್ ಎಂ.ಎಸ್.ಧೋನಿ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕುಟುಕಿದ್ದಾರೆ. ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಂತರ ವಿಕೆಟ್ ಕೀಪರ್, ಬ್ಯಾಟ್ಸಮನ್ ಧೋನಿ ವಿಶ್ರಾಂತಿಯಲ್ಲಿದ್ದಾರೆ. ಈಗಾಗಲೇ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡದ ಪಂದ್ಯದಿಂದ ಹೊರಗುಳಿದಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಗೌತಮ್ ಗಂಭೀರ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಇದು ಕೇವಲ ಧೋನಿ ಒಬ್ಬರ ಭವಿಷ್ಯದ ವಿಷಯ ಮಾತ್ರವಲ್ಲ. ದೇಶದ ಕುರಿತ ವಿಷಯವಾದ್ದರಿಂದ ತಂಡವನ್ನು ಆಯ್ಕೆ ಮಾಡುವವರು ಗಂಭೀರವಾಗಿ ಚರ್ಚಿಸಬೇಕಾದ ವಿಷಯ ಎಂದು ಹೇಳುವ ಮೂಲಕ ಧೋನಿ ಅವರ ನಿವೃತ್ತಿ ಬಗ್ಗೆ ಟೀಕಿಸಿದ್ದಾರೆ. ನಿವೃತ್ತಿ ಎಂಬುದು ಅವರವರ ವೈಯಕ್ತಿಕ ವಿಷಯ. ದೇಶವನ್ನು ಪ್ರತಿನಿಧಿಸುವ ತಂಡದ ಆಟಗಾರನಾಗಿ ಆಡಬೇಕಾಗುತ್ತದೆ. ಆದರೆ ಭವಿಷ್ಯದ ಹಾಗೂ ಯೋಜನೆಗಳ ಬಗ್ಗೆ ನಿರ್ಣಯಿಸುವಾಗ ತಂಡದ ಆಯ್ಕೆದಾರರ ಜತೆ ಮಾತುಕತೆ ನಡೆಸುವುದು ಸೂಕ್ತ. ಆಟಗಾರ ತಂಡದಲ್ಲಿ ಆಡಬೇಕೇ ಹೊರತು, ತಾನು ಯಾವ ಸರಣಿಯಲ್ಲಿ ಆಡಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳುವಂತೆ ಇರಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು 2023ರ ವರ್ಲ್ಡ್ ಕಪ್ ಟೂರ್ನಿ ಭಾರತದಲ್ಲಿ ನಡೆಯಲಿದೆ. ಪಂದ್ಯಕ್ಕಾಗಿ ಎಂ.ಎಸ್.ಧೋನಿ ಏನೇನು ಯೋಜನೆ ರೂಪಿಸಿದ್ದಾರೆ..? ಭಾರತ ತಂಡದ ಕ್ಯಾಪ್ಟನ್ ನಿರ್ಭೀಡೆಯಿಂದ ಧೋನಿ ಅವರೊಂದಿಗೆ ಈ ಕುರಿತು ಚರ್ಚಿಸಬೇಕು. ಧೋನಿ ಮುಂದಿನ ವರ್ಲ್ಡ್ ಕಪ್ ಪಂದ್ಯದಲ್ಲಿ ಆಡಲಿದ್ದಾರೋ, ಇಲ್ಲವೋ ಎಂಬುದನ್ನು ತಿಳಿಯಬೇಕು ಎಂದರು. ಈಗ ಧೋನಿ ಅನುಪಸ್ಥಿತಿಯಲ್ಲಿ 21 ವರ್ಷದ ಯುವ ಆಟಗಾರ ರಿಷಭ್ ಪಂತ್, ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಇತರರನ್ನು ಅವರೊಟ್ಟಿಗೆ ಹೋಲಿಕೆ ಮಾಡದೇ ಯುವ ಆಟಗಾರರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...