Homeಕರ್ನಾಟಕಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ದೇವಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.

- Advertisement -
- Advertisement -

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

“ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ?” ಎಂದು ಪ್ರಶ್ನಿಸಿದೆ.

“ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ” ಎಂದು ಜೆಡಿಎಸ್ ಕುಟುಕಿದೆ.

“ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ” ಎಂದು ಹರಿಹಾಯ್ದಿದೆ.

“20 ದಿನಗಳ ಹಿಂದೆ ಸಚಿವ ಅಶ್ವತ್‌ ನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ” ಎಂದು ಸ್ಪಷ್ಟಪಡಿಸಿದೆ.

“ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ?” ಎಂದು ಅಣಕ ಮಾಡಿದೆ.

“ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ?” ಎಂದು ಕೇಳಿದೆ.

“ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’, ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು ಕರ್ನಾಟಕ ಬಿಜೆಪಿ ನೋಡಲಿಲ್ಲವೆ?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿರಿ: ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

“ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?” ಎಂದು ಟೀಕಾಪ್ರಹಾರ ನಡೆಸಿದೆ.

“ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ” ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...