Homeಮುಖಪುಟಭಾರತದ ಸ್ವಾತಂತ್ರ್ಯ ಕುರಿತ ಭಾಗವತ್ ಹೇಳಿಕೆ 'ದೇಶದ್ರೋಹಕ್ಕೆ ಸಮ' : ರಾಹುಲ್ ಗಾಂಧಿ

ಭಾರತದ ಸ್ವಾತಂತ್ರ್ಯ ಕುರಿತ ಭಾಗವತ್ ಹೇಳಿಕೆ ‘ದೇಶದ್ರೋಹಕ್ಕೆ ಸಮ’ : ರಾಹುಲ್ ಗಾಂಧಿ

- Advertisement -
- Advertisement -

ರಾಮ ಮಂದಿರ ಪ್ರತಿಷ್ಠಾಪನೆಯ ನಂತರ ಭಾರತಕ್ಕೆ ‘ನಿಜವಾದ ಸ್ವಾತಂತ್ರ್ಯ’ ಬಂತು ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ್ರೋಹಕ್ಕೆ ಸಮನಾಗಿದ್ದು, ಭಾಗವತ್ ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ (ಜ.14) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯ ಕೋಟ್ಲಾ ರಸ್ತೆಯಲ್ಲಿರುವ ನಿರ್ಮಿಸಿರುವ ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯ ಚಳವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನವನ್ನು ಮೋಹನ್ ಭಾಗವತ್ ಪ್ರದರ್ಶಿಸಿದ್ದಾರೆ. ನಿನ್ನೆ ಅವರು ಏನು ಹೇಳಿದ್ದಾರೊ ಅದು ದೇಶದ್ರೋಹಕ್ಕೆ ಸಮವಾಗಿದೆ” ಎಂದು ಹೇಳಿದ್ದಾರೆ.

“ಬೇರೆ ದೇಶದಲ್ಲಾಗಿದ್ದರೆ ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದರು. ಭಾಗವತ್ ಅವರು ಇಷ್ಟೊತ್ತಿಗೆ ಬಂಧನವಾಗಬೇಕಿತ್ತು” ಎಂದಿದ್ದಾರೆ.

ಹೊಸ ಪ್ರಧಾನ ಕಚೇರಿಯು ಸಂವಿಧಾನದ ಅಡಿಪಾಯದ ಸಂಕೇತವನ್ನು ಹೊಂದಿದೆ ಎಂದು ಒತ್ತಿ ಹೇಳಿದ ರಾಹುಲ್ ಗಾಂಧಿ, ಕೇಸರಿ ಪಕ್ಷ ಮತ್ತು ಕಾಂಗ್ರೆಸ್‌ನ ಸಿದ್ಧಾಂತ ನಡುವೆ ಸಂಘರ್ಷ ಇರುವುದರಿಂದ ಆರ್‌ಎಸ್‌ಎಸ್‌ನೊಂದಿಗೆ ನಮ್ಮ ಕಾರ್ಯಕರ್ತರು ನಾಗರಿಕ ಯುದ್ಧ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನೂ ತನ್ನ ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತೀಯ ರಾಜ್ಯಗಳ ವಿರುದ್ಧವೇ ಹೋರಾಡುವಂತಾಗಿದೆ” ಎಂದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರವು ಭಾರತದ ಬಗ್ಗೆ ಕಾಂಗ್ರೆಸ್‌ಗಿಂತ ಸಂಪೂರ್ಣವಾಗಿ ಭಿನ್ನವಾದ ದೃಷ್ಟಿಕೋನವನ್ನು ಹೊಂದಿದೆ. “ಅವರು ಭಾರತವನ್ನು ನೆರಳಿನ, ಗುಪ್ತ, ರಹಸ್ಯ ಸಮಾಜದಿಂದ ಹಾಗೂ ಒಬ್ಬ ವ್ಯಕ್ತಿ ನಡೆಸಬೇಕೆಂದು ಬಯಸುತ್ತಾರೆ. ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ಜಾತಿಗಳ ಮತ್ತು ಬುಡಕಟ್ಟು ಜನಾಂಗದವರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ. ಇದು ಅವರ ಕಾರ್ಯಸೂಚಿ” ಎಂದು ಹೇಳಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ಮಾತು ಪ್ರತಿ ಭಾರತೀಯರಿಗೆ ಮಾಡಿದ ಅವಮಾನವಾಗಿದೆ. ಅಜ್ಞಾನದಿಂದ ಕೂಡಿದ ಇಂತಹ ಹೇಳಿಕೆಗಳನ್ನು ಆಲಿಸದೇ ಇರುವುದು ಸೂಕ್ತ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...