Homeಮುಖಪುಟವಿಜಯೇಂದ್ರನದ್ದು ಅತ್ತೂ, ಕರೆದು ಔತಣ ಮಾಡಿಸಿಕೊಂಡ ಸ್ಥಿತಿ: ಜಗದೀಶ್‌ ಶೆಟ್ಟರ್

ವಿಜಯೇಂದ್ರನದ್ದು ಅತ್ತೂ, ಕರೆದು ಔತಣ ಮಾಡಿಸಿಕೊಂಡ ಸ್ಥಿತಿ: ಜಗದೀಶ್‌ ಶೆಟ್ಟರ್

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ವಿಜಯೇಂದ್ರ ಅವರ ನೇಮಕದ ಬಗ್ಗೆ ಮಾಜಿ ಸಿಎಂ, ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ವಿಜಯೇಂದ್ರ ಅವರದ್ದು ಅತ್ತೂ ಕರೆದು ಔತಣ ಮಾಡಿಸಿಕೊಂಡಂತಹ ಸ್ಥಿತಿ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನಸಭಾ ಚುನಾವಣೆ ಮುಗಿದ 6 ತಿಂಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿರಲಿಲ್ಲ. ಅತ್ತು ಕರೆದು ಅಧ್ಯಕ್ಷರನ್ನಾಗಿ ಮಾಡಿರುವ ತರಹ ಕಾಣಿಸುತ್ತಿದೆ. ಒಂದು ರಾಜಕೀಯ ಪಕ್ಷವಾಗಿ ತಕ್ಷಣ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಈಗ ಯಾಕೆ ಆಯ್ಕೆ ಮಾಡಿದ್ರು? ಇದನ್ನೆಲ್ಲಾ ನೋಡಿದ್ರೆ ಬಿಜೆಪಿ ಫೇಲ್ ಆಗಿದೆ. ಬಿಜೆಪಿಯವರು ಭ್ರಮೆಯಲ್ಲಿದ್ದಾರೆ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್‌ನಲ್ಲಿ ಇದ್ದೀನಿ. ಅಧ್ಯಕ್ಷರ ಆಯ್ಕೆ ಅವರ ಪಕ್ಷಕ್ಕೆ ಬಿಟ್ಟ ವಿಚಾರ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ಬಂದು ಬಲಾಢ್ಯವಾಗಿ ಬೆಳೆದಿದೆ. ಬಿಜೆಪಿಯವರು ಈಗಾಗಲೇ ಬೇರೆ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಿ ಕೈ  ಸುಟ್ಟುಕೊಂಡಿದ್ದಾರೆ. 50-60 ಶಾಸಕರನ್ನು ಕರೆದುಕೊಂಡು ಬಂದು ಮತ್ತೆ ಸರ್ಕಾರ ರಚನೆ ಮಾಡುವುದು ಭ್ರಮೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಬರುತ್ತದೆ ಎಂದು ಜಗದೀಶ್ ಶೆಟ್ಟರ್‌ ತಿಳಿಸಿದ್ದಾರೆ.

ವಿಜಯೇಂದ್ರ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕುಟುಂಬ ರಾಜಕಾರಣದ ವಿರುದ್ಧ ಮಾತನಾಡಲು ಮೋದಿಯವರು ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು  ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ದಿನೇಶ್ ಗುಂಡೂರಾವ್, ಗಾಜಿನ‌ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಮೊದಲು ತಾವೆಲ್ಲಿ‌ ಕುಳಿತಿದ್ದೇವೆ ಎಂಬ ವಾಸ್ತವ‌ ಅರಿಯಬೇಕು. ಬೇರೆಯವರು ಮಾಡಿದರೆ ಅಪರಾಧ, ತಾನು ಮಾಡಿದರೆ ಆದರ್ಶ ಎಂಬ ಭ್ರಮೆ ಒಳ್ಳೆಯದಲ್ಲ‌ ಮೋದಿಯವರೆ ಎಂದು ಹೇಳಿದ್ದಾರೆ.

ಕುಟುಂಬ ರಾಜಕಾರಣದ ಬಗ್ಗೆ ಮೋದಿಯವರು ಅವಕಾಶ ಸಿಕ್ಕಾಗಲೆಲ್ಲಾ ಮಾತನಾಡುತ್ತಾರೆ. ಮೊನ್ನೆ ಮಧ್ಯಪ್ರದೇಶ ಚುನಾವಣಾ ಪ್ರಚಾರದಲ್ಲಿ ಕುಟುಂಬ ರಾಜಕಾರಣದ ವಿರುದ್ಧ ಭಾಷಣ ಮಾಡಿದ್ದರು. ಆದರೆ ಈಗ ಮಾಜಿ ಸಿಎಂ ಬಿಎಸ್‌ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಇದ್ಯಾವ ರಾಜಕಾರಣ ಮೋದಿಯವರೆ? ಎಂದು ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸಾಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...