Homeಮುಖಪುಟ86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಎಸ್‌ಸಿ/ಎಸ್‌ಟಿ/ ಬಿ.ಸಿ/ಅಲ್ಪಸಂಖ್ಯಾತ ಸಮುದಾಯಗಳಿಗೂ 78% ರಷ್ಟು ಪ್ರಾತಿನಿಧ್ಯವನ್ನು ನೀಡಿದೆ ಎಂದು ವರದಿಯಾಗಿದೆ.

- Advertisement -
- Advertisement -

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರವು ರಾಜ್ಯದ ಮೇಯರ್‌/ಪುರಸಭೆ/ನಗರ ಸಭೆಯ ಅಧ್ಯಕ್ಷ ಸೇರಿದಂತೆ ಒಟ್ಟು 86 ಸ್ಥಾನಗಳಲ್ಲಿ 60.47% ದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ನೀಡಿದೆ. ಜೊತೆಗೆ ಈ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಬಿ.ಸಿ/ಅಲ್ಪಸಂಖ್ಯಾತ ಸಮುದಾಯಗಳಿಗೆ 78% ರಷ್ಟು ಪ್ರಾತಿನಿಧ್ಯವನ್ನು ನೀಡಿದೆ ಎಂದು ವರದಿಯಾಗಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ವೈಎಸ್ಆರ್ಸಿಪಿ ಪಕ್ಷವು ಮೇಯರ್/ಅಧ್ಯಕ್ಷರ ಹುದ್ದೆಗಳಿಗೆ ತನ್ನ ಅಭ್ಯರ್ಥಿಗಳನ್ನು ಇತ್ತೀಚೆಗೆ ಘೋಷಿಸಿತು.

“ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿರುವ ಜಗನ್ ಸರ್ಕಾರವು 60.47% ಮೇಯರ್ ಮತ್ತು ಅಧ್ಯಕ್ಷರ ಹುದ್ದೆಗಳಿಗೆ ಮಹಿಳೆಯರಿಗೆ ತರುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಇದರರ್ಥ 86 ಹುದ್ದೆಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರು ಹೊಂದಲಿದ್ದಾರೆ” ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ವೈಎಸ್‌ಆರ್‌ಸಿಪಿ ಸರ್ಕಾರವು 50% ರಷ್ಟು ದೇವಾಲಯ ಮಂಡಳಿಗಳು, ಕೃಷಿ ಮಾರುಕಟ್ಟೆ ಸಮಿತಿಗಳು, ನಾಮನಿರ್ದೇಶನ ಹುದ್ದೆಗಳನ್ನು, ಎಸ್‌ಸಿ/ಎಸ್‌ಟಿ/ಬಿ.ಸಿ/ಅಲ್ಪಸಂಖ್ಯಾತ ಸಾಮಾಜಿಕ ಗುಂಪುಗಳಿಗೆ ನಾಮನಿರ್ದೇಶನ ಮಾಡಿದೆ. ಅಲ್ಲದೆ ಈ ಎಲ್ಲಾ ಹುದ್ದೆಗಳಲ್ಲಿ 50% ದಷ್ಟು ಮಹಿಳೆಯರಿಗೆ ಹಂಚಿಕೆ ಮಾಡುವ ಮೂಲಕ ಇತಿಹಾಸ ನಿರ್ಮಿಸಿದೆ.

“ಎಸ್‌ಎಸ್‌/ಎಸ್‌ಟಿ/ಬಿ.ಸಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವೈಎಸ್‌ಆರ್‌ಸಿಪಿ ಸರ್ಕಾರ ಬದ್ಧವಾಗಿದೆ ಎಂಬ ಅಂಶವನ್ನು ಪುನರುಚ್ಚರಿಸುತ್ತಾ, ಸುಮಾರು 78% ಹುದ್ದೆಗಳನ್ನು ಹಿಂದುಳಿದ ಸಮುದಾಯಗಳಿಗೆ (ಎಸ್‌ಸಿ / ಎಸ್‌ಟಿ / ಬಿಸಿ / ಅಲ್ಪಸಂಖ್ಯಾತರಿಗೆ) ನೀಡಲಾಗಿದೆ.

86 ಹುದ್ದೆಗಳಲ್ಲಿ, ಹಿಂದುಳಿದ ಸಮುದಾಯಗಳಿಗೆ (ಎಸ್‌ಸಿ / ಎಸ್‌ಟಿ / ಬಿಸಿ / ಅಲ್ಪಸಂಖ್ಯಾತರಿಗೆ) 67 ಹುದ್ದೆಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ” ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...