Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ರಾತ್ರಿಯೇ ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ  ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ತಡರಾತ್ರಿ ವರೆಗೂ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರೂ ಬಿಜೆಪಿಗೆ ಯಾವುದೇ ಉಪಯೋಗವಾಗಲಿಲ್ಲ. ಅಂತಿಮವಾಗಿ ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆತರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಗಳು ಶೆಟ್ಟರ್ ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪುಷ್ಟಿ ನೀಡುತ್ತಿವೆ. ಇಂದು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಸೇರಬಹುದು ಎಂದು ರಾಜಕೀಯ ವಲಯದಿಂದ ಕೇಳಿಬರುತ್ತಿವೆ.

ಶನಿವಾರ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್‌, ನಾಳೆ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದರು.

”ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ 80 ವರ್ಷ, ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ನಾನು ಈಗ ಸೀನಿಯರ್ ಲೀಡರ್. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಂಕ್‌ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಎಂದು ಹೇಳಿದ್ದರು ಆದರೆ ಪಟ್ಟಿಯಲ್ಲಿ ಈ ವರೆಗೂ ನನ್ನ ಹೆಸರು ಬರುತ್ತಿಲ್ಲ. ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಯಾರು ಏನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ಆದರೆ ಈಗ ನಾನು ಹೇಳಲ್ಲ. ಇನ್ನುಮುಂದೆ ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

”ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ” ಎಂದು ಭಾವುಕರಾದರು.

”ನನಗೆ ಟಿಕೆಟ್ ಕೊಡದೇ ಇರುವುದಕ್ಕೆ ನಮ್ಮ ಲಿಂಗಾಯತ ಸಮಾಜದವರಿಗೆ ಬಹಳಷ್ಟು ನೋವಾಗಿದೆ. ನಾನು ಹೊರ ಹೋದ ಮೇಲೆ ಅಸಮಾಧಾನಿತರ ಸಂಪರ್ಕ ಮಾಡಬಹುದು. ಈಗಾಗಲೇ ಕೆಲವರು ಸಂಪರ್ಕ ಮಾಡಿದ್ದಾರೆ. ಮೂರು ತಿಂಗಳಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮೊದಲಿನ ಬಿಜೆಪಿಯಾಗಿ ಉಳದಿಲ್ಲ. ಬಿಜೆಪಿ ಕೆಲವು ವ್ಯಕ್ತಿಗಳಿಂದ ಹಾಳಾಗುತ್ತಿದೆ. ಸ್ವಂತ ಹಿತಾಸಕ್ತಿಗಾಗಿ ಪಕ್ಷ ಹಾಳಾಗುತ್ತಿದೆ” ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಕಿಡಿಕಾರಿದರು.

”ಟಿಕೆಟ್ ಇಲ್ಲ ಅಂದಾಗ ನನ್ನ ಮನಸ್ಸಿಗೆ ಆಘಾತ ಅಗಿತ್ತು. ನನ್ನ ಬಳಿ ಬಂದು ಮಾತನಾಡಿದವರೂ ಕೂಡ ಅದಕ್ಕೆ ಉತ್ತರ ಕೊಡಲಿಲ್ಲ. ನನಗೆ ರಾಜಕೀಯ ನಿವೃತ್ತಿ ಆಗಬೇಕು ಎಂದು ಹೇಳಿದ್ದರೆ ನಾನು ಗೌರವಯುತವಾಗಿ ಹೋಗುತ್ತಿದ್ದೆನು. ನಮ್ಮಂತ ಲೀಡರ್‌ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಡ್ ಕೊಡುವುದಕ್ಕೆ ಓಕೆ ಎಂದು ಹೇಳಿದರು. ಇದಕ್ಕೆ ನಾನು, ಜಗದೀಶ್ ಶೆಟ್ಟರ್​ಗೆ ಯಾಕೆ ಇಲ್ಲ? ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಅವರ ಬಳಿ ಉತ್ತರ ಇರಲಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...