Homeಕರ್ನಾಟಕಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

- Advertisement -
- Advertisement -

2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷ ನಿನ್ನೆಯಷ್ಟೇ (ಮಂಗಳವಾರ) ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಮತ್ತು ರಾಮದುರ್ಗ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಪ್ರಬಲ ಆಕಾಂಕ್ಷಿಗಳಿಗೆ ಟಿಕೆಟ್ ನೀಡುತ್ತಿಲ್ಲ. ಇದರಿಂದ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ಮಧಾನಗೊಂಡಿದ್ದು, ಪಕ್ಷದ ಹೈಕಮಾಂಡ್ ವಿರುದ್ಧವೇ ಗುಡುಗಿದ್ದಾರೆ.

ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹುಬ್ಬಳ್ಳಿ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ. ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಾರೆ. ಈ ಬಾರಿ ಇಲ್ಲಿಂದಲೇ ಸ್ಪರ್ಧಿಸುವ ಬಯಕೆ ಹೊಂದಿದ್ದರು. ಮೊದಲಪಟ್ಟಿಯಲ್ಲಿ ಏಕೆ ತಮ್ಮ ಹೆಸರು ಘೋಷಣೆ ಆಗಿಲ್ಲ ಎಂಬುದರ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ.

ಅವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನುವ ವಿಚಾರ ನಿನ್ನೆಯಿಂದ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದೇ ಉದ್ದೇಶದಿಂದ ಬಿಜೆಪಿ ಜೈಕಮಾಂಡ್ ಅವರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎನ್ನಲಾಗಿದೆ. ಹೀಗಾಗಿ ಅವರು ಇಂದು (ಬುಧವಾರ) ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: 189 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಸಂಪೂರ್ಣ ವಿವರ ಇಲ್ಲಿದೆ

ಟಿಕೆಟ್ ನೀಡದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ

ಒಂದು ವೇಳೆ ಈ ಭಾರಿ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಆದಲ್ಲಿ ಜಗದೀಶ್ ಶೆಟ್ಟರ್ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. ಮೊದಲ ಪಟ್ಟಿ ಘೋಷಣೆಯಾದ ಬಳಿಕ ಅವರು ಪಕ್ಷೇತರ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.

ಅಸಮಾಧಾನಗೊಂಡಿರುವ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಬರುವಂತೆ ಹೇಳಿದ್ದಾರೆ. ಅವರಿಗೆ ರಾಜ್ಯಪಾಲ ಹುದ್ದೆಯ ಭರವಸೆ ನೀಡಿ ಸಮಾಧಾನಪಡಿಸುವ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗ ಸಿದ್ಧರಾಗಿದ್ದರು. ಟಿಕೆಟ್ ನೀಡದಿರುವುದಕ್ಕೆ ಸಹಜವಾಗಿ ಬೇಸರಗೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ (67) ಸತತವಾಗಿ ಆರು ಬಾರಿ ಗೆದ್ದಿದ್ದಾರೆ. ಹಾಗಾಗಿ ತನಗೆ ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿದ್ದ ಶೆಟ್ಟರ್ ಟಿಕೆಟ್ ಕೈತಪ್ಪುವ ಸೂಚನೆ ಸಿಗುತ್ತಿದ್ದಂತೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು 6 ಸಲ ಚುನಾವಣೆಯಲ್ಲಿ 21,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾಯಿತನಾಗಿದ್ದೇನೆ. ನನ್ನ ವಿರುದ್ಧ ಆರೋಪಗಳಿಲ್ಲ. ಹೀಗಿದ್ದರೂ ಏಕೆ ಚುನಾವಣೆಯಿಂದ ಹೊರಗಿಡಲಾಗಿದೆ? ಚುನಾವಣೆ ಸಂಬಂಧ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇನೆ. ಟಿಕೆಟ್ ನೀಡದಿದ್ದರೂ ನಾನು ಕ್ಷೇತ್ರದಲ್ಲಿ ಪ್ರಚಾರ ಮುಂದುವರಿಸುತ್ತೇನೆ. ಜೊತೆಗೆ ಬರಲಿರುವ ಚುನವಣೆಯಲ್ಲಿ ನಾನು ಸ್ಪರ್ಧಿಸಿಯೇ ತಿರುತ್ತೇನೆ” ಎಂದು ಹೇಳುವ ಮೂಲಕ ಬಿಜೆಪಿಯಿಂದ ಟಿಕೆಟ್ ನೀಡದಿದ್ದರೂ ಪಕ್ಷೇತರರಾಗಿ ಸ್ಪಧಿಸುವ ಮುನ್ಸೂಚನೆ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ಹೈಕಮಾಂಡ್ ನಾಯಕರು ಮುಂಬರುವ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡುವಂತೆ ಶೆಟ್ಟರ್ ಬಳಿ ಮನವಿ ಮಾಡಿತ್ತು. ಇದರಿಂದ ಬೇಸರಗೊಂಡಿದ್ದ ಅವರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಟಿಕೆಟ್ ನೀಡದಿದ್ದರೂ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವತಂತ್ರವಾಗಿ ಆಯ್ಕೆ ಮಾಡುವ ಎಚ್ಚರಿಕೆ ನೀಡಿದ್ದರು. ಬಂಡಾಯದ ಬಾವುಟ ನೆಡಲು ಸಿದ್ಧರಾಗಿದ್ದ ಶೆಟ್ಟರ್‌ಗೆ ದೆಹಲಿ ನಾಯಕರು ಡೋಂಟ್‌ ಕೇರ್ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...