Homeಮುಖಪುಟಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

- Advertisement -
- Advertisement -

ಗುಜರಾತ್‌ನ ವಡ್ಗಾಮ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಯುವ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಗೆಲುವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಮನಿಬಾಯ್ ವಘೇಲ ವಿರುದ್ಧ ಸುಮಾರು 6,300 ಮತಗಳ ಅಂತರದ ಜಯಗಳಿಸಿದ್ದಾರೆ.

ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಯುವ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಈ ಬಾರಿ ಕಾಂಗ್ರೆಸ್ ಪಕ್ಷದ ಟಿಕೆಟ್‌ನಡಿ ಸ್ಪರ್ಧಿಸಿದ್ದಾರೆ. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಅವರು ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿ ಜಯ ತಮ್ಮದಾಗಿಸಿಕೊಂಡಿದ್ದಾರೆ.

ಪ.ಜಾ ಮೀಸಲು ಕ್ಷೇತ್ರವಾದ ವಡ್ಗಾಮ್‌ನಲ್ಲಿ ವಘೇಲ 2012ರಲ್ಲಿ ಕಾಂಗ್ರೆಸ್ ಪಕ್ಷದಿಂದ ಈ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದರು. ಆದರೆ 2017ರಲ್ಲಿ ಜಿಗ್ನೇಶ್ ಮೇವಾನಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆಗ ಕಾಂಗ್ರೆಸ್ ಪಕ್ಷವು ಅವರಿಗೆ ಬೆಂಬಲ ಸೂಚಿಸಿ ತಮ್ಮ ಪಕ್ಷದ ಅಭ್ಯರ್ಥಿ ಹಾಕದೆ ಜಿಗ್ನೇಶ್ ಗೆಲುವಿಗೆ ಸಹಕರಿಸಿತ್ತು.

ಆದರೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ವಘೇಲ 2021ರಲ್ಲಿ ಬಿಜೆಪಿ ಪಕ್ಷ ಸೇರಿದ್ದರು. ಅವರು ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಡಿ ಸ್ಪರ್ಧಿಸಿದ್ದರು. ಆದರೂ ಜಯ ಸಾಧಿಸಲು ಸಾಧ್ಯವಾಗಲಿಲ್ಲ.

ವಕೀಲರಾಗಿ, ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಜಿಗ್ನೇಶ್ ಮೇವಾನಿ ದಲಿತರಿಗೆ ಭೂಮಿ ದೊರಕಿಸಿಕೊಡಲು ಹೋರಾಡುತ್ತಿದ್ದರು. ಆದರೆ ಊನಾದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಅವರು ನಡೆಸಿದ ಬೃಹತ್ ಹೋರಾಟದ ಮೂಲಕ ಅವರು ದೇಶದ ಗಮನ ಸೆಳೆದಿದ್ದರು.

ಜಿಗ್ನೇಶ್ ಮೇವಾನಿ ದಲಿತ-ದಮನಿತರ ಪರವಾಗಿ ಹೋರಾಡುತ್ತಲೇ ಮೋದಿ ಸರ್ಕಾರದ ವಿರುದ್ಧ ಗಟ್ಟಿ ದನಿಯೆತ್ತುತ್ತಿದ್ದರು. ಗುಜರಾತ್ ಅಸೆಂಬ್ಲಿಯಲ್ಲಿ ದಮನಿತರ ಗಟ್ಟಿದನಿಯಾಗಿದ್ದರು. ಉತ್ತರ ಭಾರತದಲ್ಲಿ ಎಲ್ಲಿಯೇ ದಲಿತರ ಮೇಲಿನ ಹಲ್ಲೆ ನಡೆದರೂ ಜಿಗ್ನೇಶ್ ಅವರ ಪರವಾಗಿ ನಿಲ್ಲುತ್ತಿದ್ದರು. ಒಟ್ಟಿನಲ್ಲಿ ಮೋದಿ-ಶಾಗೆ ನುಂಗಲಾರದ ತುತ್ತಾಗಿದ್ದರು. ಹಾಗಾಗಿ ಅವರನ್ನು ಸೋಲಿಸುವುದಕ್ಕಾಗಿ ಬಿಜೆಪಿ-ಆರ್‌ಎಸ್‌ಎಸ್‌ ತೀವ್ರ ಪ್ರಯತ್ನ ನಡೆಸಿತ್ತು. ಬಿಜೆಪಿ ಹೈಕಮಾಂಡ್ ಕಳೆದ 5 ವರ್ಷದಿಂದಲೇ ಕಾರ್ಯಪ್ರವೃತ್ತವಾಗಿತ್ತು. ಆದರೂ ಜಿಗ್ನೇಶ್ ಮೇವಾನಿಯವರನ್ನು ಸೋಲಿಸಲು ಸಾಧ್ಯವಾಗಿಲ್ಲ.

ಗುಜರಾತ್‌ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಜಿಗ್ನೇಶ್ ಮೇವಾನಿ ಗೆಲುವು ಕಂಡರೂ ಸಹ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. 182 ಕ್ಷೇತ್ರಗಳಲ್ಲಿ ಕೇವಲ 16 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಇದು ಗುಜರಾತ್ ಕಾಂಗ್ರೆಸ್‌ನ ಇತಿಹಾಸದಲ್ಲಿಯೇ ಅತಿ ಕೆಟ್ಟ ಸೋಲಾಗಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...