HomeಅಂಕಣಗಳುKarnataka against SIR44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು 'ಜಾಗೃತ ಕರ್ನಾಟಕ'...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

- Advertisement -
- Advertisement -

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ ಕರ್ನಾಟಕ’ ಸಂಘಟನೆಯು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಮನವಿ ಸಲ್ಲಿಸಿದೆ.

ರಾಜ್ಯದಲ್ಲಿ ಒಟ್ಟು ಮತದಾರರ ಪೈಕಿ ಶೇ. 9.2ರಷ್ಟು, ಅಂದರೆ ಸುಮಾರು 43,81,335 ಜನರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟವಾಗಿ ಯಾವ ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಬೂತ್ ಮಟ್ಟದ ಏಜೆಂಟರುಗಳಿಗೆ (ಬಿಎಲ್‌ಎ) ಒದಗಿಸಬೇಕು. ಅಲ್ಲದೆ, ಈ ಪಟ್ಟಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಆಯೋಗದ ವೆಬ್‌ಸೈಟ್, ಪಂಚಾಯಿತಿ ಮತ್ತು ವಾರ್ಡ್ ಕಚೇರಿಗಳಲ್ಲಿ ಬಹಿರಂಗವಾಗಿ ಪ್ರಕಟಿಸಬೇಕು. ಹೀಗೆ ಮಾಡಿದಲ್ಲಿ ಮಾತ್ರ ಮತದಾರರಿಗೆ ನಿಗದಿತ ಸಮಯದೊಳಗೆ ಅಗತ್ಯ ದಾಖಲೆಗಳನ್ನು ಒದಗಿಸಿಕೊಳ್ಳಲು ನೆರವು ನೀಡಲು ಸಾಧ್ಯವಾಗುತ್ತದೆ ಎಂದು ಸಂಘಟನೆ ಒತ್ತಾಯಿಸಿದೆ.

ಸುಮಾರು 44 ಲಕ್ಷ ನೋಟಿಸ್‌ಗಳ ವಿಚಾರಣೆಯನ್ನು (ಹಿಯರಿಂಗ್) ತ್ವರಿತವಾಗಿ ಮುಗಿಸುವುದು ಅಸಾಧ್ಯದ ಮಾತಾಗಿದೆ. ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ನಿಮಿಷಕ್ಕೊಂದು ವಿಚಾರಣೆ ನಡೆಸಿದರೂ ಇದು ಕಾರ್ಯಸಾಧುವಲ್ಲ. ಆದ್ದರಿಂದ ಈ ಪ್ರಕ್ರಿಯೆಯ ಕಾಲಾವಕಾಶವನ್ನು ಆರು ತಿಂಗಳ ಕಾಲ ವಿಸ್ತರಿಸಬೇಕು. ಅಲ್ಲದೆ, ಜನರಿಗೆ ಕೇವಲ ಒಂದು ವಾರದೊಳಗೆ ದಾಖಲೆಗಳನ್ನು ಒದಗಿಸುವುದು ಕಷ್ಟಕರವಾಗಿರುವುದರಿಂದ, ನೋಟಿಸ್ ತಲುಪಿದ ಬಳಿಕ ಕನಿಷ್ಠ ಆರು ವಾರಗಳ ಕಾಲಾವಕಾಶ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಹೆಚ್ಚುವರಿಯಾಗಿ, ನಿರ್ದಿಷ್ಟವಾಗಿ ಯಾವ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಟಿಸ್ ನೀಡಲಾಗುತ್ತಿದೆಯೋ, ಅಲ್ಲಿ ಅಗತ್ಯವಿರುವ ಹೆಚ್ಚುವರಿ ಇಆರ್‌ಒ ಹಾಗೂ ಎಇಆರ್‌ಒ (AERO) ಸಿಬ್ಬಂದಿಯನ್ನು ನೇಮಿಸಿ ಸೂಕ್ತ ವಿಚಾರಣಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಮತದಾರರು ತಾವು ಈಗ ವಾಸವಿರುವ ಸ್ಥಳದಲ್ಲೇ ಮತದಾನದ ಹಕ್ಕು ಪಡೆಯಲು ಅನುಕೂಲವಾಗುವಂತೆ ನಮೂನೆ 6 ಮತ್ತು 8ರ ಬಗ್ಗೆ ಮನೆ-ಮನೆಗೆ ತೆರಳಿ ಅರಿವು ಮೂಡಿಸುವ ಅಭಿಯಾನ ಕೈಗೊಳ್ಳಬೇಕು. ವಿಶೇಷವಾಗಿ ದಾಖಲಾತಿಗಳನ್ನು ಹೊಂದಿಸಲು ಕಷ್ಟಪಡುವ ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಬಗ್ಗೆ ಹೆಚ್ಚಿನ ಗಮನಹರಿಸಿ, ಅವರ ಮತದಾನದ ಹಕ್ಕನ್ನು ಖಾತರಿಪಡಿಸಬೇಕು ಎಂದು ಒತ್ತಾಯಿಸಲಾಗಿದೆ. ಮತದಾರರು ತಮ್ಮ ಸಮಸ್ಯೆಗಳನ್ನು ಒಂದೇ ಕಡೆ ಬಂದು ಬಗೆಹರಿಸಿಕೊಳ್ಳಲು ಅನುಕೂಲವಾಗುವಂತೆ ಮುಂದಿನ ಆರು ತಿಂಗಳ ಕಾಲ ವಿಶೇಷ ಕ್ಯಾಂಪ್‌ಗಳನ್ನು ಆಯೋಜಿಸಬೇಕು ಎಂದು ಜಾಗೃತ ಕರ್ನಾಟಕದ ಪರವಾಗಿ ಅದಂ ಖಾನ್ ಅವರು ವಿನಂತಿಸಿದ್ದಾರೆ.

ನೋಂದಣಿ, ಅರ್ಹತೆಗಳು ಅಥವಾ ಮತದಾರರ ಪಟ್ಟಿಯ ಹೆಸರು ಪರಿಶೀಲನೆಗೆ ಸಂಬಂಧಿಸಿದ ಅಧಿಕೃತ ಮಾಹಿತಿ ಪಡೆಯಲು ಮತದಾರರು ಭಾರತೀಯ ಚುನಾವಣಾ ಆಯೋಗದ ಮತದಾರರ ಸೇವಾ ಪೋರ್ಟಲ್ ಅಥವಾ ತಮ್ಮ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಒಂದು ತಿಂಗಳ ಗಡುವು

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...