Homeಮುಖಪುಟಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

- Advertisement -
- Advertisement -

ನವೆಂಬರ್ 2 ರಂದು ಅಮೆಜಾನ್ ಪ್ರೈಮ್‌ ವೀಡಿಯೋದಲ್ಲಿ ಬಿಡುಗಡೆಯಾದ ತಮಿಳು ಸೂಪರ್‌ ಸ್ಟಾರ್‌ ಸೂರಿಯಾ ನಟಿಸಿರುವ ಚಿತ್ರ ‘ಜೈ ಭೀಮ್’ ದೇಶಾದ್ಯಂತ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ನಡುವೆ, ತಮಿಳುನಾಡು ಬಿಜೆಪಿ ನಾಯಕ ಎಚ್. ರಾಜಾ ಟ್ವಿಟರ್‌ನಲ್ಲಿ ಸೂರಿಯಾ ಅವರನ್ನು ಟೀಕಿಸಿದ್ದು, ಅವರನ್ನು “ಸ್ವಾರ್ಥಿ” ಎಂದು ಕರೆದಿದ್ದಾರೆ.

‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ. ಜೆ. ಜ್ಞಾನವೇಳ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರು ವಕೀಲನಾಗಿ ಕಮ್ಯುನಿಷ್ಟ್‌ ಚಳುವಳಿಯನ್ನು ಮುನ್ನಡೆಸುತ್ತಿದ್ದಾಗ ನಡೆಸಿದ ‘ಒಂದು’ ಹೋರಾಟದ ನೈಜ ಕತೆಯಾಗಿದೆ ಈ ಸಿನಿಮಾ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ಸಾಮಾಜಿಕ ಜಾಲತಾಣಗಳಲ್ಲೂ ಈ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಬಿಜೆಪಿ ನಾಯಕ ಎಚ್‌. ರಾಜಾ ಸಿನಿಮಾ ಬಗ್ಗೆ ತಕರಾರು ತೆಗೆದಿದ್ದಾರೆ. ಟ್ವಟರ್‌ನಲ್ಲಿ ಅವರು, “ನಮ್ಮ ಮಕ್ಕಳು 3 ಭಾಷೆಗಳನ್ನು ಓದಬಾರದು ಎಂದು ಹೇಳುವವರು, ತನ್ನ ಚಿತ್ರವನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ವಾರ್ಥವನ್ನು ಅರ್ಥಮಾಡಿಕೊಳ್ಳೋಣ” ಎಂದು ಬರೆದಿದ್ದಾರೆ.

2019 ರಲ್ಲಿ, ನರೇಂದ್ರ ಮೋದಿ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ನಟ ಸೂರಿಯಾ ಟೀಕಿಸಿದ್ದರು. ಅದರಲ್ಲಿನ ಕೆಲವು ನಿಬಂಧನೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನಾನುಕೂಲತೆ ಉಂಟು ಮಾಡುತ್ತವೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಸೂರಿಯಾ ಅಂದು, “NEP ಯ ಗಮನವು ಕೇವಲ ಪ್ರವೇಶ ಪರೀಕ್ಷೆಗಳನ್ನು ನಡೆಸುವುದರ ಬಗ್ಗೆ ಮಾತ್ರವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಸಮಾನ ಶಿಕ್ಷಣವನ್ನು ನೀಡುವಲ್ಲಿ ಇದರ ಗಮನ ಇಲ್ಲ. ಹಾಗಾಗಿಯೆ ಎಲ್ಲರೂ ಕೋಪಗೊಂಡಿದ್ದಾರೆ, ದುಃಖಿತರಾಗಿದ್ದಾರೆ ಮತ್ತು ಭಯಪಡುತ್ತಾರೆ. ಇದು ದೇಶದ 30 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಅವರು ತರಗತಿಗಳಿಗೆ ಹಾಜರಾಗುವುದು ಹೇಗೆ? ನನ್ನ ಮಕ್ಕಳಿಗೆ ತೃತೀಯ ಭಾಷೆಯನ್ನು ಕಲಿಸುವುದು ನನಗೆ ಸವಾಲಾಗಿದೆ” ಎಂದು ಹೇಳಿದ್ದರು.

ತಮ್ಮ ಸಿನಿಮಾ ಕುರಿತು ಬಿಜೆಪಿ ನಾಯಕನ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಸೂರಿಯಾ ತಕ್ಕ ಉತ್ತರ ಕೊಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದರು. ಆದರೆ ಸೂರಿಯಾ ಮಾತ್ರ ಯಾವುದೆ ಪ್ರತಿಕ್ರಿಯೆ ನೀಡದೆ, ಅವರ ಟ್ವೀಟ್‌ ಅನ್ನು ‘ಲೈಕ್’ ಮಾಡಿ ಸುಮ್ಮನಾಗಿದ್ದಾರೆ.

ನಟನ ಈ ಪ್ರಬುದ್ಧ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಹಲವಾರು ಜನರು ಅವರನ್ನು ಬೆಂಬಲಿಸಿ ಕಾಮೆಂಟ್ ಮಾಡಿದ್ದಾರೆ. ಸೂರಿಯಾ ಅವರು ಎಚ್. ರಾಜಾ ಅವರ ಟ್ವೀಟ್ ಅನ್ನು ಲೈಕ್‌ ಮಾಡಿ ಟ್ರೋಲ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಟ್ವಿಟರ್‌ನಲ್ಲಿನ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಟಿಜೆ ಜ್ಞಾನವೇಲ್ ಚಿತ್ರವನ್ನು ಬರೆದು ನಿರ್ದೇಶಿಸಿದರೆ, ಸೂರ್ಯ ಮತ್ತು ಜ್ಯೋತಿಕಾ ತಮ್ಮ ಬ್ಯಾನರ್ 2D ಎಂಟರ್ಟೈನ್ಮೆಂಟ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಡುವ ವಕೀಲನ ಪಾತ್ರದಲ್ಲಿ ಸೂರಿಯಾ ಅವರನ್ನು ಚಿತ್ರಿಸಲಾಗಿದ್ದು. ಚಿತ್ರದಲ್ಲಿ ರಜಿಶಾ ವಿಜಯನ್, ಪ್ರಕಾಶ್ ರಾಜ್, ಲಿಜೋ ಮೋಲ್ ಜೋಸ್, ಕೆ ಮಣಿಕಂದನ್ ಕೂಡ ನಟಿಸಿದ್ದಾರೆ. ಸೀನ್ ರೋಲ್ಡನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಇಡೀ ಆಡಳಿತ ಯಂತ್ರವನ್ನು ಎದುರು ಹಾಕಿ ಧ್ವನಿಯಿಲ್ಲದ ಸಮುದಾಯದ ಬೆನ್ನಿಗೆ ನಿಲ್ಲುವುದು, ಅವರಿಗೆ ನ್ಯಾಯ ಕೊಡಿಸುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇದಲ್ಲದೆ, ಆದಿವಾಸಿ ಜನರಿಗೆ ಈ ವ್ಯವಸ್ಥೆ ನೀಡುವ ಕಿರುಕುಳ, ಅವರ ಸಂಕಷ್ಟವನ್ನೂ ಈ ಚಿತ್ರದಲ್ಲಿ ಮನಸಿಗೆ ಇಳಿಯುವಂತೆ ಮತ್ತು ಶೋಷಕರಿಗೆ ಇರಿಯುವಂತೆ ಕಟ್ಟಿಕೊಡಲಾಗಿದೆ.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ನೋಡಿದ, ನೈಜ ಘಟನೆಗಳನ್ನು ಆಧರಿಸಿದ ಅತ್ಯುತ್ತಮ ಸಿನಿಮಾ.! ಆ ಬಗ್ಗೆ, ರಾಜಾ ಅವರ ತಕರಾರನ್ನು ಬದಿಗಿಡಿ. ಸುರಿಯಾ ಅವರ ಪ್ರತಿಕ್ರಿಯೆ ಪ್ರಬುದ್ಧವಾದುದು.

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...