Homeಮುಖಪುಟಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ

ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ

ಜೈಭೀಮ್ ಚಿತ್ರದಲ್ಲಿ ರಾಸಕಣ್ಣು ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಮಣಿಕಂದನ್‌ಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ದೊರೆತಿದೆ.

- Advertisement -
- Advertisement -

ಟಿ. ಜೆ. ಜ್ಞಾನವೇಳ್‌ ನಿರ್ದೇಶಿಸಿದ, ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಅವರು ಪ್ರಧಾನ ಪಾತ್ರದಲ್ಲಿರುವ ‘ಜೈಭೀಮ್‌’ ಚಿತ್ರವು ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ ಜಯಿಸಿದೆ.

‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆ ಇರುವ ಈ ಚಿತ್ರಕ್ಕೆ ಪ್ರಪಂಚಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಜೈಭೀಮ್ ಚಿತ್ರದಲ್ಲಿ ರಾಸಕಣ್ಣು ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಮಣಿಕಂದನ್‌ಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ದೊರೆತಿದೆ ಎಂದು ಸೂರಿಯಾರವರ 2ಡಿ ಎಂಟರ್ಟೈನ್ಮೆಂಟ್ ಸಂಸ್ಥೆ ತಿಳಿಸಿದೆ.

ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರು ವಕೀಲನಾಗಿ ಕಮ್ಯುನಿಷ್ಟ್‌ ಚಳುವಳಿಯನ್ನು ಮುನ್ನಡೆಸುತ್ತಿದ್ದಾಗ ನಡೆಸಿದ ‘ಒಂದು’ ಹೋರಾಟದ ನೈಜ ಕತೆಯಾಗಿದೆ ಈ ಸಿನಿಮಾ.

ಇದನ್ನೂ ಓದಿ: ಬಹುಜನ ಭಾರತ; ಅವಸಾನಗೊಂಡ ಆತ್ಮಸಾಕ್ಷಿಗಳು ಮತ್ತು ’ಜೈಭೀಮ್’ ಸಿನೆಮಾ

ಜೈಭೀಮ್ ಚಿತ್ರ ಆಸ್ಕರ್ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗುವ ಮೂಲಕ ಅತಿ ದೊಡ್ಡ ಗೌರವಕ್ಕೆ ಪಾತ್ರವಾಗಿತ್ತು. ಅಲ್ಲದೆ ಗ್ಲೋಬಲ್ ಕಮ್ಯುನಿಟಿ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...