Homeಮುಖಪುಟಸಂಸತ್ತಿನಲ್ಲಿ 'ಜೈ ಪ್ಯಾಲೆಸ್ತೀನ್' ಘೋಷಣೆ | ಅಸಾದುದ್ದೀನ್ ಓವೈಸಿಗೆ ಬರೇಲಿ ನ್ಯಾಯಾಲಯದಿಂದ ಸಮನ್ಸ್

ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ | ಅಸಾದುದ್ದೀನ್ ಓವೈಸಿಗೆ ಬರೇಲಿ ನ್ಯಾಯಾಲಯದಿಂದ ಸಮನ್ಸ್

- Advertisement -
- Advertisement -

ಸಂಸತ್ತಿನಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವು ಸಮನ್ಸ್‌ ನೀಡಿದೆ.ಪ್ಯಾಲೆಸ್ತೀನ್ ಪರ ಘೋಷಣೆ ಕೂಗುವ ಮೂಲಕ ಲೋಕಸಭೆ ಸಂಸದರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರುದಾರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ

ಜೂನ್‌ ತಿಂಗಳಲ್ಲಿ ಸಂಸತ್ತಿನ ಕೆಳಮನೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಓವೈಸಿ ಅವರು, ಪ್ಯಾಲೆಸ್ತೀನ್ ಪರ ಘೋಷಣೆ ಕೂಗುವ ಮೂಲಕ ಸಾಂವಿಧಾನಿಕ ಮತ್ತು ಕಾನೂನು ನಂಬಿಕೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿ ಸಲ್ಲಿಸಿದ ವಕೀಲ ವೀರೇಂದ್ರ ಗುಪ್ತಾ ಆರೋಪಿಸಿದ್ದಾರೆ. ಅವರು ಜುಲೈನಲ್ಲಿ ಸಂಸದ/ಶಾಸಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸದ/ಶಾಸಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾದ ನಂತರ ಗುಪ್ತಾ ಅವರು ಬರೇಲಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದರು. ಓವೈಸಿ ಕೂಗಿದ ಘೋಷಣೆಯಿಂದ ತನಗೆ ನೋವಾಗಿದೆ ಎಂದು ವಕೀಲರು ಹೇಳಿದ್ದಾರೆ. ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಧೀಶರು ಜನವರಿ 7 ರಂದು ಓವೈಸಿ ಅವರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಓವೈಸಿ ಅವರು 2004 ರಿಂದ ಹೈದರಾಬಾದ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಜೂನ್ 25 ರಂದು 18 ನೇ ಲೋಕಸಭೆಯಲ್ಲಿ ಹೈದರಾಬಾದ್ ಸಂಸದರಾಗಿ ಓವೈಸಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಮುತ್ತಿಗೆ ಹಾಕಲ್ಪಟ್ಟ ಪ್ಯಾಲೆಸ್ತೀನ್ ಪ್ರದೇಶದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಯುದ್ಧದ ವಿರುದ್ಧ “ಜೈ ಪ್ಯಾಲೆಸ್ತೀನ್” ಎಂದು ಹೇಳುವ ಮೂಲಕ ಓವೈಸಿ ಅವರು ತಮ್ಮ ಪ್ರಮಾಣವಚನವನ್ನು ಮುಕ್ತಾಯಗೊಳಿಸಿದ್ದರು.

ಇದರ ನಂತರ ಜೂನ್ 27 ರಂದು, ಅಪರಿಚಿತ ದುಷ್ಕರ್ಮಿಗಳು ಓವೈಸಿ ಅವರ ದೆಹಲಿಯ ಮನೆಗೆ ಧ್ವಂಸಗೊಳಿಸಿದ್ದರು ಮತ್ತು ಪ್ರವೇಶ ದ್ವಾರದಲ್ಲಿ ಮತ್ತು ಮನೆಯ ಗೋಡೆಯ ಮೇಲೆ ಇಸ್ರೇಲ್ ಪರ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಪೋಸ್ಟರ್‌ಗಳಲ್ಲಿ “ನಾನು ಇಸ್ರೇಲ್‌ ಪರ” ಮತ್ತು “ಒವೈಸಿಯನ್ನು ಅಮಾನತುಗೊಳಿಸಿ” ಎಂಬ ಘೋಷಣೆಗಳನ್ನು ಬರೆಯಲಾಗಿತ್ತು.

ಇದನ್ನೂ ಓದಿ: ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...