Homeಕ್ರೀಡೆಕ್ರಿಕೆಟ್ಪಾಕ್ ಆಟಗಾರ ರಿಜ್ವಾನ್ ಎದುರು 'ಜೈ ಶ್ರೀ ರಾಮ್' ಘೋಷಣೆ ವಿಡಿಯೋ ವೈರಲ್: ಸ್ವೀಕಾರಾರ್ಹವಲ್ಲ ಎಂದ...

ಪಾಕ್ ಆಟಗಾರ ರಿಜ್ವಾನ್ ಎದುರು ‘ಜೈ ಶ್ರೀ ರಾಮ್’ ಘೋಷಣೆ ವಿಡಿಯೋ ವೈರಲ್: ಸ್ವೀಕಾರಾರ್ಹವಲ್ಲ ಎಂದ ಉದಯನಿಧಿ

- Advertisement -
- Advertisement -

ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ಗೆ ತೆರಳುತ್ತಿದ್ದಾಗ ಕೆಲ ಪ್ರೇಕ್ಷಕರು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುವ ವೀಡಿಯೊಗಳು ವೈರಲ್‌ ಆಗಿದ್ದು, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅಭಿಮಾನಿಗಳ ವರ್ತನೆಯನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಉದಯನಿಧಿ ಸ್ಟಾಲಿನ್, ಭಾರತವು ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರ ಜೊತೆ ನಡೆದುಕೊಂಡ ರೀತಿ ಸ್ವೀಕಾರಾರ್ಹವಲ್ಲ. ಕ್ರೀಡೆಗಳು ದೇಶವನ್ನು ಒಗ್ಗೂಡಿಸಬೇಕು. ದೇಶಗಳ ನಡುವೆ  ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಖಂಡನೀಯ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಪಾಕಿಸ್ತಾನದ ವಿಕೆಟ್‌ ಕೀಪರ್ ಹಾಗೂ ಬ್ಯಾಟರ್ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ಕೊಠಡಿಗೆ ಹಿಂತಿರುಗುತ್ತಿದ್ದಾಗ ಪ್ರೇಕ್ಷಕರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವುದನ್ನು ವೈರಲ್‌ ವೀಡಿಯೊದಲ್ಲಿ ಕಾಣಬಹುದು.

ಈ ವರ್ಷದ ಆರಂಭದಲ್ಲಿ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದರು, ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ್ದರು.

ಸಾಮಾಜಿಕ ಮಾಧ್ಯಮ ಬಳಕೆದಾರರು ಇದನ್ನು ಕ್ರಿಕೆಟ್ ಅಭಿಮಾನಿಗಳ ದುರ್ವರ್ತನೆ ಎಂದು ಕರೆದಿದ್ದಾರೆ.

ಚಲನಚಿತ್ರ ವಿಮರ್ಶಕ ಮತ್ತು ಐಐಟಿ ಹಳೆಯ ವಿದ್ಯಾರ್ಥಿ ವೆಂಕಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳ ವರ್ತನೆ ಖಂಡನೀಯ ಎಂದು ಹೇಳಿದರು. ನೀವು ಆಟಗಾರನನ್ನು ಅವಮಾನಿಸಲು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಿದ್ದರೆ, ನೀವು ಆಟಗಾರನನ್ನು ಮಾತ್ರ ಅವಮಾನಿಸುತ್ತಿಲ್ಲ, ನಮ್ಮ ದೇವರಾದ ರಾಮನನ್ನೂ ಅವಮಾನಿಸಿದ್ದೀರಿ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಪಾಕ್‌ ತಂಡವು ಭಾರತೀಯ ಆಟಗಾರರೊಂದಿಗೆ ತುಂಬಾ ಸ್ನೇಹಪರರಾಗಿದ್ದಾರೆ ಮತ್ತು ರಿಜ್ವಾನ್ ಸ್ವತಃ ಒಳ್ಳೆಯ ಮನುಷ್ಯ. ಅವರ ಜೊತೆ ಈ ವರ್ತನೆ ಖಂಡನೀಯ ಎಂದು ಹೇಳಿದ್ದಾರೆ.

ಇನ್ನು ಪಂದ್ಯದಲ್ಲಿ ಭಾರತವು 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಜಮ್‌ಗೆ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನು ಓದಿ: ಭಾರತದಲ್ಲಿ ಇರಬೇಕಿದ್ದರೆ ‘ಭಾರತ ಮಾತಾ ಕಿ ಜೈ’ ಹೇಳಬೇಕು: ವಿವಾದಾತ್ಮಕ ಹೇಳಿಕೆ ಕೊಟ್ಟ ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...