Homeಮುಖಪುಟದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದಲ್ಲಿ ದಲಿತ ಸಮುದಾಯದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕೆ ಫ್ರೆಂಚ್‌ ಚಲನಚಿತ್ರ ನಿರ್ದೇಶಕ ವ್ಯಾಲೆಂಟಿನ್‌ ಹೆನಾಲ್ಟ್‌ ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ಆದರೆ ಬಿಡುಗಡೆಯಾದ ಆರು ತಿಂಗಳ ನಂತರವೂ ಅವರಿಗೆ ತಮ್ಮ ತವರಿಗೆ ಹೋಗಲು ಸಾಧ್ಯವಾಗಿರಲಿಲ್ಲ, ಇದೀಗ ದೀರ್ಘ ಕಾನೂನು ಹೋರಾಟದ ಬಳಿಕ ವ್ಯಾಲೆಂಟಿನ್‌ ಹೆನಾಲ್ಟ್‌  ಪ್ರಾನ್ಸ್‌ಗೆ ತೆರಳಿದ್ದಾರೆ ಎಂದು ‘ಲೆ ಮಾಂಡೆ’ ವೆಬ್‌ಸೈಟ್ ವರದಿ ಮಾಡಿದೆ.

ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೇಂದ್ರೀಕರಿಸುವ ಚಲನಚಿತ್ರದಲ್ಲಿ ಕೆಲಸ ಮಾಡಲು ಹೆನಾಲ್ಟ್ ಆಗಸ್ಟ್ 10, 2023ರಂದು ಭಾರತಕ್ಕೆ ಆಗಮಿಸಿದ್ದರು. ಅವರು ಉತ್ತರಪ್ರದೇಶಕ್ಕಿಂತ ಮೊದಲು ಬಿಹಾರ ಮತ್ತು ಜಾರ್ಖಂಡ್‌ಗಳಲ್ಲಿ ಪ್ರಯಾಣಿಸಿದ್ದರು. ಅಕ್ಟೋಬರ್ 10, 2023ರಂದು ಉತ್ತರಪ್ರದೇಶದಲ್ಲಿ ದಲಿತರಿಗೆ ಭೂಮಿಯ ಹಕ್ಕುಗಳಿಗೆ ಒತ್ತಾಯಿಸಿ ರೈತ ಮಹಿಳೆಯರ ನೇತೃತ್ವದಲ್ಲಿ ನಡೆದ “ಅಂಬೇಡ್ಕರ್ ಜನರ ಮೆರವಣಿಗೆ”ಯಲ್ಲಿ ಹೆನಾಲ್ಟ್  ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಭಾಷಣಕಾರರೊಬ್ಬರಿಗೆ ಹೆನಾಲ್ಟ್  ಬಗ್ಗೆ ಮೊದಲೇ ಪರಿಚಯವಿದ್ದ ಕಾರಣ ಅವರು ಭಾಷಣದಲ್ಲಿ ವಿದೇಶಿ ವ್ಯಕ್ತಿಯೋರ್ವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲಿ ಹೆನಾಲ್ಟ್ ಅವರನ್ನು ಸ್ಥಳೀಯ ಗುಪ್ತಚರ ಇಲಾಖೆ ಏಜೆಂಟರು ಸುತ್ತುವರಿದಿದ್ದರು. ಪೊಲೀಸರು ಸ್ಥಳದಲ್ಲೇ  ಹೆನಾಲ್ಟ್ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವರಿಗೆ ತೆರಳಲು ಅನುಮತಿ ನೀಡಿದ್ದರೂ, ಅದೇ ದಿನ ಅವರು ತಂಗಿದ್ದ ಹೋಟೆಲ್ ಕೊಠಡಿಯಿಂದ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಗಿದೆ. ವಿದೇಶಿ ಕಾಯಿದೆಯ ಕಲಂ 14ಬಿ ಅಡಿಯಲ್ಲಿ “ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

ವೀಸಾದಲ್ಲಿ ಜಾರ್ಖಂಡ್‌ನಿಂದ ಹೊರಹೋಗಲು ಅನುಮತಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ವರದಿಯ ಪ್ರಕಾರ, ಇದು ಸುಳ್ಳು ಆರೋಪವಾಗಿದ್ದು, ಅವರು ಬ್ಯುಸಿನೆಸ್‌ ವೀಸಾದಲ್ಲಿ ಬಂದಿದ್ದಾರೆ, ಈ ವೀಸಾ ಒಂದು ವರ್ಷದವರೆಗೆ ಮಾನ್ಯತೆ ಹೊಂದಿದೆ ಮತ್ತು ಯಾವುದೇ ಭೌಗೋಳಿಕ ನಿರ್ಬಂಧಗಳನ್ನು ಒಳಗೊಂಡಿಲ್ಲ ಎಂದು ಹೇಳಲಾಗಿದೆ.

ಬಂಧನಕ್ಕೊಳಗಾದ ಒಂದು ದಿನದ ನಂತರ ನ್ಯಾಯಾಧೀಶರು ಅವರ ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು, ನಂತರ ಅವರನ್ನು ಗೋರಖ್‌ಪುರ ಜೈಲಿಗೆ ಕಳುಹಿಸಲಾಯಿತು. ನಾನು ನೆಲದ ಮೇಲೆ ಮಲಗಿದೆ, ರಾತ್ರಿಯಲ್ಲಿ ತಿರುಗಲು ಕೂಡ ಅಸಾಧ್ಯವಾದ ಕಡಿಮೆ ಸ್ಥಳಾವಕಾಶ ನೀಡಲಾಗಿತ್ತು ಎಂದು ಫ್ರೆಂಚ್ ದೈನಿಕದ ಜೊತೆ ತನ್ನ ಜೈಲು ಶಿಕ್ಷೆಯ ಬಗ್ಗೆ ಮಾತನಾಡುವಾಗ ಹೆನಾಲ್ಟ್ ಹೇಳಿರುವುದಾಗಿ ಉಲ್ಲೇಖಿಸಿದೆ. ವರದಿಯ ಪ್ರಕಾರ, ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗೆ ಮೀಸಲಾದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿತ್ತು.

ಬಂಧನದ ಬಳಿಕ ಹೆನಾಲ್ಟ್ ಜೈಲಿನಿಂದ ಫ್ರೆಂಚ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದು, ರಾಯಭಾರ ಕಚೇರಿಯು ವಕೀಲರ ಸಂಪರ್ಕವನ್ನು ಒದಗಿಸಿದೆ. ಅವರ ಬಂಧನದ ನಂತರ ಮೂರನೇ ವಾರದಲ್ಲಿ, ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಜೈಲಿನಲ್ಲಿ ಅವರನ್ನು ಭೇಟಿಯಾದರು. ಆ ಬಳಿಕ ಅವರ ತಂದೆ ಅವರನ್ನು ಭೇಟಿ ಮಾಡಲು ಭಾರತಕ್ಕೆ ಬಂದರು ಮತ್ತು ವಕೀಲರನ್ನು ಬದಲಾಯಿಸಿದರು, ಬಳಿಕ ಜಾಮೀನು ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದರು. ಆದರೆ ಅವರು ತವರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಹೆನಾಲ್ಟ್  ಅವರ ಪಾಸ್‌ಪೋರ್ಟ್ ಮೇ ತಿಂಗಳವರೆಗೆ ಪೊಲೀಸರ ಬಳಿ ಇತ್ತು. ಸತತ ಕಾನೂನು ಹೊರಾಟದ ಬಳಿಕ ಅವರು ಕೊನೆಗೆ ಇದೇ ಮೇ.4ರಂದು ಭಾರತವನ್ನು ತೊರೆದು ಪ್ರಾನ್ಸ್‌ಗೆ ವಾಪಾಸ್ಸಾಗಿದ್ದಾರೆ.

ಇದನ್ನು ಓದಿ: ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...