Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...