Homeಮುಖಪುಟಮಾಲ್ಡೀವ್ಸ್ ಜತೆಗೆ ಜೈಶಂಕರ್ ಮಾತುಕತೆ; ದ್ವೀಪ ರಾಷ್ಟ್ರದಿಂದ ಸೈನಿಕರನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡ ಭಾರತ

ಮಾಲ್ಡೀವ್ಸ್ ಜತೆಗೆ ಜೈಶಂಕರ್ ಮಾತುಕತೆ; ದ್ವೀಪ ರಾಷ್ಟ್ರದಿಂದ ಸೈನಿಕರನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡ ಭಾರತ

- Advertisement -
- Advertisement -

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಅಧ್ಯಕ್ಷ ಮೊಹಮದ್ ಮುಯಿಝು ಅವರು ನಿಗದಿಪಡಿಸಿದ ಮೇ 10 ರ ಗಡುವಿನ ಮುಂಚೆಯೇ ಭಾರತವು ದ್ವೀಪ ರಾಷ್ಟ್ರದಿಂದ ತನ್ನ ಎಲ್ಲ ಸೈನಿಕರನ್ನು ಹಿಂತೆಗೆದುಕೊಳ್ಳುವಿಕೆಯನ್ನು ಪೂರ್ಣಗೊಳಿಸಿದೆ.

ಮಾಲ್ಡೀವ್ಸ್‌ನಲ್ಲಿ ಬೀಡುಬಿಟ್ಟಿದ್ದ ಭಾರತೀಯ ಸೈನಿಕರ ಕೊನೆಯ ಬ್ಯಾಚ್ ಅನ್ನು ವಾಪಸ್ ಕಳುಹಿಸಲಾಗಿದೆ ಎಂದು ಹೀನಾ ವಲೀದ್ ದೃಢಪಡಿಸಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮುಖ್ಯ ವಕ್ತಾರರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಭಾರತವು ಈ ಹಿಂದೆ ಉಡುಗೊರೆಯಾಗಿ ನೀಡಿದ್ದ ಎರಡು ಹೆಲಿಕಾಪ್ಟರ್‌ಗಳು, ಡೋರ್ನಿಯರ್ ವಿಮಾನಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಸುಮಾರು 89 ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ವಾಪಸು ಕಳುಹಿಸುವುದು 2023 ರಲ್ಲಿ ಅವರ ಅಧ್ಯಕ್ಷೀಯ ಪ್ರಚಾರದ ಸಮಯದಲ್ಲಿ ಮುಯಿಝು ಅವರ ಪ್ರಮುಖ ಪ್ರತಿಜ್ಞೆಯಾಗಿತ್ತು.

ಠಿಕಾಣಿ ಹೂಡಿರುವ ಸೈನಿಕರ ಸಂಖ್ಯೆಯ ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು ಎಂದು ವಲೀದ್ ಹಂಚಿಕೊಂಡಿದ್ದಾರೆ. ಈ ಹಿಂದೆ 51 ಸೈನಿಕರನ್ನು ಸೋಮವಾರ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಅದರ ಸರ್ಕಾರ ಘೋಷಿಸಿತ್ತು. ಗುರುವಾರ ನವದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತೀಯ ಸಿಬ್ಬಂದಿಯ ಮೊದಲ ಮತ್ತು ಎರಡನೇ ಬ್ಯಾಚ್‌ಗಳು ಹಿಂತಿರುಗಿದ್ದಾರೆ ಎಂದು ದೃಢಪಡಿಸಿದರು.

ಕಳೆದ ನವೆಂಬರ್‌ನಲ್ಲಿ ‘ಇಂಡಿಯಾ ಔಟ್’ ಪೋಲ್ ಪ್ಲಾಂಕ್‌ನಲ್ಲಿ ಅಧಿಕಾರಕ್ಕೆ ಬಂದ ಮುಯಿಜ್ಜು ಅವರ ಮೊದಲ ಕಾರ್ಯಗಳಲ್ಲಿ ಒಂದಾದ ಮೇ 10 ರೊಳಗೆ ಸುಮಾರು 80 ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವುದಾಗಿತ್ತು. ಸೈನಿಕರು ಎರಡು ಹೆಲಿಕಾಪ್ಟರ್‌ಗಳು ಮತ್ತು ಡೋರ್ನಿಯರ್ ವಿಮಾನವನ್ನು ನಿರ್ವಹಿಸಲು ಅಲ್ಲಿ ನೆಲೆಸಿದ್ದರು.

ಮಾಲ್ಡೀವ್ಸ್ ಸರ್ಕಾರದ ಚೀನಾ ಪರವಾದ ಒಲವನ್ನು ಉಲ್ಲೇಖಿಸಿ ಮಾತನಾಡಿದ ಜೈಶಂಕರ್,  ‘ಜಮೀರ್ ಅವರಿಗೆ ಭಾರತ-ಮಾಲ್ಡೀವ್ಸ್ ಸಂಬಂಧಗಳ ಅಭಿವೃದ್ಧಿಯು ಪರಸ್ಪರ ಹಿತಾಸಕ್ತಿಗಳು ಮತ್ತು ಪರಸ್ಪರ ಸೂಕ್ಷ್ಮತೆಯನ್ನು ಆಧರಿಸಿದೆ” ಎಂದು ಹೇಳಿದರು.

ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಸಕ್ಕರೆ, ಅಕ್ಕಿ, ಗೋಧಿ ಹಿಟ್ಟು ಮತ್ತು ಬೇಳೆಕಾಳುಗಳು, ನದಿ ಮರಳು ಮತ್ತು ಕಲ್ಲುಗಳನ್ನು ಮಾಲ್ಡೀವ್ಸ್‌ಗೆ ವಿಶಿಷ್ಟ ದ್ವಿಪಕ್ಷೀಯ ಕಾರ್ಯವಿಧಾನದ ಅಡಿಯಲ್ಲಿ 2024-25 ಕ್ಕೆ ಅತ್ಯಧಿಕ ರಫ್ತು ಕೋಟಾಗಳನ್ನು ಭಾರತವು ಇತ್ತೀಚೆಗೆ ಅನುಮೋದಿಸಿದೆ. ಈ ವ್ಯವಸ್ಥೆಯು 1981 ರಲ್ಲಿ ಜಾರಿಗೆ ಬಂದ ನಂತರ ಅನುಮೋದಿತ ಪ್ರಮಾಣಗಳು ಅತ್ಯಧಿಕವಾಗಿದೆ.

ಇದನ್ನೂ ಓದಿ; ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಮಂದಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...