Homeಕರ್ನಾಟಕಬಳ್ಳಾರಿಗೆ ಬರ್ತೀನಿ, ಅದೇನ್‌ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್‌ ರೆಡ್ಡಿಗೆ ತೊಡೆ ತಟ್ಟಿದ ಜಮೀರ್‌ ಅಹ್ಮದ್‌

ಬಳ್ಳಾರಿಗೆ ಬರ್ತೀನಿ, ಅದೇನ್‌ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್‌ ರೆಡ್ಡಿಗೆ ತೊಡೆ ತಟ್ಟಿದ ಜಮೀರ್‌ ಅಹ್ಮದ್‌

- Advertisement -
- Advertisement -

ಧಾರ್ಮಿಕ ಪ್ರಚೋದಾನಾಕಾರಿ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಒಳಗಾಗಿದ್ದ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ತೊಡೆ ತಟ್ಟಿ ಸವಾಲು ಹಾಕಿದ್ದಾರೆ. ಆ ಮೂಲಕ ಪ್ರಕರಣ ಮತ್ತಷ್ಟು ವಿವಾದಕ್ಕೆ ಒಳಗಾಗಿದೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಜಮೀರ್‌ ಅಹ್ಮದ್‌ ಖಾನ್‌ ಏಕವಚನದಲ್ಲಿ ಸೋಮಶೇಖರ್‌ ರೆಡ್ಡಿಯನ್ನು ತರಾಟೆಗೆ ತೆಗೆದಕೊಂಡರು. ಮುಂದಿನ ಸೋಮವಾರ ಬಳ್ಳಾರಿಗೆ ನಾನೊಬ್ಬನೆ ಬರ್ತಿನಿ ಅದು ಯಾವ್‌ ಖಡ್ಗ ತಗೊಂಡ್‌ ಬರ್ತಿರೋ ಬಾ ಎಂದು ಸವಾಲು ಹಾಕಿದ್ದಾರೆ. ಅವರಾಡಿದ ಮಾತುಗಳು ಈ ಕೆಳಗಿನಂತಿವೆ.

17 ಕೋಟಿ ಜನರು ಬಿಟ್ಟಾಕ್ಕಿ. ನನ್ನೊಬ್ಬನನ್ನು ಉಫ್‌ ಅನ್ನಲ್ಲಿ, ಅದು ಯಾವ್‌ ಖಡ್ಗ ತರ್ತಾನೋ ತರಲಿ, ಮಿಸ್ಟರ್‌ ಸೋಮಶೇಖರ್‌ ರೆಡ್ಡಿ ಐ ಅಮ್‌ ಕಮಿಂಗ್‌ ನೆಕ್ಸ್ಟ್‌ ಮಂಡೆ.

ನಮ್ಮ ದೇಶ ಅಲ್ಲದೇ ಬೇರೆ ಎಲ್ಲಾ ದೇಶಾಗಳನ್ನು ನೋಡಿದ್ದೀನಿ. ಎಲ್ಲಾ ಕಡೆಗಳಿಗಿಂತ ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ಶಾಂತಿಯಿಂದ ಇದ್ದಾರೆ. ಆದರೆ ಎಲ್ಲಾಕ್ಕಿಂತ ಹೆಚ್ಚಾಗಿ ಪ್ರೀತಿಯಿಂದ ಬಾಳುತ್ತಿರುವುದು ನಮ್ಮ ಭಾರತ ದೇಶದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ಈ ಸೋಮಶೇಖರ್‌ ರೆಡ್ಡಿ ಆಂದ್ರದಿಂದ ಬಂದವನು, ಅವನು ಕರ್ನಾಟಕದವನು ಅಲ್ಲವೇ ಅಲ್ಲ. ಈ ಥರದ ಹೇಳಿಕೆ ಎಲ್ಲಿಯಾದರೂ ಕೊಡುತ್ತಾರ? ನೆಮ್ಮದಿ ಶಾಂತಿಯಿಂದ ಬಾಳುತ್ತಾ ಇದ್ದೀವಿ. ಏನೋ ಖಡ್ಗ ತಗೊಂಡು ಬರ್‍ತಾನಂತೆ. ನಾವೇನು ಬಳೆ ಹಾಕಿದ್ದೀವಾ ಖಡ್ಗ ತಗೊಂಡು ಬಂದ್ರೆ?…

ಅವನ ಮನೇ ಮುಂದೆನೇ ಕುಳಿದುಕೊಳ್ಳುತ್ತೇನೆ ನಾನು, ನಾವೆಂದೂ ಜಾತಿ ಮಾಡಿಲ್ಲ ನಾವು. ಅದನ್ನು ನಮ್ಮ ಇಸ್ಲಾಂ ಧರ್ಮ ಯಾವತ್ತೂ ಜಾತಿ ಮಾಡಿ ಅಂತ ಹೇಳಿಕೊಟ್ಟಿಲ್ಲ. ನಮ್ಮ ಧರ್ಮ ಮುಕ್ತವಾಗಿದೆ. ಹಿಂದೆಯೇ ಹಮ್‌, ಹಿಂದೂಸ್ತಾನ್‌ ಹಮಾರ, ಸಾರೇ ಜಹಾಂಸೆ ಅಚ್ಚಾ ಹಿಂದೂಸ್ತಾನ್‌ ಹಮಾರ..

ಇವರು ಯಾರೋ ರಾಜಕೀಯ ಅನುಕೂಲಕ್ಕೋಸ್ಕರ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಈ ಸರ್ಕಾರ ಈ ವಾರ ಅಂದ್ರೆ ಸೋಮವಾರದೊಳಗೆ ಅವನನ್ನು ಬಂಧಿಸಿಲ್ಲ ಎಂದರೆ ಬಳ್ಳಾರಿಯ ಅವರ ಮನೆ ಮುಂದೆ ಹೋಗ್ತಿನಿ. ಅದು ಏನ್‌ ಮಾಡ್ರಾನೋ ನೋಡ್ತಿನಿ.

ಇದಿಷ್ಟು ಶಾಸಕ ಜಮೀರ್‌ ಅಹ್ಮದ್‌ ಆಡಿರುವ ಮಾತುಗಳು. ಒಟ್ಟಿನಲ್ಲಿ ಪೌರತ್ವ ಕಾಯ್ದೆ ಹಬ್ಬಿಸಿರುವ ಕಿಚ್ಚು ಮತ್ತಷ್ಟು ವ್ಯಾಪಿಸುವ ಲಕ್ಷಣಗಳು ಸ್ಪಷ್ಟವಾಗಿ ಕಾಣುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...