Homeಅಂತರಾಷ್ಟ್ರೀಯಜೇಮ್ಸ್ ಬಾಂಡ್ ಖ್ಯಾತಿಯ ನಟ ಸರ್ ಸೀನ್ ಕಾನೆರಿ(90) ನಿಧನ

ಜೇಮ್ಸ್ ಬಾಂಡ್ ಖ್ಯಾತಿಯ ನಟ ಸರ್ ಸೀನ್ ಕಾನೆರಿ(90) ನಿಧನ

 1988 ರಲ್ಲಿ ಸೀನ್ ಕಾನೆರಿ ಅವರ ದಿ ಅನ್​ಟಚಬಲ್ ಸಿನಿಮಾದ ಐರಿಶ್ ಪೋಲೀಸ್ ಪೋಷಕ ಪಾತ್ರಕ್ಕಾಗಿ ಆಸ್ಕರ್ ಒಲಿದುಬಂದಿತ್ತು.

- Advertisement -
- Advertisement -

ಜೆಮ್ಸ್ ಬಾಂಡ್ ಸರಣಿಯ ಏಳು ಚಿತ್ರಗಳಲ್ಲಿ ಗೂಢಾಚಾರಿ ಜೇಮ್ಸ್ ಬಾಂಡ್ ಪಾತ್ರಕ್ಕೆ ಜೀವ ತುಂಬಿದ್ದ ಹಾಲಿವುಡ್‌ ನಟ ಸೀನ್ ಕಾನೆರಿ ಕೊನೆಯುಸಿರೆಳೆದಿದ್ದಾರೆ. ಜೇಮ್ಸ್ ಬಾಂಡ್ ಹೆಸರಿನಿಂದ ಇಡೀ ಜಗತ್ತಿನಲ್ಲೇ ಹೆಸರುವಾಸಿಯಾಗಿದ್ದ ನಟ ತಮ್ಮ 90ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಸ್ಕಾಟ್​ಲ್ಯಾಂಡ್ ಮೂಲದವರಾದ ಸಿಯಾನ್ ಕಾನೆರಿ ತಮ್ಮ 90ನೇ ವರ್ಷದ ಹುಟ್ಟುಹಬ್ಬವನ್ನ ಆಗಸ್ಟ್ ತಿಂಗಳಿನಲ್ಲಿ ಆಚರಿಸಿಕೊಂಡಿದ್ದರು. 1962ರಿಂದ 1983ರ ವರೆಗೆ ಏಳು ಬಾಂಡ್ ಚಲನಚಿತ್ರಗಳಲ್ಲಿ ಕಾನೆರಿ ನಟಿಸಿದ್ದರು.

James-Bond-Umfrage: Sean Connery bleibt der liebste 007-Darsteller der  Briten - DER SPIEGEL

1988 ರಲ್ಲಿ ಸೀನ್ ಕಾನೆರಿ  ಅವರ ದಿ ಅನ್​ಟಚಬಲ್ ಸಿನಿಮಾದ ಐರಿಶ್ ಪೋಲೀಸ್ ಪೋಷಕ ಪಾತ್ರಕ್ಕಾಗಿ ಆಸ್ಕರ್ ಒಲಿದುಬಂದಿತ್ತು. ಅಲ್ಲದೇ ಎರಡು ಬಾಫ್ತಾ ಮತ್ತು ಮೂರು ಬಾರಿ ಗೋಲ್ಡನ್ ಗ್ಲೋಬ್ ಪ್ರಶಸ್ತಿ ವಿಜೇತರಾಗಿದ್ದರು.  ಇದಲ್ಲದೇ ಅನೇಕ ಪ್ರಶಸ್ತಿಗಳನ್ನು ಕಾನೆರಿ ತಮ್ಮದಾಗಿಸಿಕೊಂಡಿದ್ದಾರೆ.

ಕಾನೆರಿ “ದಿ ಹಂಟ್ ಫಾರ್ ರೆಡ್ ಅಕ್ಟೋಬರ್”, “ಇಂಡಿಯಾನಾ ಜೋನ್ಸ್ ಮತ್ತು ದಿ ಲಾಸ್ಟ್ ಕ್ರುಸೇಡ್” ಮತ್ತು “ದಿ ರಾಕ್ 2, ಮರ್ನಿ, ಮರ್ಡರ್ ಆನ್ ದಿ ಓರಿಯೆಂಟ್ ಎಕ್ಸ್ ಪ್ರೆಸ್, ಡ್ರ್ಯಾಗನ್ ಹಾರ್ಟ್, ಫೈಂಡಿಂಗ್ ಫಾರೆಸ್ಟರ್ ಸೇರಿ ಅನೇಕ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರೂ ಕೂಡ ಜನ ಮಾತ್ರ ಅವರನ್ನು ಜೇಮ್ಸ್ ಬಾಂಡ್ ಎಂದೇ ನೆನಪಿಸಿಕೊಳ್ಳುತ್ತಾರೆ.


ಇದನ್ನೂ ಓದಿ: ರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...