Homeಮುಖಪುಟಜಾಮಿಯಾ ಹಿಂಸಾಚಾರ: 10ಜನರ ಬಂಧನ, ಯಾವುದೇ ವಿದ್ಯಾರ್ಥಿಗಳಿಲ್ಲ ಎಂದು ಪೊಲೀಸರ ಸ್ಪಷ್ಟನೆ

ಜಾಮಿಯಾ ಹಿಂಸಾಚಾರ: 10ಜನರ ಬಂಧನ, ಯಾವುದೇ ವಿದ್ಯಾರ್ಥಿಗಳಿಲ್ಲ ಎಂದು ಪೊಲೀಸರ ಸ್ಪಷ್ಟನೆ

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 10 ಜನರನ್ನು  ಬಂಧಿಸಿದ್ದು, ಅವರಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

“ಜಾಮಿಯಾ ಮತ್ತು ನ್ಯೂ ಫ್ರೆಂಡ್ಸ್ ಕಾಲೋನಿಯ ಹತ್ತು ಸ್ಥಳೀಯ ನಿವಾಸಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ಮೂವರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಗಲಭೆ ಮತ್ತು ಜನಸಮೂಹ ಹಿಂಸಾಚಾರಕ್ಕಾಗಿ ಪ್ರಚೋದಿಸಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ”ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ) ಚಿನ್ಮೊಯ್ ಬಿಸ್ವಾಲ್ ಹೇಳಿದ್ದಾರೆ.

“ಅವರನ್ನು ಸಿಸಿಟಿವಿ ದೃಶ್ಯಾವಳಿಗಳಿಂದ ಮತ್ತು ಹಿಂಸಾಚಾರದ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಂದ ಗುರುತಿಸಲಾಗಿದೆ” ಎಂದು ಬಿಸ್ವಾಲ್ ಹೇಳಿದರು.

ಭಾನುವಾರ ದಕ್ಷಿಣ ದೆಹಲಿಯಲ್ಲಿ ನಾಲ್ಕು ಸಾರ್ವಜನಿಕ ಬಸ್ಸುಗಳಿಗೆ ಬೆಂಕಿ ಹಚ್ಚಿದ ನಂತರ ಪೌರತ್ವ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗೆ ತಿರುಗಿದವು.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆದ ಘರ್ಷಣೆಯಲ್ಲಿ ಹಲವಾರು ಜನರು ಗಾಯಗೊಂಡರು, ಅದರ ನಂತರ ಪೊಲೀಸರು ಕ್ಯಾಂಪಸ್‌ಗೆ ಪ್ರವೇಶಿಸಿ ಹಲವಾರು ವಿದ್ಯಾರ್ಥಿಗಳ ಮೇಲೆ ಕ್ರೂರ ಲಾಠಿ ಚಾರ್ಜ್ ಮಾಡಿದರು. ಇದು ದೇಶಾದ್ಯಂತ ವಿದ್ಯಾರ್ಥಿ ಹೋರಾಟಗಳಿಗೆ ಕಾರಣವಾಯಿತು.

ಹಿಂಸಾಚಾರದ ಹಿಂದೆ ತನ್ನ ವಿದ್ಯಾರ್ಥಿಗಳು ಇಲ್ಲ, ಮತ್ತು ಕ್ಯಾಂಪಸ್‌ನ ಹೊರಗಿನ ಜನರು ಪೊಲೀಸರೊಂದಿಗೆ ಘರ್ಷಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ವಿಶ್ವವಿದ್ಯಾಲಯ ಹೇಳಿದೆ. ಕುಲಪತಿಗಳು ವಿದ್ಯಾರ್ಥಿಗಳ ಪರ ನಿಂತಿದ್ದು ತನಿಖೆಗೆ ಆಗ್ರಹಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...