HomeಮುಖಪುಟJammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ...

Jammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ ಕಾಂಗ್ರೆಸ್; ಪಾರಮ್ಯ ಮೆರೆದ ಎನ್‌ಸಿ!

- Advertisement -
- Advertisement -

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಜಮ್ಮುಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ), ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಗೆದ್ದಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಸೋತರೂ ಗೆದ್ದ BJP Jammu and Kashmir Assembly Elections 2024

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಎನ್‌ಸಿ ತನ್ನ ಪ್ರಾಬಲ್ಯ ಮರೆದಿದ್ದು, ಬಿಜೆಪಿಗೆ ಸೆಡ್ಡು ಹೊಡೆದಿದೆ. ಎನ್‌ಸಿ ನೇತೃತ್ವದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಜೊತೆಗಿನ ಮೈತ್ರಿ ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡಿದೆ. ಎನ್‌ಸಿ ಸ್ಪರ್ಧಿಸಿದ್ದ 56 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿದ್ದು, ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂಓದಿ: ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಅದಾಗ್ಯೂ, ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. ಮೈತ್ರಿಯ ಮತ್ತೊಂದು ಪಕ್ಷವಾದ ಸಿಪಿಐ(ಎಂ) ತನಗೆ ನೀಡಿದ ಒಂದು ಕ್ಷೇತ್ರವನ್ನು ಅನಾಯಸವಾಗಿ ಗೆದ್ದುಕೊಂಡಿದೆ.

ಈ ನಡುವೆ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾಗಿರುವ ಎಎಪಿ ಜಮ್ಮು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಎಪಿ 1 ಸ್ಥಾನವನ್ನು ವಶಪಡಿಸಿಕೊಂಡಿದೆ. ಈ ಮೂಲಕ ಪಕ್ಷವೂ 5ನೇ ರಾಜ್ಯದಲ್ಲಿ ತನ್ನ ಖಾತೆ ತೆರೆದಿದೆ.ಸೋತರೂ ಗೆದ್ದ BJP

ಅದಾಗ್ಯೂ, ರಾಜ್ಯದ ಈ ಹಿಂದಿನ ಆಡಳಿತ ಪಕ್ಷವಾಗಿದ್ದ ಪಿಡಿಪಿ ತೀವ್ರ ಮುಖಭಂಗಕ್ಕೊಳಗಾಗಿದ್ದು 80 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 3 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ. ಇದರ ಜೊತೆಗೆ ಜೆಕೆಪಿಎಫ್‌ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 1 ಕ್ಷೇತ್ರದಲ್ಲಿ ಗೆಲುವು ಕಂಡಿದ್ದು, ರಾಜ್ಯದ 7 ಕ್ಷೇತ್ರಗಳಲ್ಲಿ ಪಕ್ಷೇತರರು ವಿಜಯಿಯಾಗಿದ್ದಾರೆ.

ಸೋತರೂ ಬಲ ಹೆಚ್ಚಿಸಿಕೊಂಡ ಬಿಜೆಪಿ, ಗೆದ್ದರೂ ಸೋತ ಕಾಂಗ್ರೆಸ್; ಪ್ರಾಬಲ್ಯ ಮೆರೆದ ಎನ್‌ಸಿ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಆದರೂ ತನ್ನ ಬಲವನ್ನು ಹೆಚ್ಚಿಕೊಂಡಿರುವ ಬಿಜೆಪಿ ರಾಜ್ಯದ 2ನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಮ್ಮುಕಾಶ್ಮೀರ ಪ್ರಾಂತ್ಯದ 90 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 4 ಸ್ಥಾನಗಳನ್ನು ಹೆಚ್ಚಿಸಿಕೊಂಡಿವೆ.

ಇದನ್ನೂಓದಿ: ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. 2014ರಲ್ಲಿ ಈ ಪ್ರಾಂತ್ಯದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ರಾಜ್ಯದ ಅತಿ ದೊಡ್ಡ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್‌(ಎನ್‌ಸಿ) ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 90 ವಿಧಾನಸಭಾ ಸ್ಥಾನಗಳಿರುವ ಜಮ್ಮು ಕಾಶ್ಮೀರದಲ್ಲಿ 42ರನ್ನು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಸಿ 15 ಸ್ಥಾನಗಳನ್ನಷ್ಟೆ ಗೆದ್ದುಕೊಂಡಿತ್ತು. ಈ ಬಾರಿ ಅದು ಹೆಚ್ಚುವರಿಯಾಗಿ 27 ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದಿದೆ.

ರಾಜ್ಯದ ಈ ಹಿಂದಿನ ಆಡಳಿತರೂಢ ಪಕ್ಷವಾಗಿದ್ದ ಪಿಡಿಪಿ 28 ಕ್ಷೇತ್ರಗಳಿಂದ 3ಕ್ಕೆ ಇಳಿದಿದೆ. ಈ ಹಿಂದೆ 2 ಕ್ಷೇತ್ರಗಳನ್ನು ಹೊಂದಿದ್ದ ಜೆಪಿಸಿ ಸೊನ್ನೆಗೆ ಇಳಿದಿದ್ದು, ಜೆಕೆಪಿಎಫ್‌ 1 ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಹಾಗೆಯೆ ಉಳಿಸಿಕೊಂಡಿದೆ. ಆದರೆ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಿಂದ 7ಕ್ಕೆ ಏರಿಕೆಯಾಗಿದ್ದಾರೆ.ಸೋತರೂ ಗೆದ್ದ BJP

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...