Homeಮುಖಪುಟಜಮ್ಮು-ಕಾಶ್ಮೀರ: ಠಾಣೆಗೆ ನುಗ್ಗಿ ಪೊಲೀಸರಿಗೆ ಥಳಿಸಿದ ಸೇನಾಧಿಕಾರಿಗಳು

ಜಮ್ಮು-ಕಾಶ್ಮೀರ: ಠಾಣೆಗೆ ನುಗ್ಗಿ ಪೊಲೀಸರಿಗೆ ಥಳಿಸಿದ ಸೇನಾಧಿಕಾರಿಗಳು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಪೊಲೀಸರು ಮತ್ತು ಸೇನಾ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದಿದ್ದು,  ಸೇನಾ ಸಿಬ್ಬಂದಿ ಠಾಣೆಗೆ ನುಗ್ಗಿ ಪೊಲೀಸರಿಗೆ ಥಳಿಸಿದ್ದರಿಂದ ನಾಲ್ವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಬೆನ್ನಲ್ಲಿ ಪ್ರತಿಕ್ರಿಯಿಸಿದ ರಕ್ಷಣಾ ಇಲಾಖೆಯ ವಕ್ತಾರರು, ಪೊಲೀಸರು ಮತ್ತು ಸೇನಾ ಸಿಬ್ಬಂದಿ ನಡುವಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ.

ಕುಪ್ವಾರ ಪೊಲೀಸ್ ಠಾಣೆಯಲ್ಲಿ ನಿಯೋಜಿತ ವಿಶೇಷ ಪೊಲೀಸ್ ಅಧಿಕಾರಿಗಳಾದ ರಯೀಸ್ ಖಾನ್, ಇಮ್ತಿಯಾಜ್ ಮಲಿಕ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸಲೀಮ್ ಮುಷ್ತಾಕ್, ಜಹೂರ್ ಅಹ್ಮದ್ ಅವರ ಮೇಲೆ ಸೇನಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ಅವರನ್ನು ಮಂಗಳವಾರ ತಡರಾತ್ರಿ ಸೌರಾದ ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾಧಿಕಾರಿಗಳ ತಂಡವು ಪೊಲೀಸ್ ಠಾಣೆಗೆ ನುಗ್ಗಿ ಥಳಿಸಿದ ನಂತರ ಪೊಲೀಸರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಘರ್ಷಣೆಯ ಕಾರಣದ ಬಗ್ಗೆ ಹಿರಿಯ ಪೊಲೀಸರು ಮತ್ತು ಸೇನಾಧಿಕಾರಿಗಳು ಮೌನ ವಹಿಸಿದ್ದರೂ, ಪ್ರಕರಣವೊಂದರ ತನಿಖೆಗೆ ಸಂಬಂಧಿಸಿ ಕುಪ್ವಾರದ ಬಟ್‌ಪೋರಾದಲ್ಲಿರುವ ಸ್ಥಳೀಯ ಪ್ರಾದೇಶಿಕ ಸೇನಾಧಿಕಾರಿಯ ನಿವಾಸದ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಸೇನಾ ಸಿಬ್ಬಂದಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶ್ರೀನಗರ ಮೂಲದ ರಕ್ಷಣಾ ವಕ್ತಾರರು, ಪೊಲೀಸ್ ಮತ್ತು ಸೇನಾ ಸಿಬ್ಬಂದಿಯ ನಡುವಿನ ಘರ್ಷಣೆಯ ವರದಿಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಥಳಿಸಿದ ವರದಿಗಳು ಸುಳ್ಳು ಎಂದು ಹೇಳಿದ್ದಾರೆ. ಕಾರ್ಯಾಚರಣೆಯ ವಿಷಯದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಪ್ರಾದೇಶಿಕ ಸೇನಾ ಘಟಕದ ನಡುವಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಲ್ಲೆಗೆ ಸಂಬಂಧಿಸಿದಂತೆ ಸೇನಾಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ), 186 (ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 332 ಮತ್ತು 365 (ಅಪಹರಣ)ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತಿಪಕ್ಷಗಳಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...