Homeಮುಖಪುಟಪಹಲ್ಗಾಮ್ ದಾಳಿ ಖಂಡಿಸಿ ಜಮ್ಮು ಕಾಶ್ಮೀರ ಸಂಪೂರ್ಣ ಬಂದ್: ವಿವಿಧ ಪಕ್ಷ, ಸಂಘಟನೆಗಳಿಂದ ಪ್ರತಿಭಟನೆ

ಪಹಲ್ಗಾಮ್ ದಾಳಿ ಖಂಡಿಸಿ ಜಮ್ಮು ಕಾಶ್ಮೀರ ಸಂಪೂರ್ಣ ಬಂದ್: ವಿವಿಧ ಪಕ್ಷ, ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 28 ಜನರನ್ನು ಹತ್ಯೆಗೈದಿರುವುದನ್ನು ಖಂಡಿಸಿ ಇಂದು (ಬುಧವಾರ) ಜಮ್ಮು ಕಾಶ್ಮೀರದಾದ್ಯಂತ ಬಂದ್ ಆಚರಿಸಲಾಗಿದೆ.

ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳು ಇಂದು ಬೆಳಿಗ್ಗೆಯಿಂದಲೇ ಸಂಪೂರ್ಣ ಸ್ಥಬ್ದವಾಗಿದ್ದು, ಶಾಲಾ, ಕಾಲೇಜುಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಇಂದಿನ ಬಂದ್‌ಗೆ ಜಮ್ಮು ಕಾಶ್ಮೀರದ ಆಡಳಿತರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ), ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಪಿಡಿಪಿ, ಹುರಿಯತ್ ಕಾನ್ಫರೆನ್ಸ್, ವಿದ್ಯಾರ್ಥಿ ಸಂಘಟನೆ ಜೆಕೆಎಸ್‌ಎ ಸಂಪೂರ್ಣ ಬೆಂಬಲ ಸೂಚಿಸಿವೆ.

ಪಿಡಿಪಿ ಪಕ್ಷ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೌನ ಪ್ರತಿಭಟನಾ ಜಾಥಾ ನಡೆಸಿದೆ. ಶ್ರೀನಗರದ ಶೇರ್-ಎ-ಕಾಶ್ಮೀರ್ ಪಾರ್ಕ್ ಬಳಿಯ ಪಿಡಿಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಜಮಾಯಿಸಿ ಜನರು, “ಇದು ನಮ್ಮೆಲ್ಲರ ಮೇಲಿನ ದಾಳಿ”, “ಅಮಾಯಕರನ್ನು ಕೊಲ್ಲುವುದು ಭಯೋತ್ಪಾದಕ ಕೃತ್ಯ” ಮತ್ತು “ಅಮಾಯಕ ಹತ್ಯೆಗಳನ್ನು ನಿಲ್ಲಿಸಿ” ಎಂಬ ಫಲಕಗಳನ್ನು ಹಿಡಿದುಕೊಂಡು ನಗರದ ಲಾಲ್ ಚೌಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಘಟನೆ ಸಂಬಂಧ ದೇಶದ ಜನರ ಕ್ಷಮೆ ಯಾಚಿಸಿದ ಮೆಹಬೂಬಾ ಮುಫ್ತಿ, “ಇದರಿಂದ ಕಾಶ್ಮೀರದ ಜನತೆ ನಾಚಿಕೆಪಡುವಂತಾಗಿದೆ. ತಮ್ಮವರನ್ನು ಕಳೆದುಕೊಂಡ ಜನರ ಜೊತೆ ದುಖಃದಲ್ಲಿ ಕಾಶ್ಮೀರದ ಜನತೆಯೂ ಇದ್ದಾರೆ” ಎಂದು ಹೇಳಿದ್ದಾರೆ.

ಜನರು ಸ್ವಯಂಪ್ರೇರಿತರಾಗಿ ಇಂದು ಬಂದ್ ಆಚರಿಸಿದ್ದಾರೆ. ಜಮ್ಮು ನಗರದಲ್ಲಿ ಅಗತ್ಯ ಸಾಮಗ್ರಿಗಳ ಮಾರಾಟ ಹೊರತು, ಇತರ ಎಲ್ಲಾ ವಹಿವಾಟುಗಳು ಬಂದ್ ಆಗಿವೆ. ಸರ್ಕಾರ ಶಿಕ್ಷಣ ಸಂಸ್ಥೆಗಳು ತೆರೆದಿದ್ದು, ಖಾಸಗಿ ಶಾಲೆಗಳು ಮುಚ್ಚಿವೆ. ಜಮ್ಮು ಮತ್ತು ಕಾಶ್ಮೀರದ ಖಾಸಗಿ ಶಾಲೆಗಳ ಸಂಘ (ಪಿಎಸ್‌ಎಜೆಕೆ) ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ವರದಿಗಳು ಹೇಳಿದೆ.

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ವಿವಿಧ ಭಾಗಗಳಲ್ಲಿ ಜನರು ನಿನ್ನೆ (ಮಂಗಳವಾರ) ರಾತ್ರಿ ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ.

ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...