HomeಮುಖಪುಟJ&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

J&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ, ಕೆಲವೊಂದು ಗಮನಾರ್ಹ ವಿಷಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಅವುಗಳಲ್ಲಿ ಚೌಧರಿ ಲಾಲ್ ಸಿಂಗ್ ಸೋಲು ಕೂಡ ಒಂದು.

ಕಥುವಾ ಬಾಲಕಿಯ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದ ಚೌಧರಿ ಲಾಲ್ ಸಿಂಗ್‌ಗೆ ಈ ಬಾರಿಯ ಚುನಾವಣೆಯಲ್ಲಿ ಬಸೋಹ್ಲಿ ಕ್ಷೇತ್ರದ ಟಿಕೆಟ್‌ ಅನ್ನು ಕಾಂಗ್ರೆಸ್ ನೀಡಿತ್ತು.

ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, ಚೌಧರಿ ಲಾಲ್ ಸಿಂಗ್ ಬಸೋಹ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿ ದರ್ಶನ್ ಕುಮಾರ್ ವಿರುದ್ಧ 16,034 ಮತಗಳಿಂದ ಸೋತಿದ್ದಾರೆ. ಕುಮಾರ್ ಅವರು 31,874 ಮತಗಳನ್ನು ಗಳಿಸಿದರೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಅವರು ಒಟ್ಟು 15,840 ಮತಗಳನ್ನು ಗಳಿಸಿದ್ದಾರೆ.

ಲಾಲ್ ಸಿಂಗ್‌ಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟಾಗ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಅವರ ಸೋಲಿನ ಮೂಲಕ ಕಾಂಗ್ರೆಸ್‌ಗೆ ರಾಜಕೀಯವಾಗಿ ಮತ್ತು ನೈತಿಕವಾಗಿ ಮುಖಭಂಗವಾಗಿದೆ.

ಚೌಧರಿ ಲಾಲ್ ಸಿಂಗ್ ಯಾರು?

2018ರಲ್ಲಿ ಜಮ್ಮು ಕಾಶ್ಮೀರದ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಲಾಲ್‌ ಸಿಂಗ್, ಎಂಟು ವರ್ಷದ ಅಲೆಮಾರಿ ಬುಡಕಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬೆಂಬಲಿಸಿ ಸ್ಥಳೀಯ ಹಿಂದುತ್ವ ನಾಯಕರು ಆಯೋಜಿಸಿದ್ದ’ಹಿಂದೂ ಏಕತಾ’ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಇದು ಲಾಲ್ ಸಿಂಗ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಅತ್ಯಾಚಾರ ಆರೋಪಿಗಳಾದ ಪರ್ವೇಶ್ ಕುಮಾರ್, ಸಂಜಿ ರಾಮ್ ಮತ್ತು ದೀಪಕ್ ಖಜುರಿಯಾ ಪರ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಲಾಲ್ ಸಿಂಗ್, ಪೊಲೀಸ್ ತನಿಖೆಯನ್ನು ಪ್ರಶ್ನಿಸಿದ್ದರು ಮತ್ತು ಅತ್ಯಾಚಾರ ಆರೋಪ ‘ಹಿಂದೂಗಳ ವಿರುದ್ಧದ ಪಿತೂರಿಯ ಪ್ರಯತ್ನ’ ಎಂದಿದ್ದರು. ಲಾಲ್ ಸಿಂಗ್‌ ಅವರ ಈ ಹೇಳಿಕೆ, ಆಗಿನ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ದ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಲಾಲ್ ಸಿಂಗ್ ‘ಡೋಗ್ರಾ ಸ್ವಾಭಿಮಾನ್ ಸಂಘಟನೆ’ ಎಂಬ ಪಕ್ಷ ಕಟ್ಟಿದ್ದರು. ನಂತರ, ಲೋಕಸಭೆ ಚುನಾವಣೆಯ ಸಂದರ್ಭ ಮಾರ್ಚ್ 20, 2024ರಂದು ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗಿದ್ದರು ಮತ್ತು ತನ್ನ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಬಳಿಕ, ಲೋಕಸಭಾ ಚುನಾವಣೆಗೆ ಲಾಲ್ ಸಿಂಗ್‌ಗೆ ಉದಂಪುರ-ದೋಡಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಅವರು 1.24 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ಲಾಲ್ ಸಿಂಗ್ ಅವರು ಈ ಹಿಂದೆ ಮೂರು ಬಾರಿ ಗೆದ್ದಿರುವ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದರು. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ, ಉದ್ಯಮಿ ದರ್ಶನ್ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಲಾಲ್ ಸಿಂಗ್

2014ಕ್ಕಿಂತ ಮೊದಲು ಲಾಲ್‌ ಸಿಂಗ್‌ ಕಾಂಗ್ರೆಸ್‌ನಲ್ಲೇ ಇದ್ದರು. ಎರಡು ಬಾರಿ ಪಕ್ಷದ ಟಿಕೆಟ್‌ನಲ್ಲಿ ಉಂದಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಸಂಸದರಾಗಿದ್ದರು. 2014ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಬಿಜೆಪಿ ಸೇರ್ಪಡೆಗೊಂಡು ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

ಜನವರಿ 2023ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು ಪ್ರವೇಶಿಸಿದಾಗ, ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಥುವಾ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಲಾಲ್ ಸಿಂಗ್, ಅವರ ಪತ್ನಿ ಮತ್ತು ಮಾಜಿ ಶಾಸಕ ಕಾಂತಾ ಅಂಡೋತ್ರಾ ನಡೆಸುತ್ತಿದ್ದ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು.

ಈ ವರ್ಷದ ಮಾರ್ಚ್‌ನಲ್ಲಿ ಲಾಲ್‌ ಸಿಂಗ್‌ಗೆ ಮರು ಸೇರ್ಪಡೆಗೊಂಡಾಗ, ಕಾಂಗ್ರೆಸ್ ವಿರುದ್ದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, “ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಾಲ್‌ ಸಿಂಗ್‌ ಅನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾಚಿಕೆಯಾಗಬೇಕು. 8 ವರ್ಷದ ಬಾಲಕಿಯ ಅತ್ಯಾಚಾರಿಗಳನ್ನು ಬೆಂಬಲಿಸಿದ ಲಾಲ್ ಸಿಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಮೂಲ ತತ್ವಗಳು ಮತ್ತು ಸಿದ್ಧಾಂತಗಳಿಗೆ ದ್ರೋಹ ಬಗೆದಿದೆ” ಎಂದಿದ್ದರು.

ಲಾಲ್‌ ಸಿಂಗ್‌ಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದು ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಂದು ಹೇಳಲಾಗಿತ್ತು. ಆದರೆ, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ. ಸಚಿವರಾಗಿದ್ದಾಗಲೇ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆದ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ, ಹಿಂದುತ್ವದ ಪ್ರತಿಪಾದಕನಿಗೆ ಟಿಕೆಟ್ ಕೊಟ್ಟಿದ್ದ ಕಾಂಗ್ರೆಸ್‌ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು : ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...