Homeಮುಖಪುಟಜಮ್ಮು ಕಾಶ್ಮೀರ: ಉಗ್ರರ ದಾಳಿಗೆ ಐವರು ಸೇನಾ ಸಿಬ್ಬಂದಿ ಸಾವು

ಜಮ್ಮು ಕಾಶ್ಮೀರ: ಉಗ್ರರ ದಾಳಿಗೆ ಐವರು ಸೇನಾ ಸಿಬ್ಬಂದಿ ಸಾವು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಯೋಧರ ವಾಹನದ ಮೇಲೆ ಹೊಂಚುದಾಳಿ ನಡೆಸಿದ್ದರಿಂದ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ರಜೌರಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿ ನಡೆದಿದೆ ಎಂದು ಸೇನೆಯ ಉತ್ತರ ಕಮಾಂಡ್ ಪ್ರಧಾನ ಕಚೇರಿ ತಿಳಿಸಿದೆ.

“… ರಾಜೌರಿ ಸೆಕ್ಟರ್‌ನಲ್ಲಿ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ ಚಲಿಸುತ್ತಿದ್ದ ಸೇನಾ ವಾಹನದ ಮೇಲೆ ಅಪರಿಚಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಭಾರೀ ಮಳೆ ಮತ್ತು ಪ್ರದೇಶದಲ್ಲಿನ ಮಸುಕಿನ ವಾತಾವರಣದ ಲಾಭವನ್ನು ಭಯೋತ್ಪಾದಕರು ಪಡೆದಿದ್ದಾರೆ” ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. “ಭಯೋತ್ಪಾದಕರು ಗ್ರೆನೇಡ್‌ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ತಲುಲಿದೆ” ಎಂದು ಮಾಹಿತಿ ನೀಡಿದ್ದಾರೆ.

ಮೃತರು ರಾಷ್ಟ್ರೀಯ ರೈಫಲ್ಸ್ ಘಟಕಕ್ಕೆ ಸೇರಿದವರಾಗಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.

ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರತಿಕ್ರಿಯಿಸಿದ್ದು, ಸೇನಾ ಸಿಬ್ಬಂದಿಯ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆಯನ್ನು ಎಂದಿಗೂ ಮರೆಯಲಾಗದು. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ” ಎಂದು ಅವರು ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಪುಲ್ವಾಮಾ ದಾಳಿಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ಆಘಾತಕಾರಿ ಬೆಳವಣಿಗೆಗಳು ಆಗಿವೆ.

“ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು” ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಸ್ಫೋಟಕ ಹೇಳಿಕೆ ನೀಡಿದ್ದರು.

ದಿ ವೈರ್ ಪತ್ರಕರ್ತ ಕರಣ್ ಥಾಪರ್‌ರವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, “ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದರು.

ಇದನ್ನೂ ಓದಿರಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು.

“ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು” ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದರು.

“ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ” ಎಂದು ಪ್ರಶ್ನಿಸಿದ್ದರು. ಸತ್ಯಪಾಲ್‌ ಅವರ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...