ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಗ್ರಾಮದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಐವರು ಭಯೋತ್ಪಾದಕರು ಹತರಾಗಿ, ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಭಯೋತ್ಪಾದಕರ ಇರುವಿಕೆಯ ಸುಳಿವು ಪಡೆದು ಕದ್ದರ್ ಗ್ರಾಮದಲ್ಲಿ ಪೊಲೀಸರು, ಸೇನೆಯ ರಾಷ್ಟ್ರೀಯ ರೈಫಲ್ಸ್ ಮತ್ತು CRPF ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಂಕಿತ ಅಡಗುತಾಣವನ್ನು ಭದ್ರತಾ ಪಡೆಗಳು ಮುಚ್ಚುತ್ತಿದ್ದಂತೆ, ಉಗ್ರರು ಗುಂಡಿನ ದಾಳಿ ನಡೆಸಿದರು. ಇದು ಗುಂಡಿನ ಚಕಮಕಿಗೆ ಕಾರಣವಾಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಎಲ್ಲ ಐವರು ಉಗ್ರರನ್ನು ಸದೆಬಡಿಯಲಾಗಿದೆ. ಹತ್ಯೆಯಾದ ಭಯೋತ್ಪಾದಕರ ಗುರುತು ಮತ್ತು ಸಂಬಂಧವನ್ನು ಪರಿಶೀಲಿಸಲಾಗುತ್ತಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಕಡ್ಡರ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಹೆಚ್ಚಿನ ವಿವರಗಳನ್ನು ಪಡೆಯಲಾಗುತ್ತಿದೆ ಎಂದು ಈ ಹಿಂದೆ, ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಪೋಸ್ಟ್ ಮಾಡಿದ್ದರು.
ಭಯೋತ್ಪಾದಕರ ಉಪಸ್ಥಿತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜೆ-ಕೆ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಕುಲ್ಗಾಮ್‌ನ ಕಡರ್‌ನಲ್ಲಿ ಪ್ರಾರಂಭಿಸಿದರು. ಭದ್ರತಾ ಪಡೆಗಳಿಂದ ಅನುಮಾನಾಸ್ಪದ ಚಟುವಟಿಕೆಯನ್ನು ಪರಿಶೀಲಿಸಲಾಯಿತು ಮತ್ತು ಭಯೋತ್ಪಾದಕರು ವಿವೇಚನೆಯಿಲ್ಲದೆ ಭಾರೀ ಪ್ರಮಾಣದ ಗುಂಡಿನ ದಾಳಿಗೆ ತೊಡಗಿದಾಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.
ಇದನ್ನೂ ಓದಿ…“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ


