Homeಮುಖಪುಟಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಐವರು ಭಯೋತ್ಪಾದಕರ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಐವರು ಭಯೋತ್ಪಾದಕರ ಹತ್ಯೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸ್ವಯಂ ಘೋಷಿತ ಕಮಾಂಡರ್ ಸೇರಿದಂತೆ ಲಷ್ಕರ್-ಎ-ತೊಯ್ಬಾ (LeT) ಮತ್ತು ಜೈಶ್-ಎ-ಮೊಹಮ್ಮದ್ (JeM) ಸಂಘಟನೆಗಳಿಗೆ ಸೇರಿದ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಕಾಶ್ಮೀರ ಕಣಿವೆಯ ಪುಲ್ವಾಮಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಗುಂಡಿನ ಚಕಮಕಿ ನಡೆದಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದರೆ, ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಕಾಶ್ಮೀರ ಕಣಿವೆಯ ಪುಲ್ವಾಮಾ ಗುಂಡಿನ ಚಕಮಕಿಯಲ್ಲಿ ಹತರಾದ ನಾಲ್ವರು ಭಯೋತ್ಪಾದಕರು ಜೆಎಂಗೆ ಸೇರಿದವರು, ಬುದ್ಗಾಮ್ ಜಿಲ್ಲೆಯ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಸಂಘಟನೆಗೆ ಸೇರಿದ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜೆಇಎಂ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ ಕಳೆದ 12 ಗಂಟೆಗಳಲ್ಲಿ ಪಾಕಿಸ್ತಾನದ ಐವರು ಭಯೋತ್ಪಾದಕರನ್ನು ಹತ್ಯೆ ಮಾಡಿರುವುದು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

ಚುನಾವಣೆ ಸಮಯದಲ್ಲಿಯೇ ಈ ರೀತಿಯ ಎನ್‌ಕೌಂಟರ್‌ಗಳಾಗುವುದು, ಎನ್‌ಕೌಂಟರ್‌ ಸುದ್ದಿಗಳು ಹೆಚ್ಚಾಗುವುದು ಹೇಗೆ ಎಂದು ಸಾಮಾಜಿಕ ಕಾರ್ಯಕರ್ತರು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....