HomeUncategorizedಜಮ್ಮು-ಕಾಶ್ಮೀರ:  ಐವರು ಭಯೋತ್ಪಾದಕರ ಹತ್ಯೆ

ಜಮ್ಮು-ಕಾಶ್ಮೀರ:  ಐವರು ಭಯೋತ್ಪಾದಕರ ಹತ್ಯೆ

- Advertisement -
- Advertisement -

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಗ್ರಾಮದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಐವರು ಭಯೋತ್ಪಾದಕರು ಹತರಾಗಿ, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಭಯೋತ್ಪಾದಕರ ಇರುವಿಕೆಯ ಸುಳಿವು ಪಡೆದು ಕದ್ದರ್ ಗ್ರಾಮದಲ್ಲಿ ಪೊಲೀಸರು, ಸೇನೆಯ ರಾಷ್ಟ್ರೀಯ ರೈಫಲ್ಸ್ ಮತ್ತು CRPF ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಂಕಿತ ಅಡಗುತಾಣವನ್ನು ಭದ್ರತಾ ಪಡೆಗಳು ಮುಚ್ಚುತ್ತಿದ್ದಂತೆ, ಉಗ್ರರು ಗುಂಡಿನ ದಾಳಿ ನಡೆಸಿದರು. ಇದು ಗುಂಡಿನ ಚಕಮಕಿಗೆ ಕಾರಣವಾಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.

ಕಾರ್ಯಾಚರಣೆಯಲ್ಲಿ ಎಲ್ಲ ಐವರು ಉಗ್ರರನ್ನು ಸದೆಬಡಿಯಲಾಗಿದೆ. ಹತ್ಯೆಯಾದ ಭಯೋತ್ಪಾದಕರ ಗುರುತು ಮತ್ತು ಸಂಬಂಧವನ್ನು ಪರಿಶೀಲಿಸಲಾಗುತ್ತಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಕಡ್ಡರ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಹೆಚ್ಚಿನ ವಿವರಗಳನ್ನು  ಪಡೆಯಲಾಗುತ್ತಿದೆ ಎಂದು ಈ ಹಿಂದೆ, ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಪೋಸ್ಟ್ ಮಾಡಿದ್ದರು.

ಭಯೋತ್ಪಾದಕರ ಉಪಸ್ಥಿತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜೆ-ಕೆ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಕುಲ್ಗಾಮ್‌ನ ಕಡರ್‌ನಲ್ಲಿ ಪ್ರಾರಂಭಿಸಿದರು. ಭದ್ರತಾ ಪಡೆಗಳಿಂದ ಅನುಮಾನಾಸ್ಪದ ಚಟುವಟಿಕೆಯನ್ನು ಪರಿಶೀಲಿಸಲಾಯಿತು ಮತ್ತು ಭಯೋತ್ಪಾದಕರು ವಿವೇಚನೆಯಿಲ್ಲದೆ ಭಾರೀ ಪ್ರಮಾಣದ ಗುಂಡಿನ ದಾಳಿಗೆ ತೊಡಗಿದಾಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ…“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...