Homeಮುಖಪುಟಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

- Advertisement -
- Advertisement -

ಶ್ರೀನಗರದ ಹೈದರ್‌ಪೋರಾದ ವಾಣಿಜ್ಯ ಸಂಕೀರ್ಣದಲ್ಲಿ ಇಬ್ಬರು ಉದ್ಯಮಿಗಳನ್ನು ಹತ್ಯೆಗೈದ ವಿವಾದಾತ್ಮಕ ಪೊಲೀಸ್ ಕಾರ್ಯಾಚರಣೆಯ ಕುರಿತು ಜಮ್ಮು ಮತ್ತು ಕಾಶ್ಮೀರ ಆಡಳಿತವು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.

ಮೃತರ ಕುಟುಂಬಗಳು ಸಾವನ್ನಪ್ಪಿದವರು ಅಮಾಯಕ ನಾಗರಿಕರು ಎಂದು ಹೇಳಿದ್ದಾರೆ. ಆದರೆ ಪೊಲೀಸರು ಇಬ್ಬರೂ “ಭಯೋತ್ಪಾದಕ ಸಹಚರರು” ಎಂದು ಆರೋಪಿಸಿದ್ದಾರೆ. ವಿವಾದಾತ್ಮಕ ಪೊಲೀಸ್ ಕಾರ್ಯಾಚರಣೆಯ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ತನಿಖೆ ನಡೆಸಲಿದ್ದಾರೆ.

“ನಾವು ಮೃತರ ಕುಟುಂಬಗಳ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ. ಏನಾದರೂ ತಪ್ಪಾಗಿದ್ದರೆ ಸರಿಪಡಿಸುತ್ತೇವೆ. ಪೊಲೀಸ್ ತನಿಖೆಯಿಂದ ಏನು ತಪ್ಪಾಗಿದೆ ಎಂದು ತಿಳಿಯುತ್ತದೆ. ಹೈದರ್‌ಪೋರಾ ಎನ್‌ಕೌಂಟರ್‌ನಲ್ಲಿ ಏನಾಯಿತು ಎಂಬುದನ್ನು ನಾವು ಕಂಡುಹಿಡಿಯುತ್ತೇವೆ. ನಾವು ಜನರ ಸುರಕ್ಷತೆಗಾಗಿ ಇದ್ದೇವೆ. ತನಿಖೆಯಿಂದ ಹಿಂದೆ ಸರಿಯುವುದಿಲ್ಲ” ಎಂದಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರನ್ನು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರೊಬ್ಬರು ಉಸಿರಾಡಲೂ ಆಗುತ್ತಿಲ್ಲ: ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಕಚೇರಿಯು “ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ” ಎಂದು ಟ್ವೀಟ್ ಮಾಡಿದೆ.

“ಹೈದರ್‌ಪೋರಾ ಎನ್‌ಕೌಂಟರ್‌ ವಿಚಾರದಲ್ಲಿ ADM ಶ್ರೇಣಿಯ ಅಧಿಕಾರಿಯಿಂದ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ವರದಿಯನ್ನು ಸಲ್ಲಿಸಿದ ತಕ್ಷಣ ಸರ್ಕಾರವು ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ಅಮಾಯಕ ನಾಗರಿಕರ ಜೀವಗಳನ್ನು ರಕ್ಷಿಸುವ ಖಚಿತತೆ ನೀಡುತ್ತದೆ. ಯಾವುದೇ ಅನ್ಯಾಯವಾಗಲು ಬಿಡುವುದಿಲ್ಲ” ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಟ್ವೀಟ್ ಮಾಡಿದೆ.

ಸೋಮವಾರ ಹೈದರ್‌ಪೋರಾದಲ್ಲಿ ನಡೆದ ವಿವಾದಾತ್ಮಕ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಉದ್ಯಮಿ ಅಲ್ತಾಫ್ ಭಟ್ ಮತ್ತು ದಂತ ಶಸ್ತ್ರಚಿಕಿತ್ಸಕ ಮುದಾಸಿರ್ ಗುಲ್ ಕೊಲ್ಲಲ್ಪಟ್ಟರು.

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಅಲ್ತಾಫ್ ಭಟ್ ಮತ್ತು ಮತ್ತೊಬ್ಬ ಉದ್ಯಮಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಆದರೆ ನಂತರ ಮಾತು ಬದಲಿಸಿದ ಪೊಲೀಸರು ಅವರಿಬ್ಬರು ಕ್ರಾಸ್ ಫೈರ್‌ನಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದರು. ಅದರ ನಂತರ, ಕಾಂಪ್ಲೆಕ್ಸ್ ಮಾಲೀಕ ಅಲ್ತಾಫ್ ಭಟ್ ತನ್ನ ಬಾಡಿಗೆದಾರರ ಬಗ್ಗೆ ಅಧಿಕಾರಿಗಳಿಗೆ ತಿಳಿಸದ ಕಾರಣ ಅವರನ್ನು “ಭಯೋತ್ಪಾದಕರ ಸಹಚರರು” ಎಂದು ಪರಿಗಣಿಸಲಾಗುವುದು. ಅವರ ಕಾಂಪ್ಲೆಕ್ಸ್‌ನಲ್ಲಿದ್ದ ಬಾಡಿಗೆದಾರರಲ್ಲಿ ಒಬ್ಬ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ.

ಇದು ಮೃತರ ಕುಟುಂಬ ಸದಸ್ಯರು, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ನಾಯಕರು ಶ್ರೀನಗರದ ಎನ್‌ಕೌಂಟರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.


ಇದನ್ನೂ ಓದಿ: ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...