Homeಮುಖಪುಟಜಮ್ಮು ಕಾಶ್ಮೀರ | ನ್ಯಾಷನಲ್ ಕಾನ್ಫರೆನ್ಸ್‌ ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ

ಜಮ್ಮು ಕಾಶ್ಮೀರ | ನ್ಯಾಷನಲ್ ಕಾನ್ಫರೆನ್ಸ್‌ ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ

- Advertisement -
- Advertisement -

ಇತ್ತಿಚೆಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಮೊದಲ ಬಾರಿಗೆ ಖಾತೆ ತೆರೆದಿರುವ ಆಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಶುಕ್ರವಾರ ಹೇಳಿದೆ ಎಂದು ಎಎನ್‌ಐ ವರದಿ ಮಾಡಿದೆ. ಪಕ್ಷದ ಏಕೈಕ ಚುನಾಯಿತ ಶಾಸಕರಾದ ಮೆಹ್ರಾಜ್ ಮಲಿಕ್ ಅವರು ಪಕ್ಷದ ಬೆಂಬಲ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಸಲ್ಲಿಸಿದ್ದಾರೆ. ಜಮ್ಮು ಕಾಶ್ಮೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಮೆಹ್ರಾಜ್ ಮಲಿಕ್ ಅವರು ರಾಜ್ಯದ ದೋಡಾ ಸ್ಥಾನವನ್ನು ಗೆದ್ದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ನ್ಯಾಷನಲ್ ಕಾನ್ಫರೆನ್ಸ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ

ಇದನ್ನೂಓದಿ: ಭಯೋತ್ಪಾದನೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್

ಸ್ಪರ್ಧಿಸಿದ್ದ 90 ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 6 ಸ್ಥಾನಗಳನ್ನು ಪಡೆದುಕೊಂಡಿದೆ. ಜೊತೆಗೆ ಮೈತ್ರಿಯ ಮತ್ತೊಂದು ಮಿತ್ರಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒಂದು ಸ್ಥಾನವನ್ನು ಗೆದ್ದಿದೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಎಎಪಿ ಹೇಳಿದ ಎರಡೇ ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂಓದಿ: ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ; ನಾಸಿಕ್‌ನಲ್ಲಿ ಇಬ್ಬರು ಅಗ್ನಿವೀರ್‌ಗಳ ಸಾವು

“ಕಳೆದ 10 ವರ್ಷಗಳಿಂದ ದೆಹಲಿ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಶೂನ್ಯ ಸ್ಥಾನಗಳನ್ನು ಹೊಂದಿದೆ, ಆದರೂ ಎಎಪಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮೂರು ಸ್ಥಾನಗಳನ್ನು ನೀಡಿತು. ಅದಾಗ್ಯೂ, ಹರಿಯಾಣದಲ್ಲಿ ಮಿತ್ರಪಕ್ಷಗಳನ್ನು ಒಟ್ಟಿಗೆ ಕರೆದೊಯ್ಯುವ ಅಗತ್ಯದ ಬಗ್ಗೆ ಕಾಂಗ್ರೆಸ್ ಯೋಚಿಸಲಿಲ್ಲ” ಎಂದು ಪಕ್ಷದ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮಾತುಕತೆ ಮುರಿದುಬಿದ್ದಿತ್ತು. ಹಾಗಾಗಿ ಎಎಪಿ ಹರಿಯಾಣದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಆ ಚುನಾವಣೆಯಲ್ಲಿ 90 ಸದಸ್ಯ ಬಲದ ಸದನದಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 37 ಸ್ಥಾನಗಳನ್ನು ಗೆದ್ದಿದ್ದರೆ, ಆಮ್ ಆದ್ಮಿ ಪಕ್ಷ ಒಂದನ್ನೂ ಗೆಲ್ಲಲಿಲ್ಲ.

ಜಮ್ಮು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ಅವರ ಸರ್ಕಾರಕ್ಕೆ ಎಎಪಿ ಔಪಚಾರಿಕವಾಗಿ ತನ್ನ ಬೆಂಬಲವನ್ನು ನೀಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಇಷ್ಟೆ ಅಲ್ಲದೆ, ಗುರುವಾರ ನಾಲ್ವರು ಪಕ್ಷೇತರ ಶಾಸಕರು ಕೂಡ ನ್ಯಾಷನಲ್ ಕಾನ್ಫರೆನ್ಸ್‌ಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ವಿಡಿಯೊ ನೋಡಿ: ಭಾರತಕ್ಕೆ ಶೇರು ಮಾರುಕಟ್ಟೆ ಕಾಲಿಟ್ಟಿದ್ದು ಹೇಗೆ? ಅದಕ್ಕೂ ಆರ್ಥಿಕತೆಗೂ ಇರುವ ಸಂಬಂಧವೇನು? ಭಾಗ-2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...