Homeಮುಖಪುಟಜಮ್ಮು-ಕಾಶ್ಮೀರ| ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ

ಜಮ್ಮು-ಕಾಶ್ಮೀರ| ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ

- Advertisement -
- Advertisement -

ಕದನ ವಿರಾಮ ಒಪ್ಪಂದವನ್ನು ಎತ್ತಿಹಿಡಿಯುವಂತೆ ಹಾಗೂ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಶಾಂತಿ ಖಚಿತಪಡಿಸಿಕೊಳ್ಳಲು ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ಪದೇಪದೆ ಎಚ್ಚರಿಕೆ ನೀಡಿದ್ದರೂ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ರಾಷ್ಟ್ರೋಯ ಮಾಧ್ಯಮಗಳು ವರದಿ ಮಾಡಿವೆ.

“ಪೂಂಚ್ ಜಿಲ್ಲೆಯ ದಿಗ್ವಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಇಂದು ಎಲ್‌ಒಸಿಯಲ್ಲಿ ದ್ವಿಪಕ್ಷೀಯ ಕದನ ವಿರಾಮವನ್ನು ಉಲ್ಲಂಘಿಸಿದೆ. ಭಾರತೀಯ ಸೇನೆಯು ಸೂಕ್ತವಾಗಿ ಪ್ರತಿದಾಳಿ ನಡೆಸಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ಸಮಯದಲ್ಲಿ ಈ ಉಲ್ಲಂಘನೆ ನಡೆದಿದೆ.

ಇತ್ತೀಚಿನ ಕದನ ವಿರಾಮ ಉಲ್ಲಂಘನೆಗಳು ಗಡಿ ಪ್ರದೇಶಗಳ ನಿವಾಸಿಗಳಲ್ಲಿ ಭಯವನ್ನುಂಟುಮಾಡಿವೆ. ಅವರಲ್ಲಿ ಹಲವರು ಇದೇ ರೀತಿಯ ಗಡಿಯಾಚೆಗಿನ ಗುಂಡಿನ ದಾಳಿ ಘಟನೆಗಳನ್ನು ಅನುಭವಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) 2003 ರಲ್ಲಿ ಸಹಿ ಹಾಕಿದ ಕದನ ವಿರಾಮ ಒಪ್ಪಂದವನ್ನು ನವೀಕರಿಸಲು ಒಪ್ಪಿಕೊಂಡರು.

2003 ರಲ್ಲಿ ಎರಡೂ ದೇಶಗಳು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ್ದರೂ, 2012 ರಿಂದ 2021 ರವರೆಗೆ ನೂರಾರು ಗಡಿ ನಿವಾಸಿಗಳು ಕದನ ವಿರಾಮ ಉಲ್ಲಂಘನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಇತ್ತೀಚಿನ ವಾರಗಳಲ್ಲಿ, ಪೂಂಚ್‌ನ ಎಲ್‌ಒಸಿಯ ಉದ್ದಕ್ಕೂ ಪಾಕಿಸ್ತಾನದ ಕಡೆಯಿಂದ ಹಲವಾರು ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿವೆ. ಬೇಸಿಗೆಯ ಆರಂಭದೊಂದಿಗೆ ಗಡಿಯುದ್ದಕ್ಕೂ ಒಳನುಸುಳುವಿಕೆ ಪ್ರಯತ್ನಗಳು ಹೆಚ್ಚುತ್ತಿರುವ ಸಮಯದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಅಂತಹ ಪ್ರಯತ್ನಗಳನ್ನು ಯಶಸ್ವಿಯಾಗಿ ತಡೆದಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ.

ಭಯೋತ್ಪಾದಕರು, ಮುಖ್ಯವಾಗಿ ವಿದೇಶಿಯರು, ಪೂಂಚ್, ರಾಜೌರಿ, ಕಥುವಾ ಮತ್ತು ಕಿಶ್ತ್ವಾರ್ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್ 23 ರಂದು, ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಭಾರತದ ಭಾಗಕ್ಕೆ ನುಸುಳಿದ್ದ ಐದು ಭಯೋತ್ಪಾದಕರ ಗುಂಪನ್ನು ಸ್ಥಳೀಯ ಪೊಲೀಸರ ತಂಡವು ಅಂತರರಾಷ್ಟ್ರೀಯ ಗಡಿಯ 4 ಕಿ.ಮೀ ಒಳಗೆ ಸನ್ಯಾಲ್ ಗ್ರಾಮದಲ್ಲಿ ಎನ್‌ಕೌಂಟರ್‌ ನಡೆಸಿತ್ತು.

ಆ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದರು. ಆದರೆ, ನಾಲ್ವರು ಪೊಲೀಸರು ಸಹ ಸಾವನ್ನಪ್ಪಿದರು.

‘ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ’: ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...