Homeರಾಷ್ಟ್ರೀಯ2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

- Advertisement -
- Advertisement -

ಜಮ್ಮು ಕಾಶ್ಮೀರ ಪೊಲೀಸರು ಇತ್ತೀಚೆಗೆ ರಚಿಸಿದ ರಾಜ್ಯ ತನಿಖಾ ಸಂಸ್ಥೆ(SIA)ಯು ಭಾನುವಾರದಂದು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯನ್ನು ಬಂಧಿಸಿದೆ. 11 ವರ್ಷಗಳ ಹಿಂದೆ ಆನ್‌ಲೈನ್ ಸುದ್ದಿ ನಿಯತಕಾಲಿಕದಲ್ಲಿ ಪ್ರಕಟವಾದ ಲೇಖನಕ್ಕಾಗಿ ವಿದ್ಯಾರ್ಥಿಯನ್ನು ಬಂಧನ ನಡೆದಿದೆ.

2011ರ ನವೆಂಬರ್ 6 ರಂದು ಆನ್‌ಲೈನ್ ಮ್ಯಾಗಜೀನ್ ‘ದಿ ಕಾಶ್ಮೀರ್ ವಾಲಾ’ದಲ್ಲಿ ಪ್ರಕಟವಾದ ಲೇಖನವು ‘ಅತ್ಯಂತ ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ’ ಎಂದು SIA ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿಯನ್ನು ಅಬ್ದುಲ್ ಆಲಾ ಫಾಜಿಲಿ ಎಂದು ಗುರುತಿಸಲಾಗಿದ್ದು, ಅವರು ಕಾಶ್ಮೀರ ವಿಶ್ವವಿದ್ಯಾನಿಲಯದ ಔಷಧೀಯ ವಿಜ್ಞಾನದಲ್ಲಿ ಡಾಕ್ಟರೇಟ್ ಅಧ್ಯಯನವನ್ನು ನಡೆಸುತ್ತಿದ್ದಾರೆ. ಅವರು ಇನ್ನು ಹದಿನೈದು ದಿನದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಅಲ್ಲದೆ ಅವರು ಮಾರ್ಚ್ 2021 ರವರೆಗೆ ಐದು ವರ್ಷಗಳ ಕಾಲ UGC ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಅನ್ನು ಪಡೆದಿದ್ದರು.

ಇದನ್ನೂ ಓದಿ: 180 ಪದಗಳಲ್ಲಿ; ಮೇಲೇಳದ ಟ್ರುಥ್ ಸೋಶಿಯಲ್; ಶರಣನಾದ ಕಾಶ್ಮೀರಿ ಅರಸ; ಗಾಂಧಿ ಮೇಲಿನ ದೇಶದ್ರೋಹಕ್ಕೆ 100

SIA ಅಧಿಕಾರಿಗಳು ಪಿಎಚ್‌ಡಿ ವಿದ್ಯಾರ್ಥಿ ಫಾಜಿಲಿ ಮತ್ತು ಈಗಾಗಲೇ ಜೈಲಿನಲ್ಲಿರುವ ‘ದಿ ಕಾಶ್ಮೀರ್ ವಾಲಾ’ ಸಂಪಾದಕ ಫಹಾದ್ ಶಾ ಅವರ ನಿವಾಸಗಳು ಮತ್ತು ಮ್ಯಾಗಜೀನ್‌ನ ಕಚೇರಿ ಆವರಣದ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ. ಆಪಾದಿತ ‘ದೇಶದ್ರೋಹಿ’ ಲೇಖನಕ್ಕಾಗಿ ಫಾಜಿಲಿ, ಫಹದ್‌‌ ಮತ್ತು ಇತರ ಸಹಚರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈ ಹುಡುಕಾಟಗಳು ನಡೆದಿವೆ ಎಂದು SIA ತಿಳಿಸಿದೆ.

ಫಹದ್‌ ಅವರನ್ನು ಮಾರ್ಚ್ 14 ರಂದು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿತ್ತು‌. ಅವರು ಇದಕ್ಕೂ ಮೊದಲು ನ್ಯಾಯಾಲಯಗಳಿಂದ ಎರಡು ಬಾರಿ ಜಾಮೀನು ಪಡೆದು ಹೊರಬಂದಿದ್ದರು. ಫೆಬ್ರವರಿ 4 ರಂದು ದಕ್ಷಿಣ ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯ ಕುರಿತು ಅವರ ವೆಬ್‌ಸೈಟ್‌ನಲ್ಲಿ ವರದಿ ಮಾಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು.

ಈ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ತಮ್ಮ ಮಗ ಉಗ್ರಗಾಮಿ ಅಲ್ಲ ಎಂದು ಕುಟುಂಬ ಸದಸ್ಯರು ಹೇಳಿರುವುದನ್ನು ಉಲ್ಲೇಖಿಸಿತ್ತು. ಪ್ರಕರಣದಲ್ಲಿ ಅವರು ನ್ಯಾಯಾಲಯದಿಂದ ಜಾಮೀನು ಹೊರ ಬಂದಾಗ, ಮ್ಯಾಗಜೀನ್‌ನಲ್ಲಿ ಮಾಡಿದ್ದ ಮತ್ತೊಂದು ವರದಿಗಾಗಿ ಶೋಪಿಯಾನ್‌ನಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿ, ಅವರನ್ನು ಮತ್ತೊಮ್ಮೆ ಬಂಧಿಸಲಾಯಿತು. ಎರಡನೇ ಬಾರಿಯು ಅವರು ಜಾಮೀನು ಪಡೆದಾಗ, ಪೊಲೀಸರು ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

‘ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ’ ಎಂಬ ಶೀರ್ಷಿಕೆಯ ಲೇಖನವು ಒಂದು ಕಡೆ ಹೆಚ್ಚು ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು, ಭಯೋತ್ಪಾದನೆಯನ್ನು ವೈಭವೀಕರಿಸುವ ಮೂಲಕ ಹಿಂಸಾಚಾರದ ಹಾದಿಯನ್ನು ಹಿಡಿಯಲು ಯುವಕರನ್ನು ಪ್ರೇರೇಪಿಸುವ ಉದ್ದೇಶದಿಂದ ಬರೆಯಲಾಗಿದೆ. ಮತ್ತೊಂದೆಡೆ, ಈ ಬರಹವು ಸುಳ್ಳು ನಿರೂಪಣೆಯನ್ನು ಪ್ರೇರೇಪಿಸಿ ಪ್ರಚಾರ ಮಾಡಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಮುರಿಯುವ ಉದ್ದೇಶದಿಂದ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಅಭಿಯಾನವನ್ನು ಪ್ರಚೋದಿಸಿದೆ ಎಂದು” ಎಂದು SIA ಹೇಳಿಕೆಯಲ್ಲಿ ತಿಳಿಸಿದೆ.

ನಾಗರಿಕ ಪ್ರತಿಭಟನಾಕಾರರ ಮೇಲೆ ನಡೆದ ಬಲಪ್ರಯೋಗವನ್ನು ಖಂಡಿಸಿ ಹಲವಾರು ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2016 ರ ಬೀದಿ ಪ್ರತಿಭಟನೆಯ ಸಮಯದಲ್ಲಿ ಫಾಜಿಲಿ ಬೆಳಕಿಗೆ ಬಂದರು. ಐದು ವರ್ಷಗಳ ಹಿಂದೆಯೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅವರನ್ನು ವಿಚಾರಣೆಗೆ ಕರೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...