Homeಮುಖಪುಟಜಮ್ಮು ಕಾಶ್ಮೀರ: ಬಿಗಿ ಭದ್ರತೆ ಮಧ್ಯೆ ಡಿಡಿಸಿ ಮೊದಲ ಹಂತದ ಚುನಾವಣೆ

ಜಮ್ಮು ಕಾಶ್ಮೀರ: ಬಿಗಿ ಭದ್ರತೆ ಮಧ್ಯೆ ಡಿಡಿಸಿ ಮೊದಲ ಹಂತದ ಚುನಾವಣೆ

ಡಿಡಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಪಿಡಿಪಿ ಯುವ ವಿಭಾಗದ ಅಧ್ಯಕ್ಷ ಮತ್ತು ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯವರ ಆಪ್ತ ಸಹಾಯಕ ವಹೀದ್‌ ಪರ್ರಾ ಅವರನ್ನು ಎನ್‌ಐಎ ಬಂಧಿಸಿದೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಬಿಗಿ ಭದ್ರತೆಯ ಮಧ್ಯೆ ಮತದಾನ ಆರಂಭವಾಗಿದೆ. ಜಮ್ಮುವಿನ 18 ಮತ್ತು ಕಾಶ್ಮೀರದ 25 ಸ್ಥಾನಗಳು ಸೇರಿದಂತೆ ಮೊದಲ ಹಂತದಲ್ಲಿ ಡಿಡಿಸಿಯ ಒಟ್ಟು 43 ಕ್ಷೇತ್ರಗಳಿಗಾಗಿ ಇಂದು ಮತದಾನ ನಡೆಯುತ್ತಿದೆ.

ಕಳೆದ ವರ್ಷ ಆಗಸ್ಟ್​ನಲ್ಲಿ ಕೇಂದರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಪಡಿಸಿದ ಬಳಿಕ ಇಲ್ಲಿ ನಡೆಯುತ್ತಿರೋ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆ ಇದಾಗಿದೆ. ಮೊದಲ ಹಂತದಲ್ಲಿ 1,475 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಡಿಸಿ, ‍ಪಂಚಾಯತ್‌ ಉಪಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯು 8 ಹಂತಗಳಲ್ಲಿ ನಡೆಯಲಿವೆ.

ಮತದಾನ ಸುಗಮವಾಗಿ ನಡೆಯಲು ವಿಸ್ತಾರವಾದ ವ್ಯವಸ್ಥೆ ಮಾಡಲಾಗಿದೆ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶನಿವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನ ಮಧ್ಯಾಹ್ನ 2 ಗಂಟೆಗೆ ಕೊನೆಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಇದು ರೈತರ ಸಂಸ್ಕೃತಿ: ಲಾಠೀ ಚಾರ್ಜ್ ಮಾಡಿದ ಪೊಲೀಸ್‌ಗೆ ನೀರು ಕೊಟ್ಟ ರೈತನ ಫೋಟೊ

 

“ಭಲೆಸ್ಸಾ ಮತ್ತು ಚಂಗಾ ಡಿಡಿಸಿ ಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾಯಿತು. ಬೆಳಿಗ್ಗೆ 7 ರಿಂದ ಜನರು ಬರುತ್ತಿದ್ದಾರೆ. ನಾವು ಉತ್ಸಾಹದಿಂದ ಭಾಗವಹಿಸುತ್ತಿದ್ದೇವೆ” ಎಂದು ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲಾ ಅಭಿವೃದ್ಧಿ ಆಯುಕ್ತರು ಸುದ್ದಿ ಸಂಸ್ಥೆ ಎನ್‌ಐಗೆ ಹೇಳಿದ್ದಾರೆ.

ಪೀಪಲ್ಸ್​ ಅಲಯನ್ಸ್​ ಫಾರ್​ ಗುಪ್ಕರ್​ ಡಿಕ್ಲರೇಷನ್(ಪಿಎಜಿಡಿ), ಬಿಜೆಪಿ ಹಾಗೂ ಮಾಜಿ ಹಣಕಾಸು ಸಚಿವ ಅಲ್ತಾಫ್​ ಬುಖಾರಿ ಅವರ ಅಪ್ನೀ ಪಾರ್ಟಿಯ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ. ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಕೂಡ ಕಣದಲ್ಲಿದೆ.

ಡಿಡಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಪಿಡಿಪಿ ಯುವ ವಿಭಾಗದ ಅಧ್ಯಕ್ಷ ಮತ್ತು ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯವರ ಆಪ್ತ ಸಹಾಯಕ ವಹೀದ್‌ ಪರ್ರಾ ಅವರನ್ನು ಭಯೋತ್ಪಾದಕ ಪ್ರಕರಣಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬಂಧಿಸಿದೆ.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಮಣಿದ ಸರ್ಕಾರ: ಕೊನೆಗೂ ದೆಹಲಿ ಪ್ರವೇಶಿಸಲು ರೈತರಿಗೆ ಅನುಮತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...