ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ ಒಂದು ದಿನದ ನಂತರ, ರಾಜ್ಯದ ಬಾರಾಮುಲ್ಲಾದ ನಿಯಂತ್ರಣ ರೇಖೆಯನ್ನು ದಾಟಿ ಭಾರತದೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಸೇನೆ ಬುಧವಾರ ಕೊಂದಿದೆ ಎಂದ ವರದಿಯಾಗಿದೆ. ಜಮ್ಮು ಕಾಶ್ಮೀರ
ಬಾರಾಮುಲ್ಲಾದ ಉರಿ ಸೆಕ್ಟರ್ ಮೂಲಕ ಇಬ್ಬರು ಅಥವಾ ಮೂವರು ಉಗ್ರರು ಕಾಶ್ಮೀರಕ್ಕೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಸೇನೆ ತಿಳಿಸಿದೆ, ಇದರಿಂದಾಗಿ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಭದ್ರತಾ ಪಡೆಗಳು ಸ್ಥಳದಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ವರದಿಗಳು ಉಲ್ಲೇಖಿಸಿವೆ.
Update: OP TIKKA, Baramulla
Heavy exchange of fire between security forces and terrorists, two terrorists have been eliminated, infiltration bid foiled by the security forces in the ongoing Operation. Large quantity of weapons, ammunition and other war-like stores have been…
— Chinar Corps🍁 – Indian Army (@ChinarcorpsIA) April 23, 2025
ಪಹಲ್ಗಾಮ್ ಬಳಿಯ ಬೈಸರನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿ 17 ಜನರು ಗಾಯಗೊಂಡ ಒಂದು ದಿನದ ನಂತರ ಈ ಘಟನೆ ನಡೆಸಿದೆ.
2019 ರಲ್ಲಿ ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಮೊದಲ ಪ್ರಮುಖ ಉಗ್ರಗಾಮಿ ದಾಳಿ ಇದಾಗಿದೆ.
ಇಬ್ಬರು ಕನ್ನಡಿಗರು ಸಾವು
ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮತ್ತು ಬೆಂಗಳೂರಿನಲ್ಲಿ ವಾಸವಿದ್ದ ಹಾವೇರಿ ಮೂಲದ ಭರತ್ ಭೂಷಣ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಂಡ ಕಳುಹಿಸಿದ ಕರ್ನಾಟಕ ಸರ್ಕಾರ
ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ, ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಐಪಿಎಸ್ ಅಧಿಕಾರಿ ಚೇತನ್ ಆರ್ ಮತ್ತು ಇತರ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತಲುಪಿದ್ದಾರೆ.
ದಾಳಿಯಲ್ಲಿ ಸಾವಿಗೀಡಾದ ಕರ್ನಾಟಕ ಇಬ್ಬರ ಸೇರಿದಂತೆ 25 ಜನರ ಶವಗಳನ್ನು ಅವರ ಊರುಗಳಿಗೆ ತಲುಪಿಸಲು ವಿಮಾನದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ವ್ಯವಸ್ಥೆಗಳನ್ನು ಮಾಡಿದೆ.
ಸಹಾಯವಾಣಿ ತೆರೆದ ಪೊಲೀಸರು
ಅಗತ್ಯವಿರುವ ಪ್ರವಾಸಿಗರಿಗೆ ತಕ್ಷಣದ ಬೆಂಬಲ ಮತ್ತು ಮಾಹಿತಿಯನ್ನು ಒದಗಿಸಲು ಅನಂತನಾಗ್ ಪೊಲೀಸರು ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ 24/7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿಗಳು ಅಥವಾ ಪ್ರಶ್ನೆಗಳಿಗೆ ಪ್ರವಾಸಿಗರಿಗೆ ಸಹಾಯ ಮಾಡಲು ಮೀಸಲಾಗಿರುವ ಅನಂತ್‌ನಾಗ್ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಈಗ ದಿನದ 24 ಗಂಟೆಯೂ ವಿಶೇಷ ಸಹಾಯ ಕೇಂದ್ರ ಕಾರ್ಯನಿರ್ವಹಿಸುತ್ತಿದೆ.
ಸಹಾಯವಾಣಿಯ ಸಂಪರ್ಕ ಸಂಖ್ಯೆಗಳು ಕೆಳಗಿವೆ
9596777669
01932225870
ವಾಟ್ಸಾಪ್ : 9419051940 ಜಮ್ಮು ಕಾಶ್ಮೀರ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ
ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ