ಶನಿವಾರ ರಾತ್ರಿ ಉತ್ತರ ಕಾಶ್ಮೀರದ ಕುಪ್ವಾರಾದಲ್ಲಿ ಗುಲಾಮ್ ರಸೂಲ್ ಮಗ್ರೆ ಎಂದು ಗುರುತಿಸಲಾದ ನಾಗರಿಕನೊಬ್ಬನನ್ನು ಅಪರಿಚಿತ ಬಂದೂಕುಧಾರಿಗಳು ಕೊಂದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪೊಲೀಸರು ಹತ್ಯೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ವರದಿ ಹೇಳಿದೆ. ಜಮ್ಮು ಕಾಶ್ಮೀರ
ಶನಿವಾರ ರಾತ್ರಿ ಕಾನಿ ಖಾಸ್ ಪ್ರದೇಶದಲ್ಲಿರುವ ಗುಲಾಮ್ ರಸೂಲ್ ಮಗ್ರೆ ಅವರ ಮನೆಗೆ ಅಪರಿಚಿತ ಬಂದೂಕುಧಾರಿಗಳು ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 44 ವರ್ಷದ ಮಗ್ರೆ ಅವರ ಹೊಟ್ಟೆ ಮತ್ತು ಮಣಿಕಟ್ಟಿಗೆ ಗುಂಡು ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯ ನಂತರ ಬಂದೂಕುಧಾರಿಗಳು ಪರಾರಿಯಾಗಿದ್ದು, ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗ್ರೆ ಅವರನ್ನು ಹಂದ್ವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ, ಅವರನ್ನು ಶ್ರೀನಗರದ ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ನಂತರ ಅವರು ಸಾವನ್ನಪ್ಪಿದರು ಎಂದು ವರದಿ ಹೇಳಿದೆ.
ಮಂಗಳವಾರ ನಡೆದ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಈ ಭಯೋತ್ಪಾದಕ ದಾಳಿಯ ನಂತರ ಕಣಿವೆಯಲ್ಲಿ ಹೆಚ್ಚಿನ ಭದ್ರತಾ ಎಚ್ಚರಿಕೆ ವಹಿಸಲಾಗಿತ್ತು. ಅದಾಗ್ಯೂ, ಈ ಗುಂಡಿನ ದಾಳಿ ಘಟನೆ ನಡೆದಿದೆ.
ಪಹಲ್ಗಾಮ್ ದಾಳಿಯ ನಂತರ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಾದ್ಯಂತ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ ಆರಂಭಿಸಿವೆ. ಹಲವರನ್ನು ಬಂಧಿಸಲಾಗಿದ್ದು, ಉಗ್ರಗಾಮಿಗಳ ಬಗ್ಗೆ ಸಹಾನುಭೂತಿ ಹೊಂದಿರುವವರ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಕಳೆದ ನಾಲ್ಕು ದಿನಗಳಲ್ಲಿ, ಕಣಿವೆಯಾದ್ಯಂತ 2,000 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್
ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

