Homeಮುಖಪುಟಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ

- Advertisement -
- Advertisement -

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀನಗರದ ಎಸ್‌ಕೆಐಸಿಸಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಂದ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ ಅವರ ಪಕ್ಷದ ನಾಯಕ ಸುರೀಂದರ್ ಚೌಧರಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅವರ ಜೊತೆಗೆ ದಮ್ಹಾಲ್ ಹಂಜಿಪೋರ್‌ನ ಎನ್‌ಸಿ ಪಕ್ಷದ ಶಾಸಕರಾದ ಸಕೀನಾ ಇಟ್ಟೂ, ಮೆಂಧರ್‌ನ ಎನ್‌ಸಿ ಶಾಸಕ ಜಾವೇದ್ ರಾಣಾ, ರಫಿಯಾಬಾದ್‌ನ ಎನ್‌ಸಿ ಶಾಸಕ ಜಾವೇದ್ ದಾರ್ ಮತ್ತು ಚಂಬ್‌ನ ಪಕ್ಷೇತರ ಶಾಸಕ ಸತೀಶ್ ಶರ್ಮಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಮತ್ತು ಕಮ್ಯುನಿಸ್ಟ್ ಪಕ್ಷದ ನಾಯಕರಾದ ಡಿ. ರಾಜಾ ಮತ್ತು ಪ್ರಕಾಶ್ ಕಾರಟ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರು ಭಾಗವಹಿಸಿದ್ದರು.

ಈ ಮಧ್ಯೆ, ಎನ್‌ಸಿ ಮೈತ್ರಿಕೂಟದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷವು, ಒಮರ್ ಅವರ ಸಂಪುಟಕ್ಕೆ ಸೇರದಿರಲು ನಿರ್ಧರಿಸಿದೆ. ಬದಲಿಗೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡಲಿದೆ ಎಂದು ಕಾಂಗ್ರೆಸ್‌ನ ಮೂಲಗಳು ಸೂಚಿಸಿವೆ.

ಮೂಲಗಳ ಪ್ರಕಾರ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಕಾಂಗ್ರೆಸ್‌ಗೆ ಒಂದು ಕ್ಯಾಬಿನೆಟ್ ಸ್ಥಾನವನ್ನು ನೀಡಿತ್ತು, ಆದರೆ ಪಕ್ಷವು ಈ ಏಕೈಕ ಸಚಿವ ಸ್ಥಾನದ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿ, ಇಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿತ್ತು.

ಆದಾಗ್ಯೂ, ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ 90 ಸದಸ್ಯರ ಅಸೆಂಬ್ಲಿಗೆ ಮುಖ್ಯಮಂತ್ರಿ ಸೇರಿದಂತೆ ಒಂಬತ್ತು ಸಚಿವರು ಮಾತ್ರ ಪ್ರಮಾಣವಚನ ಸ್ವೀಕರಿಸಬಹುದಾಗಿರುವುದರಿಂದ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಕಾಂಗ್ರೆಸ್‌ಗೆ ಒಂದಕ್ಕಿಂತ ಹೆಚ್ಚು ಕ್ಯಾಬಿನೆಟ್ ಸ್ಥಾನಗಳನ್ನು ವಿಸ್ತರಿಸಲು ಇಷ್ಟವಿರಲಿಲ್ಲ.

90 ಸದಸ್ಯ ಬಲದ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆರು ಸ್ಥಾನಗಳನ್ನು ಗಳಿಸಿ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. 2014 ರ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ ಗೆದ್ದುಕೊಂಡಿತ್ತು. ಕಾಂಗ್ರೆಸ್ ಅನ್ನು ಸಮಾಧಾನಪಡಿಸಲು, ನ್ಯಾಷನಲ್ ಕಾನ್ಫರೆನ್ಸ್ ಜಮ್ಮು ಕಾಶ್ಮೀರದಲ್ಲಿ ಖಾಲಿ ಇರುವ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ನೀಡಿದೆ.

ಜಮ್ಮು ಕಾಶ್ಮೀರದ ಜನರಿಗೆ ರಾಜ್ಯತ್ವ ಮತ್ತು ಭೂಮಿಯ ಹಕ್ಕುಗಳ ಮರುಸ್ಥಾಪನೆಯು ಸಚಿವ ಸ್ಥಾನಗಳಿಗಿಂತ ಮುಖ್ಯವಾಗಿದೆ ಎಂದು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥರು ಇತ್ತೀಚೆಗೆ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರಕ್ಕೆ ಸೇರದಿರುವ ಕಾಂಗ್ರೆಸ್ ನಿರ್ಧಾರದ ನಂತರ ಎನ್‌ಸಿ-ಕಾಂಗ್ರೆಸ್ ಮೈತ್ರಿಯೊಳಗಿನ ಭಿನ್ನಾಭಿಪ್ರಾಯದ ಇದೆ ಎಂದು ಊಹಾಪೋಹ ಹರಡಿತ್ತು. ಈ ಬಗ್ಗೆ ಪ್ರತಿಕ್ರಿಯತಿಸಿದ್ದ ಉಮರ್ ಅಬ್ದುಲ್ಲಾ ಮೈತ್ರಿಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದು: ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...