Homeಮುಖಪುಟಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ...

ಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ ಸ್ಥಳ ಸೀಲ್ ಮಾಡಿದ ಅಧಿಕಾರಿಗಳು!

- Advertisement -
- Advertisement -

ವಿವಾದಾತ್ಮಕ ವಕ್ಫ್ ಕಾಯ್ದೆಯ ಕುರಿತು ಸಭೆ ನಡೆಸಲು ಧಾರ್ಮಿಕ ಸಂಘಟನೆಗಳಿಗೆ ಜಮ್ಮು ಕಾಶ್ಮೀರ ಅಧಿಕಾರಿಗಳು ಅವಕಾಶ ನೀಡಲಿಲ್ಲ ಎಂದು ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷರಾದ ಮಿರ್ವೈಜ್ ಉಮರ್ ಫಾರೂಕ್ ಅವರ ಕಚೇರಿ ಬುಧವಾರ ತಿಳಿಸಿದೆ. ಹಲವಾರು ಧಾರ್ಮಿಕ ಸಂಘಟನೆಗಳ ಒಕ್ಕೂಟವಾದ ಮುತಾಹಿದಾ ಮಜ್ಲಿಸ್-ಎ-ಉಲೇಮಾ (ಎಂಎಂಯು) ಈ ಸಭೆ ನಡೆಸಿ ವಕ್ಫ್ ಕಾಯ್ದೆಯ ಬಗ್ಗೆ ಚರ್ಚಿಸಲು ತೀರ್ಮಾನಿಸಿದ್ದರು ಎಂದು ವರದಿ ಹೇಳಿದೆ.

ಮಿರ್ವೈಜ್ ಅವರು ಜಮ್ಮು ಕಾಶ್ಮೀರದ ಪ್ರಮುಖ ಧಾರ್ಮಿಕ ಮುಖಂಡ ಕೂಡಾ ಆಗಿದ್ದು, ಶ್ರೀನಗರದ ನೈಜೀನ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಎಂಎಂಯು ಸಭೆ ಸೇರಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮಿರ್ವೈಜ್ ಅವರ ಕಚೇರಿ, “ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮಿರ್ವೈಜ್ ಅವರ ನಿವಾಸದಲ್ಲಿ ಮುತಾಹಿದಾ ಮಜ್ಲಿಸ್-ಎ-ಉಲೇಮಾ (MMU) ನಡೆಸುವ ಮಹತ್ವದ ಸಭೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಅವರ ಕಚೇರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದೆ.

ಮಿರ್ವೈಜ್ ನಿವಾಸಕ್ಕೆ ಹೋಗುವ ಎಲ್ಲಾ ರಸ್ತೆಗಳು ಮತ್ತು ಒಳರಸ್ತೆಗಳನ್ನು “ಸೀಲ್ ಮಾಡಲಾಗಿದೆ” ಎಂದು ಅದು ಹೇಳಿದೆ. “ಇತ್ತೀಚೆಗೆ ಅಂಗೀಕರಿಸಲಾದ ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಗಂಭೀರ ಆತಂಕಗಳನ್ನು ಚರ್ಚಿಸುವ ಉದ್ದೇಶದಿಂದ ಲಡಾಖ್, ಕಾರ್ಗಿಲ್ ಮತ್ತು ಜಮ್ಮು ಪ್ರದೇಶ ಸೇರಿದಂತೆ ಜಮ್ಮು ಕಾಶ್ಮೀರದ ಎಲ್ಲಾ ಜಿಲ್ಲೆಗಳ ಧಾರ್ಮಿಕ ಪ್ರತಿನಿಧಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲು ತಲುಪಿದ್ದರು” ಎಂದು ಅದು ಹೇಳಿದೆ.

ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ, ಕಣಿವೆಯಲ್ಲಿರುವ ಮುಸ್ಲಿಂ ವಿದ್ವಾಂಸರಿಗೆ ಇಂತಹ ಗಂಭೀರ ವಿಷಯದ ಬಗ್ಗೆ ಚರ್ಚಿಸುವ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಮಿರ್ವೈಜ್ ಹೇಳಿದ್ದಾರೆ.

“ಈ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸ್ಲಿಂ ವಿದ್ವಾಂಸರು ಮತ್ತು ಧಾರ್ಮಿಕ ಸಂಸ್ಥೆಗಳು ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಲು ಮತ್ತು ಶಾಂತಿಯುತವಾಗಿ ಪ್ರತಿಕ್ರಿಯಿಸುವ ಚರ್ಚೆಯನ್ನು ಸಹ ನಿಷೇಧಿಸಲಾಗಿದೆ ಎಂಬುದು ವಿಚಿತ್ರವಾಗಿದೆ. ಪ್ರತಿಯೊಂದು ರಾಜಕೀಯ ಪಕ್ಷವು ಭಾರತೀಯ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿದೆ. ಇಂತಹದ್ದೆ ಹಕ್ಕನ್ನು ಜಮ್ಮು ಕಾಶ್ಮೀರದ ಮುಸ್ಲಿಂ ರಾಜಕೀಯ ಮತ್ತು ಧಾರ್ಮಿಕ ಪ್ರತಿನಿಧಿಗಳಿಗೂ ವಿಸ್ತರಿಸಬೇಕು” ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

“ಎಲ್ಲಾ ಸದಸ್ಯರೊಂದಿಗೆ ಸಮಾಲೋಚಿಸಿ ಸಿದ್ಧಪಡಿಸಲಾದ ಈ ವಿಷಯದ ಕುರಿತು ಜಂಟಿ ನಿರ್ಣಯವನ್ನು ಮಸೀದಿಗಳಲ್ಲಿ ಮತ್ತು ಎಲ್ಲಾ ಧಾರ್ಮಿಕ ಸಭೆಗಳಲ್ಲಿ ಬರುವ ಶುಕ್ರವಾರ ಓದಲಾಗುವುದು ಎಂದು MMU ನಿರ್ಧರಿಸಿದೆ. MMU ತನ್ನ ಸಂಪೂರ್ಣ ಬೆಂಬಲವನ್ನು ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ಗೆ ನೀಡುತ್ತದೆ. ಹೊಸ ಕಾನೂನಿನಿಂದ ಉದ್ಭವಿಸುವ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತವೆಂದು ಭಾವಿಸುವ ಯಾವುದೇ ಕ್ರಮಕೈಗೊಳ್ಳುವುದಿದ್ದರೆ ಎಂಎಂಯು ಅವರ ಪರವಾಗಿ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ (AIMPLB), ಇತರ ಮುಸ್ಲಿಂ ಸಂಘಟನೆಗಳು ಮತ್ತು ರಾಜಕಾರಣಿಗಳು ಈಗಾಗಲೆ ವಕ್ಫ್ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಏಪ್ರಿಲ್ 15 ರಂದು ಸುಪ್ರಿಂಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ. ಜಮ್ಮು ಕಾಶ್ಮೀರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...