Homeಮುಖಪುಟಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ಗುಪ್ಕರ್ ಒಕ್ಕೂಟವು 107 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 62 ಸ್ಥಾನಗಳಲ್ಲಿ, ಕಾಂಗ್ರೆಸ್ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

- Advertisement -
- Advertisement -

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ನಡೆಯುತ್ತಿರುವ ಡಿಸ್ಟ್ರಿಕ್ಟ್ ಡೆವಲಪ್‌ಮೆಂಟ್‌ ಕೌನ್ಸಿಲ್(DDC) ಸ್ಥಳೀಯ ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಒಕ್ಕೂಟ ಸ್ಪಷ್ಟ ಮುನ್ನಡೆ ಸಾಧಿಸಿದೆ. ಅತೀವ ಆತ್ಮವಿಶ್ವಾಸದಲ್ಲಿದ್ದ ಬಿಜೆಪಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಜಮ್ಮು ಕಾಶ್ಮೀರದ ಒಟ್ಟು 20 ಜಿಲ್ಲೆಗಳ ಡಿಡಿಸಿಗಳಿಗೆ 8 ಹಂತಗಳಲ್ಲಿ ನವೆಂಬರ್‌ 28 ರಿಂದ ಡಿಸೆಂಬರ್ 19ರ ವರೆಗೆ ಚುನಾವಣೆಗಳು ನಡೆದಿದ್ದವು.‌  ಇತ್ತೀಚಿನ ವರದಿಯ ಪ್ರಕಾರ ಫಾರೂಕ್ ಅಬ್ದುಲ್ಲಾರ ನ್ಯಾಷನಲ್‌ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿಯವರ ಪಿಡಿಪಿ ಸೇರಿದ ಸ್ಥಳೀಯ ಪಕ್ಷಗಳ ಗುಪ್ಕರ್ ಒಕ್ಕೂಟವು 107 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಒಟ್ಟು 280 ಸ್ಥಾನಗಳು

ಗುಪ್ಕರ್ ಒಕ್ಕೂಟ – 107
ಬಿಜೆಪಿ – 62
ಕಾಂಗ್ರೆಸ್ – 22

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಚುನಾವಣೆ: ಫಾರೂಕ್ ಅಬ್ದುಲ್ಲಾರ ಗುಪ್ಕರ್ ಒಕ್ಕೂಟಕ್ಕೆ ಮುನ್ನಡೆ – ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ!

280 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಬ್ಯಾಲೆಟ್‌ ಪೇಪರ್ ಮೂಲಕ ಮತದಾನ ನಡೆದಿರುವುದರಿಂದ ಮತ ಎಣಿಕೆ ವಿಳಂಬವಾಗಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಶ್ರೀನಗರದಿಂದ ಜಯಗಳಿಸಿರುವ ಪಿಡಿಪಿಯ ರೆಹಾನ್ ಪರ್ವೇಜ್ ಈದ್ಗಾ “ಈ ಗೆಲುವನ್ನು ನಿರೀಕ್ಷಿಸಲಾಗಿತ್ತು. ಜನರು ತಮ್ಮ ಬೆಂಬಲವನ್ನು ತೋರಿಸಿದ್ದಾರೆ. ನಾನು ಈ ಪ್ರದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ಕುರಿತ ಬಿಜೆಪಿಯ ತೀರ್ಮಾನ ಮತ್ತು ಹೊಸ ನಾಯಕತ್ವವನ್ನು ಜನ ಒಪ್ಪಿಕೊಳ್ಳುತ್ತಾರೆ ಮತ್ತು ಬಿಜೆಪಿಯನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆಎಂದು ಬಿಜೆಪಿ ಉಸ್ತುವಾರಿ ಅನುರಾಗ್ ಠಾಕೂರ್ ಹೇಳಿದ್ದರು.


ಇದನ್ನೂ ಓದಿ: ಜಮ್ಮು-ಕಾಶ್ಮೀರ: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ ರಾಜಿನಾಮೆ ನೀಡಿದ 3 ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...