Homeಮುಖಪುಟಜಮ್ಮು ಕಾಶ್ಮೀರ ಚುನಾವಣೆ : ಕಥುವಾ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಟಿಕೆಟ್ ಕೊಟ್ಟ...

ಜಮ್ಮು ಕಾಶ್ಮೀರ ಚುನಾವಣೆ : ಕಥುವಾ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಟಿಕೆಟ್ ಕೊಟ್ಟ ಕಾಂಗ್ರೆಸ್!

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಸೋಮವಾರ (ಸೆ. 9) ಬಿಡುಗಡೆ ಮಾಡಿದ್ದು, ಕಥುವಾ ಬಾಲಕಿಯ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದ ಚೌಧರಿ ಲಾಲ್ ಸಿಂಗ್‌ಗೆ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಕೊಟ್ಟಿದೆ.

2018ರಲ್ಲಿ, ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಲಾಲ್‌ ಸಿಂಗ್, ಎಂಟು ವರ್ಷದ ಅಲೆಮಾರಿ ಬುಡಕಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬೆಂಬಲಿಸಿ ಸ್ಥಳೀಯ ಹಿಂದುತ್ವ ನಾಯಕರು ಆಯೋಜಿಸಿದ್ದ’ಹಿಂದೂ ಏಕತಾ’ ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಇದು ಲಾಲ್ ಸಿಂಗ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಅತ್ಯಾಚಾರ ಆರೋಪಿಗಳಾದ ಪರ್ವೇಶ್ ಕುಮಾರ್, ಸಂಜಿ ರಾಮ್ ಮತ್ತು ದೀಪಕ್ ಖಜುರಿಯಾ ಪರ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಲಾಲ್ ಸಿಂಗ್, ಪೊಲೀಸ್ ತನಿಖೆಯನ್ನು ಪ್ರಶ್ನಿಸಿದ್ದರು ಮತ್ತು ಅತ್ಯಾಚಾರ ಆರೋಪ ‘ಹಿಂದೂಗಳ ವಿರುದ್ಧದ ಪಿತೂರಿಯ ಪ್ರಯತ್ನ’ ಎಂದಿದ್ದರು. ಲಾಲ್ ಸಿಂಗ್‌ ಅವರ ಈ ಹೇಳಿಕೆ, ಆಗಿನ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ದ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಲಾಲ್ ಸಿಂಗ್ ‘ಡೋಗ್ರಾ ಸ್ವಾಭಿಮಾನ್ ಸಂಘಟನೆ’ ಎಂಬ ಪಕ್ಷ ಕಟ್ಟಿದ್ದರು. ನಂತರ, ಲೋಕಸಭೆ ಚುನಾವಣೆಯ ಸಂದರ್ಭ ಮಾರ್ಚ್ 20, 2024ರಂದು ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗಿದ್ದರು ಮತ್ತು ತನ್ನ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಬಳಿಕ, ಲೋಕಸಭಾ ಚುನಾವಣೆಗೆ ಲಾಲ್ ಸಿಂಗ್‌ಗೆ ಉದಂಪುರ-ದೋಡಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಅವರು 1.24 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ಲಾಲ್ ಸಿಂಗ್ ಅವರು ಈ ಹಿಂದೆ ಮೂರು ಬಾರಿ ಗೆದ್ದಿರುವ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ, ಉದ್ಯಮಿ ದರ್ಶನ್ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಲಾಲ್ ಸಿಂಗ್ 

2014ಕ್ಕಿಂತ ಮೊದಲು ಲಾಲ್‌ ಸಿಂಗ್‌ ಕಾಂಗ್ರೆಸ್‌ನಲ್ಲೇ ಇದ್ದರು. ಎರಡು ಬಾರಿ ಪಕ್ಷದ ಟಿಕೆಟ್‌ನಲ್ಲಿ ಉಂದಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಸಂಸದರಾಗಿದ್ದರು. 2014ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಬಿಜೆಪಿ ಸೇರ್ಪಡೆಗೊಂಡು ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

ಜನವರಿ 2023ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು ಪ್ರವೇಶಿಸಿದಾಗ, ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಥುವಾ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಲಾಲ್ ಸಿಂಗ್, ಅವರ ಪತ್ನಿ ಮತ್ತು ಮಾಜಿ ಶಾಸಕ ಕಾಂತಾ ಅಂಡೋತ್ರಾ ನಡೆಸುತ್ತಿದ್ದ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು.

ಈ ವರ್ಷದ ಮಾರ್ಚ್‌ನಲ್ಲಿ ಲಾಲ್‌ ಸಿಂಗ್‌ಗೆ ಮರು ಸೇರ್ಪಡೆಗೊಂಡಾಗ, ಕಾಂಗ್ರೆಸ್ ವಿರುದ್ದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, “ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಾಲ್‌ ಸಿಂಗ್‌ ಅನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾಚಿಕೆಯಾಗಬೇಕು. 8 ವರ್ಷದ ಬಾಲಕಿಯ ಅತ್ಯಾಚಾರಿಗಳನ್ನು ಬೆಂಬಲಿಸಿದ ಲಾಲ್ ಸಿಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಮೂಲ ತತ್ವಗಳು ಮತ್ತು ಸಿದ್ಧಾಂತಗಳಿಗೆ ದ್ರೋಹ ಬಗೆದಿದೆ” ಎಂದಿದ್ದರು.

ಲಾಲ್‌ ಸಿಂಗ್‌ಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದು ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಂದು ಹೇಳಲಾಗುತ್ತಿದೆ. ಆದರೆ, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ. ಸಚಿವರಾಗಿದ್ದಾಗಲೇ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆದ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ, ಹಿಂದುತ್ವದ ಪ್ರತಿಪಾದಕನಿಗೆ ಟಿಕೆಟ್ ಕೊಟ್ಟಿರುವ ಕಾಂಗ್ರೆಸ್‌ ನಡೆ ಆಕ್ರೋಶಕ್ಕೆ ಕಾರಣವಾಗಿದೆ.

ದೇಶವನ್ನು ತಲ್ಲಣಗೊಳಿಸಿದ್ದ ಅತ್ಯಾಚಾರ ಪ್ರಕರಣ

ಜನವರಿ 2018ರಲ್ಲಿ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ ವಾರಗಳ ಕಾಲ ದೇವಸ್ಥಾನದೊಳಗೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಆಕೆಯ ಗರ್ಭಕೋಶ ಖಾಸಗಿ ಭಾಗದಿಂದ ಹೊರಬರುವಷ್ಟು ಕ್ರೂರವಾಗಿ ಹಿಂಸಿಸಲಾಗಿತ್ತು.

ಜನವರಿ 10, 2018ರಂದು ಕಥುವಾದ ರಸ್ಸಾನ ಗ್ರಾಮದ ಹೊಲವೊಂದರಲ್ಲಿ ಕುದುರೆಗಳನ್ನು ಮೇಯಿಸುತ್ತಿದ್ದಾಗ ಬಾಲಕಿ ನಾಪತ್ತೆಯಾಗಿದ್ದಳು. ಈ ಸಂಬಂಧ ಆಕೆಯ ತಂದೆ ಯೂಸುಫ್ ಜನವರಿ 12ರಂದು ಸ್ಥಳೀಯ ಹಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಾರದ ಬಳಿಕ ಜನವರಿ 17ರಂದು ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿತ್ತು. ಈ ಘಟನೆ ದೇಶದಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...