Homeಮುಖಪುಟಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ

ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ

- Advertisement -
- Advertisement -

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ಇಂದು (ಅ.8) ಹೊರ ಬೀಳಲಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭಗೊಂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆದರೆ, ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಜನರು ಮತ ಚಲಾಯಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ 61.38 ಶೇಕಡಾ ಮತದಾನವಾಗಿದೆ, ನಂತರ ಸೆಪ್ಟೆಂಬರ್ 25 ರಂದು ಎರಡನೇ ಹಂತದಲ್ಲಿ 57.31 ಶೇಕಡಾ ಮತ್ತು ಅಕ್ಟೋಬರ್ 1ರಂದು ಅಂತಿಮ ಹಂತದಲ್ಲಿ 65.48ರಷ್ಟು ಮತದಾನವಾಗಿದೆ.

10 ವರ್ಷಗಳ ಬಳಿಕ, 2019ರಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಇದು ಮೊದಲನೆಯ ಚುನಾವಣೆಯಾಗಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಯ ಬಳಿಕ ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇಂಡಿಯಾ ಒಕ್ಕೂಟದ ಜೊತೆಯೇ ಗುರುತಿಸಿಕೊಂಡಿರುವ ಮತ್ತೊಂದು ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಏಕಾಂಗಿಯಾಗಿ ಸ್ಪರ್ಧಿಸಿದೆ.

370ನೇ ವಿಧಿಯ ರದ್ದತಿ, ಸಂಪೂರ್ಣ ರಾಜ್ಯತ್ವದ ಮರುಸ್ಥಾಪನೆ, ನಿರುದ್ಯೋಗ ಈ ಬಾರಿಯ ಚುನಾವಣೆಯ ಪ್ರಮುಖ ವಿಷಯಗಳಾಗಿತ್ತು.

ಈ ಬಾರಿಯ ಚುನಾವಣೆಯಲ್ಲಿ ಗಂದೇರ್ಬಲ್ ಮತ್ತು ಬುದ್ಗಾಮ್‌ನಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಉಮರ್ ಅಬ್ದುಲ್ಲಾ, ಬಿಜ್‌ಬೆಹರಾದಿಂದ ಸ್ಪರ್ಧಿಸಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ, ಕುಪ್ವಾರ ಮತ್ತು ಹಂದ್ವಾರದಿಂದ ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಾಜದ್ ಲೋನ್, ನೌಶೇರಾದಿಂದ ಬಿಜೆಪಿಯ ರವೀಂದರ್ ರೈನಾ, ನಗ್ರೋಟಾದಿಂದ ಬಿಜೆಪಿಯ ರಾಣಾ ಸಿಂಗ್ ದೇವೇಂದ್ರ ರೈನಾ, ಸೆಂಟ್ರಲ್ ಶಾಲ್ತೆಂಗ್‌ನಿಂದ ಕಾಂಗ್ರೆಸ್‌ನ ತಾರಿಕ್ ಹಮೀದ್ ಕರ್ರಾ ಮತ್ತು ಚನ್ನಪೋರಾದಿಂದ ಸ್ಪರ್ಧಿಸಿರುವ ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷದ ಮುಖ್ಯಸ್ಥ ಸೈಯದ್ ಮೊಹಮ್ಮದ್ ಅಲ್ತಾಫ್ ಬುಖಾರಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಹರಿಯಾಣದಲ್ಲೂ ಇಂದು ಮತ ಎಣಿಕೆ

ಹರಿಯಾಣದಲ್ಲಿ ಅಕ್ಟೋಬರ್ 5ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶೇ.67.9ರಷ್ಟು ಮತದಾನವಾಗಿದೆ. ಇಲ್ಲಿ 2014 ರಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಗೆ ವರದಾನವಾಗುವ ಸಾಧ್ಯತೆ ಇದೆ. ಬಿಜೆಪಿ ತನ್ನ ಎರಡನೇ ಅವಧಿಯ ಮಧ್ಯದಲ್ಲಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ್ದು ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ ಎಂದೂ ಹೇಳಲಾಗ್ತಿದೆ. ಇವೆಲ್ಲವೂ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರೈತ ಹೋರಾಟ ಹರಿಯಾಣ ಚುನಾವಣೆಯ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದ ರೈತ ಸಮುದಾಯಕ್ಕೆ ಬಿಜೆಪಿ ವಿರುದ್ದ ದೊಡ್ಡ ಅಸಮಾಧಾನವಿದೆ. ಕಳೆದ ಎರಡು ಮೂರು ವರ್ಷಗಳಲ್ಲಿ ನಡೆದ ರೈತ ಹೋರಾಟಗಳಲ್ಲಿ ಹರಿಯಾಣದ ರೈತರೇ ಮುಂಚೂಣಿಯಲ್ಲಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರೈತ ಹೋರಾಟದ ಬಿಸಿ ತಟ್ಟಿತ್ತು.

ಈ ಬಾರಿಯ ಚುನಾವಣೆಯಲ್ಲಿ ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರದಲ್ಲಿ ಬಿಜೆಪಿಯ ಮಂಜು ಹೂಡಾ ವಿರುದ್ಧ ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ, ಲಾಡ್ವಾದಲ್ಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಮೇವಾ ಸಿಂಗ್, ಜೂಲಾನಾದಲ್ಲಿ ಕಾಂಗ್ರೆಸ್‌ನ ವಿನೇಶ್ ಫೋಗಟ್ ಮತ್ತು ಬಿಜೆಪಿಯ ಕ್ಯಾಪ್ಟನ್ ಯೋಗೇಶ್, ಬೈರಾಗಿ ಮತ್ತು ಉಚ್ಚನ ಕಾಲನ್‌ನಲ್ಲಿ ಕಾಂಗ್ರೆಸ್‌ನ ಬ್ರಿಜೇಂದ್ರ ಸಿಂಗ್ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ

ಜಮ್ಮು ಕಾಶ್ಮೀರ ಮತ್ತು ಹರಿಯಾಣ ಎರಡೂ ಕಡೆಯೂ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಒಟ್ಟು 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 50-58 ಸ್ಥಾನಗಳೊಂದಿಗೆ ಕಾಂಗ್ರೆಸ್ ಆರಾಮದಾಯಕ ಬಹುಮತ ಪಡೆಯುವ ಸಾಧ್ಯತೆ ಇದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚಿಸುವ ಸಾಧ್ಯತೆ ಇದೆ ಎಂದು ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಹೇಳಿದರೂ, ಕೆಲ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದಿವೆ. ಇಲ್ಲಿ ಲೆಫ್ಟಿನೆಂಟ್ ಗವರ್ನರ್ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಲು ಮುಂದಾಗಿರುವುದು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಆದರೆ, ಐವರ ನಾಮನಿರ್ದೇಶನ ಸಂವಿಧಾನ ವಿರೋಧಿ, ಒಂದು ನಾಮನಿರ್ದೇಶನ ಮಾಡಿದರೆ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ವಿವಿಧ ಪಕ್ಷಗಳು ಎಚ್ಚರಿಕೆ ನೀಡಿವೆ.

ಇದನ್ನೂ ಓದಿ : ಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...