Homeಮುಖಪುಟಜಮ್ಮು-ಕಾಶ್ಮೀರ: ಶಂಕಿತ ಉಗ್ರರಿಂದ ಕಾಶ್ಮೀರಿ ಪಂಡಿತನ ಹತ್ಯೆ

ಜಮ್ಮು-ಕಾಶ್ಮೀರ: ಶಂಕಿತ ಉಗ್ರರಿಂದ ಕಾಶ್ಮೀರಿ ಪಂಡಿತನ ಹತ್ಯೆ

- Advertisement -
- Advertisement -

ಭಾನುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶಂಕಿತ ಉಗ್ರರು ಕಾಶ್ಮೀರಿ ಪಂಡಿತರೊಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆಂದು ವರದಿಯಾಗಿದೆ.

ಮೃತರನ್ನು ಸಂಜಯ್ ಶರ್ಮಾ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಶರ್ಮಾ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರು ತೀವ್ರವಾಗಿ ಗಾಯಗೊಂಡಿದ್ದರಿಂದ ಸಾವನ್ನಪ್ಪಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರ ವಿರುದ್ಧ ನಡೆಯುತ್ತಿರುವ ಉದ್ದೇಶಿತ ದಾಳಿಗಳ ಮತ್ತೊಂದು ಕೃತ್ಯವೇ ಈ ದಾಳಿಯಾಗಿದೆ.

ಆಗಸ್ಟ್ 16 ರಂದು ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಕಾಶ್ಮೀರಿ ಪಂಡಿತ್ ಒಬ್ಬರನ್ನು ಕೊಂದು ಮತ್ತೊಬ್ಬರನ್ನು ಗಾಯಗೊಳಿಸಿದ್ದರು. ಮೃತಪಟ್ಟ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಪಿಂಟು ಕುಮಾರ್. ಬುದ್ಗಾಮ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮತ್ತೊಬ್ಬ ನಾಗರಿಕ ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರರಾದ ರಾಹುಲ್ ಭಟ್ ಅವರನ್ನು ಬುದ್ಗಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಅವರ ಕಚೇರಿಗೆ ನುಗ್ಗಿ ಮೇ 12ರಂದು ಕೊಂದಿದ್ದರು. ರಾಹುಲ್ ಹತ್ಯೆಯ ಬಳಿಕ ಕೇಂದ್ರಾಡಳಿತ ಪ್ರದೇಶದ ಹಲವು ಭಾಗಗಳಲ್ಲಿ ಕಾಶ್ಮೀರಿ ಪಂಡಿತರು ಬೃಹತ್ ಪ್ರತಿಭಟನೆ ನಡೆಸಿದ್ದರು.

ಎರಡು ವಾರಗಳ ನಂತರ, ಬುದ್ಗಾಮ್‌ನ ಚದೂರ ಪಟ್ಟಣದಲ್ಲಿ ಉಗ್ರರು, ಕಾಶ್ಮೀರಿ ಪಂಡಿತ್ ಸಮುದಾಯದ ನಟಿ ಅಮರೀನ್ ಭಟ್ ಅವರನ್ನು ಗುಂಡಿಕ್ಕಿ ಕೊಂದಿದ್ದರು. ದಾಳಿಯ ವೇಳೆ ಅಮರೀನ್‌ ಅವರ ಹತ್ತು ವರ್ಷದ ಸೋದರಳಿಯನಿಗೆ ಗುಂಡುಗಳು ತಾಕಿ ಗಾಯಗಳಾಗಿದ್ದವು.

ಕಳೆದ ಮೂರು ವರ್ಷಗಳಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಎಂಟು ಕಾಶ್ಮೀರಿ ಪಂಡಿತರು ಮತ್ತು ಒಬ್ಬ ಕಾಶ್ಮೀರಿ ರಜಪೂತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಡಿಸೆಂಬರ್ 14 ರಂದು ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ತಿಳಿಸಿದೆ.

370 ನೇ ವಿಧಿಯ ಅಡಿಯಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಆಗಸ್ಟ್ 5, 2019 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ದಾಳಿಗಳು ಗಣನೀಯವಾಗಿ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರವು ಮೇಲ್ಮನೆಗೆ ತಿಳಿಸಿದೆ.

ಆದಾಗ್ಯೂ, 2008 ರಲ್ಲಿ ಪ್ರಧಾನ ಮಂತ್ರಿಗಳ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ನೇಮಕಗೊಂಡ ಕಾಶ್ಮೀರಿ ಪಂಡಿತ್ ನೌಕರರ ಗುಂಪು ಮೇ ತಿಂಗಳಿನಿಂದ ಪ್ರತಿಭಟನೆಗಳನ್ನು ನಡೆಸುತ್ತಿದೆ. ತಮ್ಮನ್ನು ಕಣಿವೆಯಿಂದ ಹೊರಗಿರುವ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಕಸ್ಟಡಿ ಅವಧಿ ಮೇ 31ರವರೆಗೆ ವಿಸ್ತರಿಸಿದ...

0
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಫೆಬ್ರವರಿ 26,...