ಜಮ್ಮು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಶಂಕಿತ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧನನ್ನು 6 ಪ್ಯಾರಾ (ವಿಶೇಷ ಪಡೆ) ಘಟಕದ ಹವಾಲ್ದಾರ್ ಝಂಟು ಅಲಿ ಶೇಖ್ ಎಂದು ಸೇನೆ ಗುರುತಿಸಿದೆ. ಜಮ್ಮು ಕಾಶ್ಮೀರ
“ಅವರ ಅದಮ್ಯ ಧೈರ್ಯ ಮತ್ತು ಅವರ ತಂಡದ ಶೌರ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ. ಈ ದುಃಖದ ಸಮಯದಲ್ಲಿ ನಾವು ಮೃತ ಕುಟುಂಬದೊಂದಿಗೆ ನಿಲ್ಲುತ್ತೇವೆ” ” ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಯೊಬ್ಬರು ಸಾವನ್ನಪ್ಪಿದ ನಂತರ ಕಳೆದ ಎರಡು ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಆಗಿದೆ.
ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಉಧಮ್‌ಪುರದ ದುಡಿ ಬಸಂತ್‌ಗರ್ ಗ್ರಾಮದಲ್ಲಿ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#OpBirliGali
Based on specific intelligence, a joint operation with @JmuKmrPolice was launched today in #Basantgarh, #Udhampur.
Contact was established and a fierce firefight ensued.One of our #Bravehearts sustained grievous injuries in the initial exchange and later succumbed… pic.twitter.com/eojsj5PPuU
— White Knight Corps (@Whiteknight_IA) April 24, 2025
ಶಂಕಿತ ಸ್ಥಳವನ್ನು ಪಡೆಗಳು ತಲುಪುತ್ತಿದ್ದಂತೆ, ಉಗ್ರರು ಅವರ ಮೇಲೆ ಗುಂಡು ಹಾರಿಸಿದರು. ಪಡೆಗಳು ಗುಂಡಿನ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿ, ಎನ್‌ಕೌಂಟರ್‌ಗೆ ಚಾಲನೆ ನೀಡಿವೆ ಎಂದು ವರದಿಯಾಗಿದೆ.
“ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಜಮ್ಮು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಇಂದು ಉಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಪ್ರಾರಂಭಿಸಲಾಗಿದೆ” ಎಂದು ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ. ಉಗ್ರರ ವಿರುದ್ಧ ಭೀಕರ ಗುಂಡಿನ ದಾಳಿ ನಡೆಯಿತು ಎಂದು ಅದು ಹೇಳಿದೆ.
“ನಮ್ಮ ಧೈರ್ಯಶಾಲಿಗಳಲ್ಲಿ ಒಬ್ಬರು ಆರಂಭಿಕ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಅತ್ಯುತ್ತಮ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ ಅವರು ಸಾವನ್ನಪ್ಪಿದರು” ಎಂದು ಸೇನೆ ತಿಳಿಸಿದೆ. ನಿನ್ನೆ ಉರಿ ಸೆಕ್ಟರ್‌ನಲ್ಲಿ ನುಸುಳಲು ಪ್ರಯತ್ನ ಮಾಡುತ್ತಿದ್ದಾಗ ಭದ್ರತಾ ಪಡೆಗಳು ಇಬ್ಬರು ಶಂಕಿತ ಉಗ್ರರನ್ನು ಎನ್‌ಕೌಂಟರ್ ಮಾಡಿದೆ. ಅದರ ನಂತರ ನಿನ್ನೆ ಸಂಜೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿತ್ತು. ಜಮ್ಮು ಕಾಶ್ಮೀರ


