Homeಮುಖಪುಟಜಮ್ಮು ಕಾಶ್ಮೀರ | ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಯೋಧ ಝಂಟು ಅಲಿ ಶೇಖ್ ಹುತಾತ್ಮ

ಜಮ್ಮು ಕಾಶ್ಮೀರ | ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಯೋಧ ಝಂಟು ಅಲಿ ಶೇಖ್ ಹುತಾತ್ಮ

- Advertisement -
- Advertisement -

ಜಮ್ಮು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಶಂಕಿತ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧನನ್ನು 6 ಪ್ಯಾರಾ (ವಿಶೇಷ ಪಡೆ) ಘಟಕದ ಹವಾಲ್ದಾರ್ ಝಂಟು ಅಲಿ ಶೇಖ್ ಎಂದು ಸೇನೆ ಗುರುತಿಸಿದೆ. ಜಮ್ಮು ಕಾಶ್ಮೀರ

“ಅವರ ಅದಮ್ಯ ಧೈರ್ಯ ಮತ್ತು ಅವರ ತಂಡದ ಶೌರ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ. ಈ ದುಃಖದ ಸಮಯದಲ್ಲಿ ನಾವು ಮೃತ ಕುಟುಂಬದೊಂದಿಗೆ ನಿಲ್ಲುತ್ತೇವೆ” ” ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಯೊಬ್ಬರು ಸಾವನ್ನಪ್ಪಿದ ನಂತರ ಕಳೆದ ಎರಡು ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಆಗಿದೆ.

ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಉಧಮ್‌ಪುರದ ದುಡಿ ಬಸಂತ್‌ಗರ್ ಗ್ರಾಮದಲ್ಲಿ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಂಕಿತ ಸ್ಥಳವನ್ನು ಪಡೆಗಳು ತಲುಪುತ್ತಿದ್ದಂತೆ, ಉಗ್ರರು ಅವರ ಮೇಲೆ ಗುಂಡು ಹಾರಿಸಿದರು. ಪಡೆಗಳು ಗುಂಡಿನ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿ, ಎನ್‌ಕೌಂಟರ್‌ಗೆ ಚಾಲನೆ ನೀಡಿವೆ ಎಂದು ವರದಿಯಾಗಿದೆ.

“ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಜಮ್ಮು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಇಂದು ಉಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಪ್ರಾರಂಭಿಸಲಾಗಿದೆ” ಎಂದು ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ.  ಉಗ್ರರ ವಿರುದ್ಧ ಭೀಕರ ಗುಂಡಿನ ದಾಳಿ ನಡೆಯಿತು ಎಂದು ಅದು ಹೇಳಿದೆ.

“ನಮ್ಮ ಧೈರ್ಯಶಾಲಿಗಳಲ್ಲಿ ಒಬ್ಬರು ಆರಂಭಿಕ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಅತ್ಯುತ್ತಮ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ ಅವರು ಸಾವನ್ನಪ್ಪಿದರು” ಎಂದು ಸೇನೆ ತಿಳಿಸಿದೆ. ನಿನ್ನೆ ಉರಿ ಸೆಕ್ಟರ್‌ನಲ್ಲಿ ನುಸುಳಲು ಪ್ರಯತ್ನ ಮಾಡುತ್ತಿದ್ದಾಗ ಭದ್ರತಾ ಪಡೆಗಳು ಇಬ್ಬರು ಶಂಕಿತ ಉಗ್ರರನ್ನು ಎನ್‌ಕೌಂಟರ್ ಮಾಡಿದೆ. ಅದರ ನಂತರ ನಿನ್ನೆ ಸಂಜೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿತ್ತು. ಜಮ್ಮು ಕಾಶ್ಮೀರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...