Homeಮುಖಪುಟಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

- Advertisement -
- Advertisement -

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ ಸೇರಿದ ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಜಮ್ಮುವಿನ ‘ಒಬೆರಾಯ್ ಬುಕ್ ಸರ್ವಿಸ್’ ಸಂಸ್ಥೆಯ ಇಂದರ್ಪಾಲ್ ಸಿಂಗ್ ಹಾಗೂ ನೋಯ್ಡಾ ಮೂಲದ ‘ಡಾಮಿನೆಂಟ್ ಪಬ್ಲಿಷರ್ಸ್’ ಸಂಸ್ಥೆಯ ಅಮರ್‌ದೀಪ್ ಸಿಂಗ್ ಮತ್ತು ಗಿರೀಶ್ ಅರೋರಾ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 6 ರಂದು ಎರಡೂ ಪ್ರಕಾಶನ ಸಂಸ್ಥೆಗಳ ಕಚೇರಿಗಳು ಮತ್ತು ಆವರಣಗಳ ಮೇಲೆ ಪೊಲೀಸರು ನಡೆಸಿದ ಸಂಘಟಿತ ದಾಳಿ ಹಾಗೂ ಶೋಧ ಕಾರ್ಯಚರಣೆಯ ಮುಂದುವರಿದ ಭಾಗವಾಗಿ ಈ ಬಂಧನಗಳು ನಡೆದಿವೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಪುಸ್ತಕಗಳಲ್ಲಿ ಅತ್ಯಂತ “ಅನುಚಿತ ಹಾಗೂ ಆಕ್ಷೇಪಾರ್ಹ ವಿಷಯಗಳನ್ನು” ಸೇರ್ಪಡೆಗೊಳಿಸುವಲ್ಲಿ ಈ ಪ್ರಕಾಶಕರ ನಿರ್ದಿಷ್ಟ ಪಾತ್ರವೇನು ಎಂಬುದರ ಕುರಿತು ತನಿಖಾಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. 

ಹಿಲಾಲ್ ಅಹ್ಮದ್ ಮತ್ತು ಸಂತೋಷ್ ಮೀನಾ ಅವರು ಬರೆದಿರುವ “ಪರ್ಸನಾಲಿಟೀಸ್ ಅಂಡ್ ಲೆಜೆಂಡ್ಸ್ ಆಫ್ ಜೆ & ಕೆ” (Personalities and Legends of J&K) ಹಾಗೂ ಡಾ. ಸುಶಾಂತ್ ಗಿರಿ ಬರೆದಿರುವ “ಗ್ರೇಟ್ ಪರ್ಸನಾಲಿಟೀಸ್ ಆಫ್ ಜಮ್ಮು ಮತ್ತು ಕಾಶ್ಮೀರ್” (Great Personalities of Jammu and Kashmir) ಎಂಬ ಎರಡು ಪುಸ್ತಕಗಳನ್ನು ಶಾಲಾ ಗ್ರಂಥಾಲಯಗಳಿಂದ ಸರ್ಕಾರ ಹಿಂಪಡೆದ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ. ಈ ಪುಸ್ತಕಗಳು ದೇಶವಿರೋಧಿ ಹಾಗೂ ಪ್ರತ್ಯೇಕತಾವಾದಿ ನಿರೂಪಣೆಗಳನ್ನು ಪ್ರಚೋದಿಸುತ್ತಿದ್ದವು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಈ ವಿವಾದದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ನಿರ್ದೇಶನಾಲಯವು ಅಧಿಕೃತ ಆದೇಶವೊಂದನ್ನು ಹೊರಡಿಸಿದ್ದು, ಕಾಶ್ಮೀರ ವಿಭಾಗದಾದ್ಯಂತ ಇರುವ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದ ಖಾಸಗಿ ಶಾಲೆಗಳು ಹಾಗೂ ತರಬೇತಿ ಕೇಂದ್ರಗಳು ತಮ್ಮ ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಮತ್ತು ಯಾವುದೇ ರೀತಿಯ “ಅನುಚಿತ ಅಥವಾ ಆಕ್ಷೇಪಾರ್ಹ ವಿಷಯ”ಗಳಿದ್ದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಮಹತ್ತರ ಲೋಪಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಎಂಟು ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದು, ಒಬ್ಬ ಗುತ್ತಿಗೆ ನೌಕರನನ್ನು ಸೇವೆಯಿಂದ ವಜಾಗೊಳಿಸಿದೆ.

ಪುಸ್ತಕಗಳನ್ನು ಹಿಂಪಡೆದ ನಂತರ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಚೋದನೆ, ಕ್ರಿಮಿನಲ್ ಪಿತೂರಿ, ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಧಕ್ಕೆ ತರುವುದು, ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡುವುದರ ಜೊತೆಗೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ಸೆಕ್ಷನ್ 13 ರ ಅಡಿಯಲ್ಲಿಯೂ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸರ ಮಾಹಿತಿಯಂತೆ, ಈ ನಿಷೇಧಿತ ಪುಸ್ತಕಗಳ ಒಟ್ಟು 251 ಪ್ರತಿಗಳನ್ನು ಜಮ್ಮು, ರಾಂಬನ್, ಉಧಂಪುರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ವಿವಿಧ ಶಾಲೆಗಳಿಗೆ ಈಗಾಗಲೇ ವಿತರಿಸಲಾಗಿತ್ತು. ಪ್ರಸ್ತುತ ಕಾರ್ಯಾಚರಣೆ ನಡೆಸಿ ಎಲ್ಲಾ 251 ಪ್ರತಿಗಳನ್ನು ಯಶಸ್ವಿಯಾಗಿ ಹಿಂಪಡೆಯಲಾಗಿದೆ. ಜಮ್ಮು-ಕಾಶ್ಮೀರ ಸರ್ಕಾರವು ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಆಡಳಿತಾರೂಢ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಪುಸ್ತಕಗಳಲ್ಲಿ ಪ್ರತ್ಯೇಕತಾವಾದವನ್ನು ವೈಭವೀಕರಿಸಲಾಗಿದೆ ಎಂದು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ವಿವಾದಿತ ಪುಸ್ತಕಗಳಲ್ಲೊಂದರಲ್ಲಿ, ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಎಲ್‌ಎಫ್) ಸಹ-ಸಂಸ್ಥಾಪಕ ಮಕ್ಬೂಲ್ ಭಟ್‌ನನ್ನು “ಹುತಾತ್ಮ” ಎಂದು ಬಿಂಬಿಸಲಾಗಿತ್ತು. ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ಡೆಮಾಕ್ರಟಿಕ್ ಫ್ರೀಡಂ ಪಾರ್ಟಿಯ ಸಂಸ್ಥಾಪಕ, ತಮ್ಮ ಜೀವಮಾನದ ಹೆಚ್ಚಿನ ಅವಧಿಯನ್ನು ಭಾರತೀಯ ಜೈಲುಗಳಲ್ಲೇ ಕಳೆದಿದ್ದ ಶಬೀರ್ ಶಾನನ್ನು “ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅತ್ಯುನ್ನತ ಪ್ರಚಾರಕರಲ್ಲಿ ಒಬ್ಬರು” ಎಂದು ವೈಭವೀಕರಿಸಿ ಬರೆಯಲಾಗಿತ್ತು.

ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಆಕ್ಷೇಪಾರ್ಹ ಪುಸ್ತಕಗಳ ವಿರುದ್ಧ ವ್ಯಾಪಕ ಕ್ರಮ ಕೈಗೊಳ್ಳಲಾಗುತ್ತಿದೆ. ಆಗಸ್ಟ್ ಆರಂಭದಲ್ಲಿ, ಗೃಹ ಇಲಾಖೆಯು ಪ್ರಮುಖ ಶಿಕ್ಷಣ ತಜ್ಞರು, ಇತಿಹಾಸಕಾರರು, ಪತ್ರಕರ್ತರು ಮತ್ತು ಬರಹಗಾರರು ಬರೆದಿದ್ದ 25 ಪುಸ್ತಕಗಳನ್ನು ನಿಷೇಧಿಸಿತ್ತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), 2023 ರ ಸೆಕ್ಷನ್ 98 ರ ಅಡಿಯಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಲಾಗಿತ್ತು. ಸರ್ಕಾರದ ಈ ಕ್ರಮವು ಹಲವಾರು ಲೇಖಕರು ಮತ್ತು ಶಿಕ್ಷಣ ತಜ್ಞರಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಸರ್ಕಾರವು ಕಾಶ್ಮೀರದ ನೈಜ ಇತಿಹಾಸವನ್ನು ಅಳಿಸಿಹಾಕಲು, ಪರ್ಯಾಯ ದೃಷ್ಟಿಕೋನಗಳನ್ನು ಹತೋಟಿಗೆ ತರಲು ಮತ್ತು ಶೈಕ್ಷಣಿಕ ಸ್ವಾತಂತ್ರ್ಯವನ್ನು ಕಸಿಯಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...