Homeಮುಖಪುಟಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

ಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯನ್ನು ವೀಕ್ಷಿಸಲು ವಿದೇಶಿ ಪ್ರತಿನಿಧಿಗಳನ್ನು ಆಹ್ವಾನಿಸುವ ಕೇಂದ್ರ ಸರ್ಕಾರದ ಕ್ರಮವನ್ನು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಬುಧವಾರ ಟೀಕಿಸಿದ್ದು, ಚುನಾವಣೆಗಳು ಭಾರತದ ಆಂತರಿಕ ವಿಷಯವಾಗಿದೆ ಎಂದು ಹೇಳಿದ್ದಾರೆ.ಜಮ್ಮು ಕಾಶ್ಮೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಲ್ಲಿ ಚುನಾವಣೆಗಳನ್ನು ಪರೀಕ್ಷಿಸಲು ವಿದೇಶಿಯರನ್ನು ಏಕೆ ಕೇಳಬೇಕು ಎಂದು ನನಗೆ ತಿಳಿದಿಲ್ಲ. ವಿದೇಶಿ ಸರ್ಕಾರಗಳು ಪ್ರತಿಕ್ರಿಯಿಸಿದಾಗ, ಭಾರತ ಸರ್ಕಾರವು ‘ಇದು ಭಾರತದ ಆಂತರಿಕ ವಿಷಯ’ ಎಂದು ಹೇಳುತ್ತದೆ. ಈಗ ಇದ್ದಕ್ಕಿದ್ದಂತೆ ಅವರು ವಿದೇಶಿ ವೀಕ್ಷಕರು ನಮ್ಮ ಚುನಾವಣೆಗೆ ಬಂದು ನೋಡಬೇಕೆಂದು ಬಯಸುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಇದನ್ನೂಓದಿ: ಬದ್ಲಾಪುರ ಲೈಂಗಿಕ ದೌರ್ಜನ್ಯ ಎನ್‌ಕೌಂಟರ್ ಪ್ರಕರಣ| ಆರೋಪಿ ತಲೆಗೆ ಗುಂಡು, ರಕ್ತಸ್ರಾವದಿಂದ ಸಾವು: ಶವಪರೀಕ್ಷೆ ವರದಿ

ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಗಳು “ನಮ್ಮ ಆಂತರಿಕ ವಿಷಯ”ವಾಗಿದ್ದು, “ನಮಗೆ ಅವರ ಪ್ರಮಾಣಪತ್ರ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಭಾರತ ಸರ್ಕಾರ ಮಾಡಿದ ಎಲ್ಲಾ ತೊಂದರೆಯ ಹೊರತಾಗಿಯೂ ಜನರು ಮತದಾನದಲ್ಲಿ ಭಾಗವಹಿಸಿದ್ದು ಸರ್ಕಾರದ ಕಾರಣಕ್ಕಲ್ಲ. ಅವರು ಜನರನ್ನು ಅವಮಾನಿಸಿದ್ದಾರೆ, ಅವರು ಜನರನ್ನು ಬಂಧಿಸಲು ಮತ್ತು ಕಿರುಕುಳ ನೀಡಲು ಸರ್ಕಾರದ ಎಲ್ಲಾ ಯಂತ್ರವನ್ನು ಬಳಸಿದ್ದಾರೆ ಎಂದು ಒಮರ್ ಹೇಳಿದ್ದಾರೆ.ಜಮ್ಮು ಕಾಶ್ಮೀರ

“ಅದರ ನಡುವೆಯೂ, ಜನರು ಬಂದು ಚುನಾವಣೆಯಲ್ಲಿ ಭಾಗವಹಿಸುತ್ತಿದ್ದಾರೆ. ಆದ್ದರಿಂದ, ಇದು ಭಾರತ ಸರ್ಕಾರವು ಹೈಲೈಟ್ ಮಾಡಬೇಕಾದ ವಿಷಯವಲ್ಲ” ಅವರು ಹೇಳಿದ್ದಾರೆ.

ಜುಮ್ಮುಕಾಶ್ಮೀರದಲ್ಲಿ ನಡೆಯುತ್ತಿರುವ ಚುನಾವಣೆಗಳನ್ನು ವೀಕ್ಷಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಆಹ್ವಾನದ ಮೇರೆಗೆ ನವದೆಹಲಿ ಮೂಲದ ರಾಯಭಾರಿಗಳ 16 ರಾಜತಾಂತ್ರಿಕರ ನಿಯೋಗ ಬುಧವಾರ ರಾಜ್ಯಕ್ಕೆ ಆಗಮಿಸಿದೆ.

ಜಮ್ಮುಕಾಶ್ಮೀರದಲ್ಲಿ 10 ವರ್ಷಗಳ ನಂತರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಇದು ಮೊದಲನೆಯ ಚುನಾವಣೆಯಾಗಿದೆ. “ಜಮ್ಮು ಕಾಶ್ಮೀರದ ಜನರು ಚುನಾವಣೆಗಾಗಿ 10 ವರ್ಷಗಳಿಂದ ಕಾಯುತ್ತಿದ್ದಾರೆ.” ಎಂದು ಎನ್‌ಸಿ ಉಪಾಧ್ಯಕ್ಷ ಒಮರ್ ಹೇಳಿದ್ದಾರೆ.

ವಿಡಿಯೊ ನೋಡಿ: LIVE : ಕ್ರಾಂತಿಕಾರಿ ಪ್ರಜಾಕವಿ, ಗಾಯಕ ಗದ್ದರ್‌ ಪ್ರಥಮ ಪರಿನಿಬ್ಬಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...