Homeಮುಖಪುಟಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ...

ಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ…

- Advertisement -
- Advertisement -

ಜನವರಿ 8ರ ಭಾನುವಾರದಂದು ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿಯ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ನಾಡು-ನುಡಿ ಒಳಗೊಳ್ಳುವ ಪರಂಪರೆಯ ಹೊರತು ಯಾರನ್ನು, ಯಾವುದನ್ನು ಹೊರಗಿಡುವ ಸಂಕುಚಿತ ಮನಸ್ಥಿತಿಯಲ್ಲ ಎಂಬುದನ್ನು ಸಾರಲು ನಡೆಯುತ್ತಿರುವ ಸಮ್ಮೇಳನಕ್ಕೆ ‘ಸಂತ ಶಿಶುನಾಳ ಶರೀಫ ಮತ್ತು ಗುರು ಗೋವಿಂದ ಭಟ್ಟ’ ಸಭಾಂಗಣವೆಂದು ಹೆಸರಿಡಲಾಗಿದೆ. ಇತ್ತೀಚಿಗೆ ನಿಧನರಾದ ಖ್ಯಾತ ಪತ್ರಕರ್ತರು ಮತ್ತು ಲೇಖಕರಾದ ಎಂ.ಎಸ್ ಪ್ರಭಾಕರರವರ ನೆನಪಿನಲ್ಲಿ ‘ಕಾಮರೂಪಿ’ ದ್ವಾರ ಸಿದ್ಧಪಡಿಸಲಾಗಿದೆ.

ಭಾನುವಾರ ಬೆಳಿಗ್ಗೆ 9 ಗಂಟೆಗೆ ಕನ್ನಡ ಧ್ಜಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ನೀಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ್, ಶಿವರಾಮೇಗೌಡ ಮತ್ತು ಬಿ.ಎನ್ ಜಗದೀಶರವರು ಪಾಲ್ಗೊಳ್ಳಲಿದ್ದಾರೆ. 9.30ಕ್ಕೆ ‘ಬಂಡಾಯದ ಗೆರೆಗಳು: ವ್ಯಂಗ್ಯಚಿತ್ರ ಮತ್ತು ಪೋಸ್ಟರ್‌ಗಳ ಪ್ರದರ್ಶನ’ ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿಗಳಾದ ರಘುನಂದನರವರು ಉದ್ಘಾಟಿಸಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರರಾದ ಪಿ.ಮಹಮದ್, ದಿನೇಶ್ ಕುಕ್ಕುಜಡ್ಕ, ಸತೀಶ್ ಆಚಾರ್ಯ, ಪಂಜು ಗಂಗೊಳ್ಳಿ, ಬಾದಲ್ ನಂಜುಂಡಸ್ವಾಮಿ, ಚಂದ್ರಶೇಖರ್ ಶೆಟ್ಟಿ ಭಾಗವಹಿಸಲಿದ್ದಾರೆ. ಚಿತ್ರಕಲಾವಿದರಾದ ಚೇತನ್ ಪುತ್ತೂರು, ಸರೋವರ್ ಬೆಂಕಿಕೆರೆ, ಉದಯ ಗಾಂವ್ಕರ್, ನವೀನ್ ಹಾಸನ, ವಿಶ್ವವಿನ್ಯಾಸ, ಸುನೈಫ್, ರೂಮಿ ಹರೀಶ್, ರೂಪಶ್ರೀ ಕಲ್ಲಿಗನೂರು, ಚರಿತಾ ಮೈಸೂರು, ನಭಾ ಒಕ್ಕುಂದ, ಸನತ್ ಕುಮಾರ್, ರಾಜೇಂದ್ರ ಪ್ರಸಾದ್ ಮತ್ತು ಸಾತ್ವಿಕ್ ನೆಲ್ಲಿತೀರ್ಥ ಉಪಸ್ಥಿತರಿರುತ್ತಾರೆ.

ಬೆಳಿಗ್ಗೆ 10 ಗಂಟೆಗೆ ಚಂಪಾ ವೇದಿಕೆಯಲ್ಲಿ ಜನಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಕವಿಗಳು ಮತ್ತು ಲೇಖಕರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರು ಉದ್ಟಾಟಿಸಲಿದ್ದು, ಲೇಖಕಿ ಬಾನು ಮುಶ್ತಾಕ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ದಿಕ್ಸೂಚಿ ಭಾಷಣ ಮಾಡಿದರೆ, ಮುಖ್ಯ ಅತಿಥಿಗಳಾಗಿ ಪ್ರೊ.ಎಸ್.ಜಾಫೆಟ್, ಜಾಣಗೆರೆ ವೆಂಕಟರಾಮಯ್ಯ, ಚೆನ್ನಿ ಜನಾರ್ದನ್, ಅಗ್ನಿಶ್ರೀಧರ್, ಅಕ್ಕೈ ಪದ್ಮಶಾಲಿ, ವಡ್ಡಗೆರೆ ನಾಗರಾಜಯ್ಯ ಭಾಗವಹಿಸಲಿದ್ದಾರೆ. ಭೈರಪ್ಪ ಹರೀಶ್ ಕುಮಾರ್‌ರವರು ಪ್ರಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ಮಧ್ಯಾಹ್ನ 12.30 ರಿಂದ 1.30ರವರೆಗೆ ನಡೆಯುವ ಸಾಹಿತ್ಯ, ಪ್ರಭುತ್ವ ಮತ್ತು ಬಹುತ್ವದ ಕುರಿತ ವಿಚಾರ ಗೋಷ್ಠಿಯಲ್ಲಿ ಡಾ. ಮಹಮ್ಮದ್ ಮುಸ್ತಾಫಾ ವಿಷಯ ಮಂಡನೆ ಮಾಡಿದರೆ ಅಕ್ಷತಾ ಕೆ ಸಿಯವರು ಪ್ರತಿಕ್ರಿಯೆ ನೀಡಲಿದ್ದಾರೆ. ಕನ್ನಡ ನಾಡು ನುಡಿ – ಟಿಪ್ಪು ಕೊಡುಗೆಗಳು ವಿಷಯದ ಕುರಿತು ಟಿ ಗುರುರಾಜ್ ವಿಷಯ ಮಂಡನೆ ಮಾಡಿದರೆ ಕಲೀಂ ಪಾಷಾರವರು ಪ್ರತಿಕ್ರಿಯೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಲಿಂಗದೇವರು ಹಳೆಮನೆ ಸಂಪಾದಕತ್ವದ ‘ಧೀರ ಟಿಪ್ಪು ಲಾವಣಿಗಳು ಮತ್ತು ಟಿ ಗುರುರಾಜ್ ಬರೆದಿರುವ ‘ನಮ್ಮ ಟಿಪ್ಪು – ವದಂತಿ ಮತ್ತು ಸತ್ಯ ಸಂಗತಿ’ ಪುಸ್ತಕಗಳ ಬಿಡುಗಡೆ ನಡೆಯಲಿದೆ. ನಾ ದಿವಾಕರ್‌ರವರು ಗೋಷ್ಟಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 1.30 ರಿಂದ 2:00ರವರೆ ಆಹಾರ ಗೋಷ್ಠಿ ನಡೆಯಲಿದೆ. ಆಹಾರದ ಮೇಲಿನ ರಾಜಕಾರಣ ಮತ್ತು ದೌರ್ಜನ್ಯ ವಿಷಯದ ಕುರಿತು ರಂಗನಾಥ ಕಂಟನಕುಂಟೆ ಮತ್ತು ಪಲ್ಲವಿ ಇಡೂ‌ರುರವರು ವಿಷಯ ಮಂಡಿಸುತ್ತಾರೆ. ಊಟದ ಕೌಂಟರ್‌ನಲ್ಲಿ ಬಹುತ್ವವನ್ನು ಸಾರು ಉಪ್ಪಿನಕಾಯಿ, ತರಕಾರಿ ಪಲ್ಯ, ಅನ್ನ, ಮೀನು ಸಾರು, ತರಕಾರಿ ಸಾಂಬರ್, ಗೀ ರೈಸ್, ದಾಲ್, ಚಿಕನ್ ಕಬಾಬ್ ಮತ್ತು ಪಾಯಸ ಇರುವ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

ಮದ್ಯಾಹ್ನ 2:00 ರಿಂದ 3:00ವರೆಗೆ ಕವಿಗೋಷ್ಠಿ ನಡೆಯಲಿದ್ದು, ಬಂಜಗೆರೆ ಜಯಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎಚ್ ಆರ್ ಸುಜಾತರವರು ಆಶಯ ಮಾತುಗಳನ್ನಾಡಿದರೆ, ದೀಪದ ಮಲ್ಲಿ, ದಾದಪೀರ್ ಜೈಮನ್, ಚಾಂದ್ ಪಾಷಾ, ಪ್ರಕಾಶ್ ಮಂಟೇದಾ, ಟೀನಾ ಶಶಿಕಾಂತ್, ಸಿರಾಜ್ ಬಿಸ್ರಳ್ಳಿ, ಫಾತಿಮಾ ರಾಲಿಯಾ, ಹಾಜಿರ ಖಾನಂ, ಚಾಂದಿನಿ, ಶಿವರಾಜ್ ಮೋತಿ, ಪಂಚಮಿ ಎಸ್, ಸಂಘಮಿತ್ರೆ, ಮಂಜುನಾಥ ಮಾಗೊದಿ, ಪುನೀತ್, ಧನಂಜಯ ದೇವರಹಳ್ಳಿ, ವಿಕಾಸ್ ಮೌರ್ಯ, ರೂಮಿ ಹರೀಶ್ ಮತ್ತು ಪ್ರವೀಣ್ ಬಿ ಎಂ ಕವನ ವಾಚಿಸಲಿದ್ದಾರೆ.

ಸೌಹಾರ್ದತೆ ಮತ್ತು ಕನ್ನಡತನ ವಿಷಯದ ಕುರಿತ ಮಧ್ಯಾಹ್ನದ ಗೋಷ್ಟಿಯಲ್ಲಿ ಚಿಂತಕರಾದ ರಾಜೇಂದ್ರ ಚೆನ್ನಿಯವರು ವಿಷಯ ಮಂಡನೆ ಮಾಡಲಿದ್ದಾರೆ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದಾಳಿ : ಸಾಹಿತ್ಯ ಲೋಕದ ಜವಾಬ್ದಾರಿಗಳು ವಿಷಯದ ಕುರಿತು ಮಾವಳ್ಳಿ ಶಂಕರ್ ಮುನೀರ್ ಕಾಟಿಪಳ್ಳ ವಿಷಯ ಮಂಡನೆ ಮಾಡಲಿದ್ದಾರೆ. ಕನ್ನಡವನ್ನು ಬೆಳಗಿಸಿದ ಕ್ರೈಸ್ತ ಮಿಷನರಿಗಳು ವಿಷಯದ ಕುರಿತು ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ವಿಷಯ ಮಂಡನೆ ಮಾಡಿದರೆ ಪ್ರಿಯಾಂಕ ಮಾವಿನಕರ್ ಪ್ರತಿಕ್ರಿಯೆ ನೀಡಲಿದ್ದಾರೆ.

ಸಂಜೆ 5:00 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಡಾ. ಜಿ ರಾಮಕೃಷ್ಣರವರು ಅಧ್ಯಕ್ಷತೆ ವಹಿಸಿದರೆ ಡಾ ಕೆ ಮರುಳಸಿದ್ದಪ್ಪನವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿ. ಬಸವಲಿಂಗಯ್ಯ, ಪಿಚ್ಚಳ್ಳಿ ಶ್ರೀನಿವಾಸ್, ದು. ಸರಸ್ವತಿ, ಯು. ಟಿ ಫರ್ಜಾನ, ವಸಂತರಾಜ್, ಅನಂತ್ ನಾಯಕ್, ರವಿಕುಮಾರ್ ಟೆಲೆಕ್ಸ್ ಭಾಗವಹಿಸಲಿದ್ದಾರೆ.

ಬೀದಿಗೆ ಬರಲಿ ಕಲೆ – ಸಾಹಿತ್ಯ ಗೋಷ್ಟಿಯಲ್ಲಿ ಸಮುದಾಯ ಬೆಂಗಳೂರು ವತಿಯಿಂದ ಬೀದಿ ನಾಟಕ ನಡೆಯಲಿದೆ. ಅದಕ್ಕೂ ಮೊದಲು ಗುಂಡಣ್ಣ ಚಿಕ್ಕಮಗಳೂರುರವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮ್ಮೇಳನ ಆಯ ವ್ಯಯ ವಿವರ ಘೋಷಿಸಬೇಕಿತ್ತು. ಅಂದಾಜು ವೆಚ್ಚ ಮಾಹಿತಿ. ಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧದ ಸದರಿ ಸಮ್ಮೇಳನದ ಕ್ರಿಯಾಯೋಜನೆಯನ್ನೂ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು.

  2. ಕಾತರದಿಂದ ಕಾಯುತ್ತಿರುವ ಜನ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ; ಜಯಧ್ವನಿ ಮೊಳಗಲಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...