Homeಮುಖಪುಟಒಬಿಸಿ ಮೀಸಲಾತಿ ಜಾರಿ ಬಳಿಕ ಜನಸಂಘವು ಕರ್ಪೂರಿ ಠಾಕೂರ್ ಸರ್ಕಾರವನ್ನು ಉರುಳಿಸಿತು: ಮೋದಿಯ...

ಒಬಿಸಿ ಮೀಸಲಾತಿ ಜಾರಿ ಬಳಿಕ ಜನಸಂಘವು ಕರ್ಪೂರಿ ಠಾಕೂರ್ ಸರ್ಕಾರವನ್ನು ಉರುಳಿಸಿತು: ಮೋದಿಯ ಕರ್ಪೂರಿ ಗ್ರಾಮ ಭೇಟಿಗೆ ಕಾಂಗ್ರೆಸ್ ಟೀಕೆ

- Advertisement -
- Advertisement -

ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಹಳೆ ವಿಷಯಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಕ್ರವಾರ (ಅ.24) ಪೋಸ್ಟ್ ಹಾಕಿರುವ ರಾಷ್ಟ್ರೀಯ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “1979ರ ಏಪ್ರಿಲ್‌ನಲ್ಲಿ ಜನಸಂಘವು ಕರ್ಪೂರಿ ಠಾಕೂರ್ ಅವರ ಬಿಹಾರ ಸರ್ಕಾರವನ್ನು ಉರುಳಿಸಿರುವುದು ಸತ್ಯ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು, “ಆಗ ಕರ್ಪೂರಿ ಠಾಕೂರ್ ಅವರನ್ನು ಆರ್‌ಎಸ್‌ಎಸ್‌ ಮತ್ತು ಜನಸಂಘದ ನಾಯಕರು ಅತ್ಯಂತ ಕೆಟ್ಟದಾಗಿ ನಿಂದಿಸಿದ್ದರು ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಕೇಳಿದ್ದಾರೆ.

“ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಒದಗಿಸುವ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮತ್ತು ರಾಜ್ಯದಲ್ಲಿನ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ? ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಏಪ್ರಿಲ್ 28, 2024ರಂದು ಪ್ರಧಾನ ಮಂತ್ರಿಯವರು ಜಾತಿ ಗಣತಿಗಾಗಿ ಒತ್ತಾಯಿಸಿದವರನ್ನು ‘ನಗರ ನಕ್ಸಲರು’ ಎಂದಿರುವುದು ಸತ್ಯವಲ್ಲವೇ?, ಸಂಸತ್ತಿನಲ್ಲಿ (ಜುಲೈ 20, 2021) ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ (ಸೆಪ್ಟೆಂಬರ್ 21, 2021) ಅವರ ಸರ್ಕಾರವು ಜಾತಿ ಗಣತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿತಲ್ಲವೇ? ಎಂದಿದ್ದಾರೆ.

“ಭಾರತದ ಸಂವಿಧಾನದಡಿಯಲ್ಲಿ ಬಿಹಾರದ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು ಮತ್ತು ಇಬಿಸಿಗಳಿಗೆ ಶೇಕಡ 65ರಷ್ಟು ಮೀಸಲಾತಿ ಕಾನೂನಿಗೆ ರಕ್ಷಣೆ ನೀಡಲು ಪ್ರಧಾನಿ ಮೋದಿ ಮತ್ತು ಬಿಹಾರದ ಅವರ ‘ಟ್ರಬಲ್ ಇಂಜಿನ್ ಸರ್ಕಾರ’ ಏನೂ ಮಾಡಿಲ್ಲ ಎಂಬುದು ಸತ್ಯವಲ್ಲವೇ. ಕಾಂಗ್ರೆಸ್ ಸರ್ಕಾರ ಸೆಪ್ಟೆಂಬರ್ 1994ರಲ್ಲೇ  ತಮಿಳುನಾಡಿನಲ್ಲಿ ಇದೇ ರೀತಿಯ ಕಾನೂನಿಗೆ ರಕ್ಷಣೆ ಒದಗಿಸಿದೆ” ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಬಿಹಾರದ ಸಮಸ್ತಿಪುರ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಶುಕ್ರವಾರ ಎರಡು ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳವಾದ ಕರ್ಪುರಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಬಿಹಾರದ ಪ್ರಸಿದ್ದ ರಾಜಕೀಯ ನಾಯಕ ಕರ್ಪೂರಿ ಠಾಕೂರ್ ಅವರಿಗೆ ಕಳೆದ ವರ್ಷ ಎನ್‌ಡಿಎ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿತ್ತು.

ಬಿಹಾರ ಚುನಾವಣೆ: ಆರ್‌ಜೆಡಿ ಬೆಂಬಲಿಸಿ ತಮ್ಮ ನಾಮಪತ್ರ ಹಿಂಪಡೆದ ನಾಲ್ವರು ಮಹಾಘಟಬಂಧನ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...