Homeಮುಖಪುಟ'ಜನ ಗಣ ಮನ' ಮತ್ತು 'ವಂದೇ ಮಾತರಂ' ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

- Advertisement -
- Advertisement -

ರಾಷ್ಟ್ರಗೀತೆ ‘ಜನ ಗಣ ಮನ’ದೊಂದಿಗೆ ‘ವಂದೇ ಮಾತರಂ’ಗೆ ಕೂಡಾ ಸಮಾನ ಸ್ಥಾನಮಾನ ನೀಡಬೇಕು ಎಂಬ ಅರ್ಜಿಗೆ ಪ್ರತಿಕ್ರಿಯಿಸಿರುವ ಒಕ್ಕೂಟ ಸರ್ಕಾರವು, ‘‘ಎರಡೂ ಸಮಾನ ಹಂತದಲ್ಲಿ ಇದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಎರಡಕ್ಕೂ ಸಮಾನ ಗೌರವ ನೀಡಬೇಕು” ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

“..ಭಾರತದ ಜನರ ಭಾವನೆಗಳು ಮತ್ತು ಮನಸ್ಸಿನಲ್ಲಿ ಜನಗಣಮಣ ವಿಶಿಷ್ಟ ಮತ್ತು ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ” ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವಾಲಯವು ಹೈಕೋರ್ಟ್‌ಗೆ ನೀಡಿದ ತನ್ನ ಉತ್ತರದಲ್ಲಿ, ಜನವರಿ 24, 1950 ರಂದು ಭಾರತದ ಸಂವಿಧಾನ ಸಭೆಯ ಅಧ್ಯಕ್ಷರು ‘ಜನ ಗಣ ಮನ’ ವನ್ನು ಭಾರತದ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡರು. ರಾಷ್ಟ್ರಗೀತೆಯನ್ನು ನುಡಿಸುವ ಅಥವಾ ಹಾಡಬೇಕಾದ ವಿಧಾನ ಮತ್ತು ಸಂದರ್ಭಗಳಿಗೆ ಸಂಬಂಧಿಸಿದಂತೆ ‘ಭಾರತದ ರಾಷ್ಟ್ರಗೀತೆಗೆ ಸಂಬಂಧಿಸಿದ ಆದೇಶಗಳನ್ನು’ ಹೊರಡಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ‘ಹಲೋ’ ಪಾಶ್ಚಿಮಾತ್ಯ; ಮೊಬೈಲ್ ಸಂಭಾಷಣೆ ವೇಳೆ ‘ವಂದೇ ಮಾತರಂ’ ಬಳಸಿ!: ಮಹಾರಾಷ್ಟ್ರ ಸರ್ಕಾರ

1971 ರಲ್ಲಿ, ರಾಷ್ಟ್ರಗೀತೆ ಹಾಡುವುದನ್ನು ತಡೆಯುವ ಅಥವಾ ಅಂತಹ ಗಾಯನದಲ್ಲಿ ತೊಡಗಿರುವ ಯಾವುದೇ ಸಭೆಗೆ ಅಡ್ಡಿಪಡಿಸುವ ಕ್ರಮವನ್ನು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ ಕಾಯಿದೆ, 1971 ರ ಮೂಲಕ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಯಿತು.

ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆಯನ್ನು ಒಂದೇ ರೀತಿ ನಡೆಸಿಕೊಳ್ಳಬೇಕು ಮತ್ತು ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗೆ ಮಾರ್ಗಸೂಚಿಗಳನ್ನು ರೂಪಿಸಲು ಹಾಗೂ ಅದಕ್ಕೆ ಭಾರತದ ರಾಷ್ಟ್ರಗೀತೆಗೆ ಸಮಾನವಾದ ಗೌರವ ಮತ್ತು ಸ್ಥಾನಮಾನವನ್ನು ನೀಡುವಂತೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಗೆ ಒಕ್ಕೂಟ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ವಿಷಯದಲ್ಲಿ ರಾಷ್ಟ್ರಗೀತೆಯ ರೀತಿಯಂತೆ ಸರ್ಕಾರ ದಂಡದ ನಿಬಂಧನೆಗಳನ್ನು ಮಾಡಿಲ್ಲ ಮತ್ತು ಅದನ್ನು ಯಾವ ಸಂದರ್ಭಗಳಲ್ಲಿ ಹಾಡಬಹುದು ಅಥವಾ ನುಡಿಸಬಹುದು ಎಂಬ ಬಗ್ಗೆ ಯಾವುದೇ ಸೂಚನೆಗಳನ್ನು ನೀಡಲಾಗಿಲ್ಲ ಎಂದು ಒಕ್ಕೂಟ ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಜನವರಿ 17, 2017 ರಂದು ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪಿನಲ್ಲಿ, “ಭಾರತದ ಸಂವಿಧಾನದ 51 ಎ (ಎ) ವಿಧಿಯು ‘ರಾಷ್ಟ್ರೀಯ ಗೀತೆ’ಯನ್ನು ಉಲ್ಲೇಖಿಸುವುದಿಲ್ಲ. ಇದು ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಮಾತ್ರ ಉಲ್ಲೇಖಿಸುತ್ತದೆ” ಎಂದು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...